ದೇವೇಂದ್ರನಾಥ್ ಮಹ್ತೊ- ಜಾರ್ಖಂಡ್‌ನ ʼಸೋನಂ ವಾಂಗ್‌ಚುಕ್ʼ

Date:

ನೀಟ್‌ ಅಕ್ರಮದ ವಿರುದ್ಧ ದೆಹಲಿಯಲ್ಲಿ ದಿಢೀರ್‌ ಆಗಿ ನಡೆದ ಕಾಕ್ರೋಚ್‌ ಜನತಾ ಪಾರ್ಟಿಯ ಪ್ರತಿಭಟನೆ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಪಡೆಯುವುದರೊಂದಿಗೆ ಅಂತ್ಯಗೊಂಡಿತ್ತು. ಅದಾಗಿ ಕೆಲವೇ ದಿನಗಳಲ್ಲಿ ಜಾರ್ಖಂಡ್‌ನಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಶುರು ಮಾಡಿದ್ದರು. ಹೋರಾಟ ಯಶಸ್ವಿಯಾಗಿದೆ. ಈ ಮಧ್ಯೆ ವಿದ್ಯಾರ್ಥಿ ಮುಖಂಡ ದೇವೇಂದ್ರನಾಥ್‌ ಮಹ್ತೋ 16 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ದೇಶದ ಗಮನಸೆಳೆದಿದ್ದಾರೆ.

- Advertisement -

ದೇವೇಂದ್ರನಾಥ್ ಮಹ್ತೊ 33 ವರ್ಷ ವಯಸ್ಸಿನ ವಿದ್ಯಾರ್ಥಿ ನಾಯಕ ಮತ್ತು ಸಾಮಾಜಿಕ ಕಾರ್ಯಕರ್ತ. ಜಾರ್ಖಂಡ್‌ನ ರಾಂಚಿ ಜಿಲ್ಲೆಯ ರಾಹೆ ಪ್ರಖಂಡದ ಕಾಪಿಡೀಹ್ (ಪರಾಸ್ ಟೋಲಿ ಕಾಪಿಡೀಹ್) ಗ್ರಾಮದಲ್ಲಿ ಜನಿಸಿದರು. ತಂದೆ ವಿಶಂಬರ್ ಮಹ್ತೊ ನಿವೃತ್ತ ಸರ್ಕಾರಿ ಶಿಕ್ಷಕರಾಗಿದ್ದರು, ಅಣ್ಣ ಧನೇಶ್ವರ್ ಮಹ್ತೊ ರೈತ. ಗ್ರಾಮೀಣ ಹಿನ್ನೆಲೆಯಿಂದ ಬಂದ ಮಹ್ತೊ ಶಿಕ್ಷಣದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ತಮ್ಮ ಸ್ವ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ನಂತರ ಸುಮಾರು 10 ಕಿ.ಮೀ. ದೂರದ ಬುಂಡುಗೆ ಹೋಗಿ 2006ರಲ್ಲಿ ಮೆಟ್ರಿಕ್ ಪರೀಕ್ಷೆಯನ್ನು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದರು. 2008ರಲ್ಲಿ ವಿಜ್ಞಾನ ವಿಭಾಗದಲ್ಲಿ ಇಂಟರ್‌ಮೀಡಿಯೇಟ್ ಪೂರೈಸಿದ ಅವರು 2020ರಲ್ಲಿ ರಾಂಚಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ವಿಶ್ವವಿದ್ಯಾಲಯದಿಂದ ತಮ್ಮ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ಹಜಾರಿಬಾಗ್‌ನಿಂದ ಶಿಕ್ಷಣ ಪದವಿ (ಬಿ.ಎಡ್.) ಜೊತೆಗೆ ಸಂಸ್ಕೃತ, ಕುರ್ಮಾಲಿ ಮತ್ತು ಬುಡಕಟ್ಟು ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಪ್ರಥಮ ದರ್ಜೆ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ.

ಮಹ್ತೊ ಜಾರ್ಖಂಡ್‌ನ ವಿದ್ಯಾರ್ಥಿ ರಾಜಕೀಯಕ್ಕೆ ಹೊಸಬರಲ್ಲ. ಮೊದಲು ಶಿಕ್ಷಕರಾಗುವ ಅಥವಾ ಸರಳ ಸರ್ಕಾರಿ ಉದ್ಯೋಗ ಪಡೆಯುವ ಆಸೆ ಇದ್ದವರು, 2015-16ರಿಂದ ವಿದ್ಯಾರ್ಥಿ ಹಿತಾಸಕ್ತಿಗಳಿಗಾಗಿ ಆಂದೋಲನಗಳಲ್ಲಿ ಸಕ್ರಿಯರಾದರು. 2016ರಲ್ಲಿ ವಿದ್ಯಾರ್ಥಿ ವೇತನದ ವಿಷಯದಲ್ಲಿ ಪ್ರತಿಭಟನೆ ಆರಂಭಿಸಿದರು. 2019ರಲ್ಲಿ 6ನೇ JPSC ಪರೀಕ್ಷೆಯ ಅಕ್ರಮಗಳ ವಿರುದ್ಧದ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆ ಸಮಯದಲ್ಲಿ ಅವರ ತಾಯಿ ಕ್ಯಾನ್ಸರ್‌ನಿಂದ ನಿಧನರಾದರು. ಆದರೂ ಅವರು ಹೋರಾಟವನ್ನು ನಿಲ್ಲಿಸಲಿಲ್ಲ.

ರಾಜಕೀಯದಲ್ಲಿ ಅವರು ಜಾರ್ಖಂಡ್ ಲೋಕತಾಂತ್ರಿಕ್ ಕ್ರಾಂತಿಕಾರಿ ಮೋರ್ಚಾ (JLKM) ನೊಂದಿಗೆ ಸಂಬಂಧ ಹೊಂದಿದ್ದಾರೆ. 2024ರಲ್ಲಿ ರಾಂಚಿ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಾರು 1.32 ಲಕ್ಷ ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದರು. ಅದೇ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಸಿಲ್ಲಿ ಕ್ಷೇತ್ರದಿಂದ JLKM ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

2026ರ ಜುಲೈನಲ್ಲಿ 14ನೇ JPSC ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶದ ನಂತರ ಅಕ್ರಮಗಳ ಆರೋಪದೊಂದಿಗೆ ಆರಂಭವಾದ ದೊಡ್ಡ ವಿದ್ಯಾರ್ಥಿ ಆಂದೋಲನದ ಮುಖ್ಯ ಮುಖವಾಗಿ ಹೊರಹೊಮ್ಮಿದ್ದಾರೆ. ಆಗಸ್ಟ್ 2, 2026ರಿಂದ ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಸ್ಟೇಡಿಯಂನಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ವಿದ್ಯಾರ್ಥಿಗಳ ಕುರಿತು ಇವರಿಗಿದ್ದ ಕಾಳಜಿ, ಅವರಿಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ತೊಟ್ಟ ಪಣವನ್ನು ನೆಚ್ಚಿ ಜನ “ಜಾರ್ಖಂಡ್‌ನ ಸೋನಂ ವಾಂಗ್‌ಚುಕ್” ಎಂದು ಕರೆಯುತ್ತಿದ್ದಾರೆ.

16 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹದ ಯಶಸ್ವಿ ಅಂತ್ಯ

ಜೆಪಿಎಸ್‌ಸಿ ಮತ್ತು ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ದೇವೇಂದ್ರ ನಾಥ್ ಮಹ್ತೊ ಅವರು ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 16 ದಿನಗಳ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆಗಸ್ಟ್ 17, 2026 ರಂದು ಯಶಸ್ವಿಯಾಗಿ ಕೊನೆಗೊಳಿಸಿದ್ದಾರೆ.

ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಕ್ಷೀಣಿಸಿ, ರಕ್ತದ ಸಕ್ಕರೆ ಮಟ್ಟ ಕುಸಿದಿದ್ದರಿಂದ ರಾಂಚಿ ಸದರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಆಸ್ಪತ್ರೆಯಲ್ಲೇ ಅವರು ತಮ್ಮ ಹೋರಾಟವನ್ನು ಮುಂದುವರಿಸಿದ್ದರು.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಪತ್ರ ಬರೆದು ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸುವಂತೆ ಮನವಿ ಮಾಡಿದ ಒಂದು ದಿನದೊಳಗೆ ವಿವಾದಿತ ಜೆಎಸ್‌ಎಸ್‌ಸಿ-ಸಿಜಿಎಲ್ ಪರೀಕ್ಷೆ, ಟಿಡಿಪಿಎಲ್ ಮೂಲಕ ನಡೆಸಲಾದ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಆ ನಂತರವೇ ದೇವೇಂದ್ರನಾಥ್‌ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದರು.

ಜಾರ್ಖಂಡ್ ರಾಜ್ಯ ಸರ್ಕಾರದ ಸಚಿವರಾದ ದೀಪಿಕಾ ಪಾಂಡೆ ಸಿಂಗ್ ಮತ್ತು ಇರ್ಫಾನ್ ಅನ್ಸಾರಿ ಅವರ ಸಮ್ಮುಖದಲ್ಲಿ ದೇವೇಂದ್ರ ನಾಥ್ ಮಹ್ತೊ ಅವರು ಜ್ಯೂಸ್ ಕುಡಿಯುವ ಮೂಲಕ ಉಪವಾಸ ವ್ರತವನ್ನು ಮುಗಿಸಿದರು. ಈ ನಿರ್ಧಾರವನ್ನು “ಜಾರ್ಖಂಡ್‌ನ ವಿದ್ಯಾರ್ಥಿ ಶಕ್ತಿಗೆ ಸಂದ ದೊಡ್ಡ ಗೆಲುವು” ಎಂದು ಅವರು ಬಣ್ಣಿಸಿದ್ದಾರೆ.

ಪರೀಕ್ಷೆ ರದ್ದತಿಯನ್ನು ಸ್ವಾಗತಿಸಿದರೂ, ನೇಮಕಾತಿ ಮಂಡಳಿಗಳಲ್ಲಿ ವ್ಯವಸ್ಥಿತ ಸುಧಾರಣೆಗಳು ಬರುವವರೆಗೆ ಮತ್ತು ಪೇಪರ್ ಲೀಕ್ ದಂಧೆಗೆ ಶಾಶ್ವತ ಕಡಿವಾಣ ಬೀಳುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾ (JLKM) ಪಕ್ಷದ ಬಲವರ್ಧನೆ ಹಾಗೂ ಯುವ ಜನಾಂಗದ ಹಕ್ಕುಗಳಿಗಾಗಿ ರಾಜ್ಯಾದ್ಯಂತ ರಾಜಕೀಯ ಜಾಗೃತಿ ಮೂಡಿಸಲು ಅವರು ಸಜ್ಜಾಗುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...