ದೆಹಲಿಯ 35 ವರ್ಷದ ನ್ಯಾಯಾಧೀಶ ಸಫ್ದರ್‌ಜಂಗ್‌ ನಿವಾಸದಲ್ಲಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

Date:

ದೆಹಲಿ ನ್ಯಾಯಾಲಯದ 35 ವರ್ಷದ ನ್ಯಾಯಾಧೀಶರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಶನಿವಾರ ವರದಿಯಾಗಿದೆ. ಮೃತರನ್ನು ಅಮನ್ ಕುಮಾರ್ ಶರ್ಮಾ ಎಂದು ಗುರುತಿಸಲಾಗಿದ್ದು, ದಕ್ಷಿಣ ದೆಹಲಿಯ ಸಫ್ದರ್‌ಜಂಗ್‌ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

- Advertisement -

ದೆಹಲಿ ಪೊಲೀಸರು ನೀಡಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಶನಿವಾರ ಸಫ್ದರ್‌ಜಂಗ್‌ನಲ್ಲಿರುವ ತಮ್ಮ ಮನೆಯಲ್ಲಿ ಅವರು ನೇಣು ಬಿಗಿದುಕೊಂಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದೊಂದು ಆತ್ಮಹತ್ಯೆ ಪ್ರಕರಣ ಎಂದು ದೆಹಲಿ ಪೊಲೀಸರು ಖಚಿತಪಡಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ದುರಂತ ಘಟನೆಗೆ ನಿಖರವಾದ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ (ಆತ್ಮಹತ್ಯಾ ಪತ್ರ) ಪತ್ತೆಯಾಗಿರುವ ಬಗ್ಗೆ ಈವರೆಗೆ ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸ್ ತನಿಖೆಯ ನಂತರವಷ್ಟೇ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...