ಟಿವಿಕೆ ತೆಕ್ಕೆಗೆ ಜಾರಿದ ಕಾಂಗ್ರೆಸ್, ಆಪ್ತಮಿತ್ರ ಸ್ಟಾಲಿನ್ ಬೆನ್ನಿಗೆ ಚೂರಿ ಹಾಕಿತೇ?

Date:

ಎಂ.ಕೆ. ಸ್ಟಾಲಿನ್ ಅವರೊಂದಿಗೆ ಭವಿಷ್ಯದ ಕಾರ್ಯತಂತ್ರಗಳ ಕುರಿತು ಯಾವುದೇ ಕನಿಷ್ಠ ಮುನ್ಸೂಚನೆ, ಸಲಹೆ ಅಥವಾ ಆಂತರಿಕ ಮಾತುಕತೆಯನ್ನೂ ನಡೆಸದೆ, ಏಕಪಕ್ಷೀಯವಾಗಿ ಮೈತ್ರಿಕೂಟದಿಂದ ಹೊರಬಂದಿರುವುದು ನಂಬಿಕೆ ದ್ರೋಹ ಎಂಬ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ ಕೋಮುವಾದಿ ಶಕ್ತಿ ಬಿಜೆಪಿ ಜೊತೆ ಕೈಜೋಡಿಸಿರುವ ಎಐಎಡಿಎಂಕೆ ಬೆಂಬಲ ಪಡೆಯುವ ಬೆಳವಣಿಗೆಯನ್ನು ನೋಡಿಕೊಂಡು ಸುಮ್ಮನಿರಬೇಕಿತ್ತೇ ಕಾಂಗ್ರೆಸ್ ಎಂಬ ಪ್ರಶ್ನೆಯೂ ಉದ್ಭವ ಆಗುತ್ತದೆ.

- Advertisement -

ತಮಿಳುನಾಡು ರಾಜಕಾರಣದಲ್ಲಿ ಅನಿರೀಕ್ಷಿತ ಹಾಗೂ ಅಚ್ಚರಿಯ ಬೆಳವಣಿಗೆಯೊಂದು ಸಂಭವಿಸಿದ್ದು, ದೀರ್ಘಕಾಲದಿಂದ ಮಿತ್ರಪಕ್ಷವಾಗಿದ್ದ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಜೊತೆಗಿನ ಮೈತ್ರಿಯನ್ನು ಮುರಿದುಕೊಂಡು ಕಾಂಗ್ರೆಸ್ ಏಕಾಏಕಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಕ್ಕೆ ನಿಂತಿದೆ. ಈ ದಿಢೀರ್ ರಾಜಕೀಯ ಪಲ್ಲಟವು ಡಿಎಂಕೆ ವಲಯದಲ್ಲಿ ತೀವ್ರ ಆಘಾತ ಮೂಡಿಸಿದ್ದು, ಅಧಿಕಾರದ ಲೆಕ್ಕಾಚಾರಕ್ಕಾಗಿ ಕಾಂಗ್ರೆಸ್ ತನ್ನ ಆಪ್ತಮಿತ್ರನ ಬೆನ್ನಿಗೆ ಚೂರಿ ಹಾಕಿದೆ ಎಂಬ ಕಟು ವಿಶ್ಲೇಷಣೆಗಳು ರಾಜಕೀಯ ಪಡಸಾಲೆಯಲ್ಲಿ ವ್ಯಾಪಕವಾಗಿ ವ್ಯಕ್ತವಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇಷ್ಟು ವರ್ಷಗಳ ಕಾಲ ತಮಿಳುನಾಡಿನಲ್ಲಿ ಡಿಎಂಕೆ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು, ಆಡಳಿತದಲ್ಲಿ ಪ್ರಮುಖ ಪಾಲುದಾರನಾಗಿದ್ದ ಕಾಂಗ್ರೆಸ್‌ನ ಈ ನಿರ್ಧಾರ ಮೈತ್ರಿ ಧರ್ಮಕ್ಕೆ ಎದುರಾದ ದೊಡ್ಡ ಸವಾಲಾಗಿದೆ. ಎಂ.ಕೆ.ಸ್ಟಾಲಿನ್ ಅವರೊಂದಿಗೆ ಭವಿಷ್ಯದ ಕಾರ್ಯತಂತ್ರಗಳ ಕುರಿತು ಯಾವುದೇ ಕನಿಷ್ಠ ಮುನ್ಸೂಚನೆ, ಸಲಹೆ ಅಥವಾ ಆಂತರಿಕ ಮಾತುಕತೆಯನ್ನೂ ನಡೆಸದೆ, ಏಕಪಕ್ಷೀಯವಾಗಿ ಮೈತ್ರಿಕೂಟದಿಂದ ಹೊರಬಂದಿರುವುದು ನಂಬಿಕೆ ದ್ರೋಹ ಎಂಬ ಅಸಮಾಧಾನಕ್ಕೆ ಕಾರಣವಾಗಿದೆ.

ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶ ಡಿಎಂಕೆಗೆ ತೀವ್ರ ನಿರಾಸೆ ತಂದಿದೆ. ಖುದ್ದು ಮುಖ್ಯಮಂತ್ರಿಯಾಗಿದ್ದ ಎಂ.ಕೆ.ಸ್ಟಾಲಿನ್ ಅವರು ತಮ್ಮ ಸ್ವಂತ ಕ್ಷೇತ್ರದಲ್ಲಿಯೇ ಅನಿರೀಕ್ಷಿತ ಸೋಲು ಅನುಭವಿಸಿದ್ದಾರೆ. ಈ ಆಘಾತದ ನಡುವೆಯೂ, ನಂಬಿದ್ದ ಮಿತ್ರಪಕ್ಷ ಕೈಕೊಟ್ಟರೂ ಸ್ಟಾಲಿನ್ ಅವರು ಕಿಂಚಿತ್ತೂ ಎದೆಗುಂದಿಲ್ಲ. ಸೋಲಿನ ಬೆನ್ನಲ್ಲೇ ಅವರು ನೇರವಾಗಿ ತಮ್ಮ ಕ್ಷೇತ್ರದ ಜನರ ಬಳಿಗೆ ತೆರಳಿ, ಜನಸಾಮಾನ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ನಡೆಯು ಅವರಲ್ಲಿರುವ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಗೂ ನಾಯಕತ್ವದ ಪ್ರಬುದ್ಧತೆಯನ್ನು ತೋರುತ್ತದೆ.

ಅತ್ಯುತ್ತಮ ಅಭಿವೃದ್ಧಿ ಕಾರ್ಯಗಳು ಹಾಗೂ ಕೋಮುವಾದದ ವಿರುದ್ಧದ ನಿರಂತರ ಹೋರಾಟದ ನಡುವೆಯೂ, ಮಿತ್ರಪಕ್ಷದ ಈ ದಿಢೀರ್ ನಿರ್ಧಾರ ಡಿಎಂಕೆಯನ್ನು ಏಕಾಂಗಿಯಾಗಿಸಿದೆ. ಮುಂದಿನ ದಿನಗಳಲ್ಲಿ ಟಿವಿಕೆ-ಕಾಂಗ್ರೆಸ್ ಮೈತ್ರಿಯು ಯಾವ ರೀತಿಯ ರಾಜಕೀಯ ಪ್ರಭಾವ ಬೀರಲಿದೆ ಹಾಗೂ ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ತನ್ನ ಪಕ್ಷವನ್ನು ಹೇಗೆ ಪುಟಿದೆಳಿಸುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನು ಓದಿದ್ದೀರಾ? ದೆಹಲಿ ಕಪಿಮುಷ್ಟಿಗೆ ಸಿಲುಕುವರೇ ಜೋಸೆಫ್ ವಿಜಯ್? ಮೈತ್ರಿ ಲೆಕ್ಕಾಚಾರದಲ್ಲಿ ತಮಿಳುನಾಡು ರಾಜಕೀಯ

ಡಿಎಂಕೆ ಆಡಳಿತಾತ್ಮಕವಾಗಿ ಹಾಗೂ ಅಭಿವೃದ್ಧಿಪರವಾಗಿ ಕಳೆದ 5 ವರ್ಷಗಳಲ್ಲಿ ಅತ್ಯುತ್ತಮ ಕೆಲಸ ಮಾಡಿತ್ತು. ರಾಜ್ಯದಲ್ಲಿ ಮೂಲಸೌಕರ್ಯ, ಕೈಗಾರಿಕೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಮೂಲಕ ಜನಮೆಚ್ಚುಗೆ ಗಳಿಸಿತ್ತು. ಆರ್ಥಿಕ ಪ್ರಗತಿಯ ಜೊತೆಗೆ ತಮಿಳುನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಸ್ಟಾಲಿನ್ ನೇತೃತ್ವದ ಸರ್ಕಾರ ಪ್ರಾಮಾಣಿಕವಾಗಿ ಶ್ರಮಿಸಿತ್ತು ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುನ್ನಡೆಸಿತ್ತು.

ಕೇವಲ ಅಭಿವೃದ್ಧಿ ಮಾತ್ರವಲ್ಲದೆ, ಆಡಳಿತದ ಅವಧಿಯುದ್ದಕ್ಕೂ ಕೋಮುವಾದಿ ಶಕ್ತಿಗಳ ವಿರುದ್ಧ ಡಿಎಂಕೆ ನಿರಂತರ ಹೋರಾಟವನ್ನು ನಡೆಸಿಕೊಂಡು ಬಂದಿತ್ತು. ಈ ಸೈದ್ಧಾಂತಿಕ ಹೋರಾಟದಲ್ಲಿ ಇದುವರೆಗೂ ಕಾಂಗ್ರೆಸ್ ಕೂಡ ಡಿಎಂಕೆಯ ಪ್ರಮುಖ ಬೆಂಬಲಿಗ ಪಕ್ಷವಾಗಿತ್ತು. ಆದರೆ, ಇದೀಗ ದಿಢೀರ್ ಮೈತ್ರಿ ಕಡಿದುಕೊಂಡು ಜೋಸೆಫ್ ವಿಜಯ್ ಅವರ ಟಿವಿಕೆ ಕಡೆಗೆ ವಾಲುತ್ತಿರುವುದು ಕಾಂಗ್ರೆಸ್‌ ಬಗ್ಗೆ ಡಿಎಂಕೆ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ.

ಟಿವಿಕೆ ಪಕ್ಷಕ್ಕೆ ಬೆಂಬಲ ಸೂಚಿಸಿದ ಕಾಂಗ್ರೆಸ್ ನಡೆಯನ್ನು ಡಿಎಂಕೆ ವಕ್ತಾರ ಶರವಣನ್ ಅಣ್ಣಾದೊರೈ ‘ಬೆನ್ನಿಗೆ ಚೂರಿ ಹಾಕಿದ ಕೆಲಸ’ ಹಾಗೂ ‘ಕೆಲವರ ಅಹಂಕಾರವನ್ನು ತೃಪ್ತಿಪಡಿಸುವ ದಡ್ಡತನದ ನಿರ್ಧಾರ’ ಎಂದು ತೀವ್ರವಾಗಿ ಖಂಡಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಸ್ಟಾಲಿನ್ ಬೆಂಬಲಿಸಿದ ಶ್ರಮವನ್ನು ಅವರು ಸ್ಮರಿಸಿದ್ದಾರೆ.

ಈ ನಡುವೆ ಟಿವಿಕೆ ಜೊತೆಗಿನ ಮೈತ್ರಿಯನ್ನು ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಸಮರ್ಥಿಸಿಕೊಂಡಿದ್ದಾರೆ. ‘ನಮ್ಮದೇನೂ ತಪ್ಪಿಲ್ಲದಿದ್ದರೂ ನಾವು ಹಾನಿ ಅನುಭವಿಸುವುದು ಸರಿಯಲ್ಲ. ಬಿಜೆಪಿಯನ್ನು ತಮಿಳುನಾಡಿನಲ್ಲಿ ತಡೆಯಲು ಜನಮನ ಗೆದ್ದಿರುವ ಹೊಸ ಶಕ್ತಿಯೊಂದಿಗೆ ನಿಲ್ಲುವುದು ಅನಿವಾರ್ಯವಾಗಿತ್ತು’ ಎಂದು ಅವರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...