ತುಳು ನುಡಿಗೆ ‘ಹೆಚ್ಚುವರಿ ಅಧಿಕೃತ ಭಾಷೆ’ ಮಾನ್ಯತೆ ಘೋಷಿಸಿ: ಕರವೇ ಆಗ್ರಹ

Date:

ಮಂಗಳೂರಿನಲ್ಲಿ ನಾಳೆ ನಡೆಯಲಿರುವ ರಾಜ್ಯ ಸರ್ಕಾರದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ, ಕರಾವಳಿಯ ತುಳು ಮಾತನಾಡುವ ಪ್ರದೇಶಗಳಲ್ಲಿ ತುಳು ನುಡಿಗೆ ‘ಹೆಚ್ಚುವರಿ ಅಧಿಕೃತ ಭಾಷೆ’ಯ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ಸರ್ಕಾರ ಘೋಷಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ.

- Advertisement -

​ಕನ್ನಡದ ಸೋದರ ನುಡಿಯಾಗಿರುವ ತುಳುವಿನ ಉಳಿವು, ಬೆಳವಣಿಗೆ ಹಾಗೂ ಗೌರವಕ್ಕಾಗಿ ತುಳುವರು ಅನೇಕ ವರ್ಷಗಳಿಂದ ಮಂಡಿಸುತ್ತಿರುವ ಈ ನ್ಯಾಯಯುತ ಹಕ್ಕೊತ್ತಾಯಕ್ಕೆ ಕರವೇಯ ಸಂಪೂರ್ಣ ಬೆಂಬಲವಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕರಾವಳಿ ಕರ್ನಾಟಕದ ನೆಲದಲ್ಲಿ ಸಾವಿರಾರು ವರ್ಷಗಳಿಂದ ಕನ್ನಡ ಮತ್ತು ತುಳು ಭಾಷೆಗಳು ಜೊತೆಯಾಗಿಯೇ ಬೆಳೆದು ಬಂದಿವೆ. ಕನ್ನಡದ ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಗೆ ತುಳುವರು ನೀಡಿರುವ ಕೊಡುಗೆ ಅಪಾರವಾದದ್ದು. ಇವೆರಡೂ ನುಡಿಗಳ ನಡುವೆ ಅತ್ಯಂತ ಗಾಢವಾದ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಬಂಧವಿದೆ ಎಂದು ಅವರು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

​ತುಳು ಕೇವಲ ಒಂದು ಸಂವಹನದ ಭಾಷೆಯಲ್ಲ; ಅದು ಕರಾವಳಿ ಭಾಗದ ಜನರ ಬದುಕು, ಜನಪದ, ಕಲೆ, ಸಾಹಿತ್ಯ, ಆಚರಣೆ, ನಂಬಿಕೆ ಮತ್ತು ಇತಿಹಾಸದ ಜೀವಂತ ಅಭಿವ್ಯಕ್ತಿಯಾಗಿ ಬೇರೂರಿದೆ. ಯಕ್ಷಗಾನ, ದೈವಾರಾಧನೆ ಸೇರಿದಂತೆ ಕರಾವಳಿಯ ಅನೇಕ ಶ್ರೀಮಂತ ಕಲಾ ಪರಂಪರೆಗಳೊಂದಿಗೆ ತುಳು ನುಡಿ ಅವಿನಾಭಾವ ಸಂಬಂಧ ಹೊಂದಿದೆ. ಹೀಗಾಗಿ, ತುಳುವನ್ನು ಉಳಿಸಿ ಬೆಳೆಸುವುದೆಂದರೆ ಅದರೊಂದಿಗೆ ಬೆಸೆದುಕೊಂಡಿರುವ ಅಪಾರ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿದಂತೆ. ಸರ್ಕಾರ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿದರೆ, ಆ ಭಾಗದ ಜನರಿಗೆ ತಮ್ಮ ತಾಯಿನುಡಿಯಲ್ಲೇ ಸರ್ಕಾರಿ ಸೇವೆಗಳನ್ನು ಪಡೆಯಲು ಅತ್ಯಂತ ಸಹಕಾರಿಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

​ರಾಜ್ಯಮಟ್ಟದ ಮಾನ್ಯತೆಯ ಜೊತೆಗೆ, ತುಳು ನುಡಿಗೆ ಸಂವಿಧಾನದ 8ನೇ ಅನುಸೂಚಿಯಲ್ಲಿ (ಪರಿಚ್ಛೇದ) ಸ್ಥಾನ ನೀಡಬೇಕೆಂದು ನಾರಾಯಣಗೌಡರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಪ್ರಸ್ತುತ 8ನೇ ಅನುಸೂಚಿಯಲ್ಲಿ 22 ಭಾಷೆಗಳಿದ್ದು, ತುಳು ಹಾಗೂ ಕೊಡವ ಭಾಷೆಗಳನ್ನು ಈ ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. 2003ರಲ್ಲಿ ಸೀತಾಕಾಂತ ಮೊಹಾಪಾತ್ರ ಅವರ ನೇತೃತ್ವದಲ್ಲಿ ರಚನೆಯಾಗಿದ್ದ ಮಾನದಂಡ ರೂಪಿಸುವ ಸಮಿತಿಯು 2004ರಲ್ಲೇ ವರದಿ ಸಲ್ಲಿಸಿದೆ. ಸ್ವತಃ ಕರ್ನಾಟಕ ಸರ್ಕಾರವೇ ತುಳು ಮತ್ತು ಕೊಡವವನ್ನು 8ನೇ ಅನುಸೂಚಿಗೆ ಸೇರಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ, ಈವರೆಗೆ ಈ ಬೇಡಿಕೆ ಈಡೇರಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

​ಮೊದಲಿನಿಂದಲೂ ‘ವಿವಿಧತೆಯಲ್ಲಿ ಏಕತೆ’ಯನ್ನು ಬಲವಾಗಿ ಪ್ರತಿಪಾದಿಸುತ್ತಾ ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯು, ಬಹುತ್ವವನ್ನು ಗೌರವಿಸದೆ ದೇಶವನ್ನು ಕಟ್ಟಲು ಸಾಧ್ಯವಿಲ್ಲ ಎಂದು ನಂಬಿದೆ. “ನಾವು ಯಾವ ಕಾರಣಕ್ಕಾಗಿ ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆಯೋ, ಅದೇ ತಾತ್ವಿಕ ಕಾರಣಕ್ಕಾಗಿ ತುಳು ಮತ್ತು ಕೊಡವದಂಥ ಸೋದರ ನುಡಿಗಳಿಗೆ ಅಧಿಕೃತ ಮಾನ್ಯತೆ ದೊರೆಯಲೇಬೇಕು ಎಂದು ಆಗ್ರಹಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...

ಬೀದರ್‌ | ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ ಉದ್ಘಾಟನೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ...