ದೆಹಲಿ | IRS ಅಧಿಕಾರಿ ಮಗಳ ಮೇಲೆ ಅತ್ಯಾಚಾರ; ಚಾರ್ಜರ್ ಕೇಬಲ್‌ನಿಂದ ಕತ್ತು ಹಿಸುಕಿ ಹತ್ಯೆ

Date:

ದೆಹಲಿಯ ಅತ್ಯಂತ ಸುರಕ್ಷಿತ ಮತ್ತು ಐಷಾರಾಮಿ ಪ್ರದೇಶವೆಂದೇ ಕರೆಸಿಕೊಳ್ಳುವ ದಕ್ಷಿಣ ದೆಹಲಿಯ ಅಮರ್ ಕಾಲೋನಿಯಲ್ಲಿ ಬುಧವಾರ ಬೆಳಿಗ್ಗೆ ಘೋರ ದುರಂತವೊಂದು ಸಂಭವಿಸಿದೆ. ಹಿರಿಯ ಆದಾಯ ತೆರಿಗೆ (IRS) ಅಧಿಕಾರಿಯೊಬ್ಬರ 23 ವರ್ಷದ ಪುತ್ರಿಯನ್ನು ಆಕೆಯ ಮನೆಯಲ್ಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಗೂ ಮುನ್ನ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ರಾಜಧಾನಿಯನ್ನು ಬೆಚ್ಚಿಬೀಳಿಸಿದೆ.

- Advertisement -

ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಇಂದು (ಏ.22) ಬೆಳಿಗ್ಗೆ ಯುವತಿಯ ಪೋಷಕರು ವಾಕಿಂಗ್‌ಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯುವತಿ ಒಬ್ಬಂಟಿಯಾಗಿದ್ದಳು. ಪೋಷಕರು ಮನೆಗೆ ವಾಪಸ್ ಬಂದಾಗ ಆಕೆ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ದಿಕ್ಕೆಟ್ಟಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ, ಆಕೆ ಅದಾಗಲೇ ಮೃತಪಟ್ಟಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ದುಷ್ಕರ್ಮಿಗಳು ಯುವತಿಯನ್ನು ಕೊಲ್ಲಲು ಮೊಬೈಲ್ ಚಾರ್ಜರ್‌ನ ಯುಎಸ್‌ಬಿ (USB) ಕೇಬಲ್ ಬಳಸಿದ್ದಾರೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಯುವತಿಯ ಕುತ್ತಿಗೆಯ ಮೇಲೆ ಕೇಬಲ್‌ನಿಂದ ಬಿಗಿದ ಗುರುತುಗಳಿದ್ದು, ತಲೆ ಮತ್ತು ಮುಖದ ಮೇಲೆ ಗಂಭೀರ ಗಾಯಗಳಾಗಿವೆ. ದಾಳಿಯ ಸಮಯದಲ್ಲಿ ಯುವತಿ ಪ್ರಾಣ ಉಳಿಸಿಕೊಳ್ಳಲು ತೀವ್ರವಾಗಿ ಹೋರಾಡಿರುವುದು ಸ್ಥಳದ ಸ್ಥಿತಿಯನ್ನು ನೋಡಿದರೆ ತಿಳಿದುಬರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಆಸ್ತಿ ವಿವಾದ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್‌

ಈ ಕೃತ್ಯದ ಹಿಂದೆ ಮನೆಯ ಹಳೆಯ ಕೆಲಸಗಾರ ರಾಕೇಶ್ ಮೀನಾ ಎಂಬಾತನ ಕೈವಾಡವಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ರಾಕೇಶ್‌ನನ್ನು ಒಂದು ತಿಂಗಳ ಹಿಂದೆಯಷ್ಟೇ ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ಕೋಪದಲ್ಲಿ ಆತ ಮನೆಗೆ ನುಗ್ಗಿ ಮೊದಲು ಅತ್ಯಾಚಾರ ಎಸಗಿ, ನಂತರ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಿ, ಸಾಕ್ಷ್ಯ ನಾಶಪಡಿಸಲು ಯುವತಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

“ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಎಫ್‌ಎಸ್‌ಎಲ್ (FSL) ತಂಡ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಮರಣೋತ್ತರ ಪರೀಕ್ಷೆಯ ನಂತರ ಅತ್ಯಾಚಾರದ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ. ಆರೋಪಿಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...