ಕುಡಚಿ–ಬಾಗಲಕೋಟೆ ರೈಲು ಮಾರ್ಗ ಕಾಮಗಾರಿ ವಿಳಂಬ: ಶೀಘ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ

Date:

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯಲ್ಲಿ ರೈಲ್ವೆ ಇಲಾಖೆ ವಿಳಂಬ ಮಾಡುತ್ತಿರುವುದು ಹಾಗೂ ಲೋಕಾಪುರಕ್ಕೆ ಪ್ಯಾಸೆಂಜರ್ ರೈಲು ಆರಂಭಿಸದಿರುವ ವಿಷಯವನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ದಯಾನಂದ ಪಾಟೀಲ ಹಾಗೂ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದೀನ್ ಕಾಜಿ ಅವರು ಸಚಿವರ ಗಮನಕ್ಕೆ ತಂದರು.

- Advertisement -

ಕಾಂಗ್ರೆಸ್ ಪಕ್ಷದ ಬಾಗಲಕೋಟೆ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ರೈಲ್ವೆ ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸುವುದರ ಜೊತೆಗೆ ಲೋಕಾಪುರಕ್ಕೆ ಪ್ಯಾಸೆಂಜರ್ ರೈಲು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಕುತುಬುದ್ದೀನ್ ಕಾಜಿ ಅವರು ಈ ಹಿಂದೆ ಹಲವು ಬಾರಿ ನನ್ನ ಗಮನಕ್ಕೆ ಈ ವಿಷಯವನ್ನು ತಂದಿದ್ದಾರೆ. ನಾನು ಕೂಡ ರೈಲ್ವೆ ಇಲಾಖೆಯ ಅಧಿಕಾರಿಗಳನ್ನು ಪದೇಪದೇ ಸಂಪರ್ಕಿಸುತ್ತಿದ್ದೇನೆ. ಆದರೆ, ಅಧಿಕಾರಿಗಳು ನಿರೀಕ್ಷಿತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶೀಘ್ರದಲ್ಲೇ ಲೋಕಾಪುರ ರೈಲು ನಿಲ್ದಾಣ ಹಾಗೂ ಮುಧೋಳದಲ್ಲಿ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸುವುದಾಗಿ ಭರವಸೆ ನೀಡಿದ ಸಚಿವರು, ರೈಲ್ವೆ ಇಲಾಖೆ ಮತ್ತು ಜಿಲ್ಲಾ ಆಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾಮಗಾರಿಗೆ ವೇಗ ನೀಡುವಂತೆ ರೈಲ್ವೆ ಇಲಾಖೆಗೆ ಸೂಚಿಸಲಾಗುವುದು ಎಂದರು.

ರೈಲ್ವೆ ಕಾಮಗಾರಿ ಆರಂಭಿಸಲು ಅಥವಾ ಮುಂದುವರಿಸಲು ಯಾವುದೇ ಅಡೆತಡೆಗಳಿದ್ದರೂ ಅವುಗಳನ್ನು ನಿವಾರಿಸಲು ರಾಜ್ಯ ಸರ್ಕಾರ ರೈಲ್ವೆ ಇಲಾಖೆಗೆ ಅಗತ್ಯ ಸಹಕಾರ ನೀಡಲಿದೆ. ರೈಲ್ವೆ ಇಲಾಖೆ ಸ್ಪಂದಿಸದಿದ್ದರೆ ಹೋರಾಟ ಸಮಿತಿಯೊಂದಿಗೆ ರಾಜ್ಯ ಸರ್ಕಾರವೂ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು.

ಕುಡಚಿ–ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿ ವಿಳಂಬ ಹಾಗೂ ಲೋಕಾಪುರಕ್ಕೆ ಪ್ಯಾಸೆಂಜರ್ ರೈಲು ಆರಂಭಿಸುವ ಬೇಡಿಕೆ ಈ ಭಾಗದ ಜನರ ಬಹುದಿನಗಳ ನಿರೀಕ್ಷೆಯಾಗಿದೆ. ಸಚಿವರು ನೀಡಿರುವ ಭರವಸೆ ಕಾರ್ಯರೂಪಕ್ಕೆ ಬಂದು ಕಾಮಗಾರಿಗೆ ವೇಗ ದೊರೆಯುವುದೇ ಹಾಗೂ ಲೋಕಾಪುರಕ್ಕೆ ರೈಲು ಸಂಚಾರ ಆರಂಭವಾಗುವುದೇ ಎಂಬುದನ್ನು ಕಾದು ನೋಡಬೇಕಿದೆ.

ಈ ಸಂದರ್ಭದಲ್ಲಿ ಚಂದ್ರಶೇಖರ್ ರಾಥೋಡ್, ಶ್ರೀನಿವಾಸ ಬಳ್ಳಾರಿ, ರಾಜು ಮಣ್ಣಿಕೇರಿ, ಜೈಶ್ರೀ ಗುಳಬಾಳ, ಶ್ರೀಮತಿ ಅನ್ನಪೂರ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...

ವಿಜಯನಗರ | ಮಹಿಳೆಯ ಬ್ಯಾಗ್‌ನಿಂದ ₹50 ಸಾವಿರ ಹಣ ಕಳವು

ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ಬಜಾರ್‌ನ ಸ್ಟೇಟ್ ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಬರುತ್ತಿರುವ...