ಬೀದರ್ ನಗರದ ವಿವಿಧ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

Date:

ಬೀದರ್ ನಗರದ ವಿವಿಧ ಹೋಟೆಲ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಸಹಾಯಕ ಆಯುಕ್ತ ಮಹಮ್ಮದ್ ಶಕೀಲ್ ಅವರ ನೇತೃತ್ವದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮಗಳನ್ನು ಉಲ್ಲಂಘಿಸಿರುವ ಹಲವು ಹೋಟೆಲ್‌ಗಳಿಗೆ ನೋಟಿಸ್ ಜಾರಿ ಮಾಡಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ.

- Advertisement -

ಪರಿಶೀಲನೆ ವೇಳೆ ಹೋಟೆಲ್ ಆಮಂತ್ರಣ ಮತ್ತು ನ್ಯೂ ಆಶೀರ್ವಾದ ಹೋಟೆಲ್‌ಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು ಹಾಗೂ ಮಿಸ್‌ಬ್ರಾಂಡೆಡ್ ವಸ್ತುಗಳು ಪತ್ತೆಯಾಗಿವೆ. ಉಡುಪಿ ಕಾರಂತ್, ಪಂಜಾಬಿ ತಡ್ಕಾ, ಮಯೂರ, ರಾಯಲ್ ಅನ್‌ಮೋಲ್ ಮತ್ತು ಖಾನ್ ಚಾಚಾ ಹೋಟೆಲ್‌ಗಳ ಅಡುಗೆ ಮನೆಗಳಲ್ಲಿ ತೀವ್ರ ಅಸ್ವಚ್ಛತೆ ಕಂಡುಬಂದಿದ್ದು, ಆಹಾರದಲ್ಲಿ ಕೃತಕ ಬಣ್ಣ ಹಾಗೂ ಕಲಬೆರಕೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಹೋಟೆಲ್ ಮಯೂರದಿಂದ ಪನೀರ್ ಹಾಗೂ ಕಡಲೆಹಿಟ್ಟು, ಖಾನ್ ಚಾಚಾ ಹೋಟೆಲ್‌ನಿಂದ ಮೆಣಸಿನ ಪುಡಿ ವಶಪಡಿಸಿಕೊಳ್ಳಲಾಗಿದೆ. ರಾಯಲ್ ಅನ್‌ಮೋಲ್ ಮತ್ತು ಮಂದಿ ಕಿಂಗ್ ಹೋಟೆಲ್‌ಗಳಿಂದ ಶಂಕಾಸ್ಪದ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ವಿಶ್ಲೇಷಣೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಬ್ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಆಹಾರ ವ್ಯಾಪಾರಿಗಳು ಕಡ್ಡಾಯವಾಗಿ ನೈರ್ಮಲ್ಯ ಮತ್ತು ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ವಿಶೇಷ ಕಾರ್ಯಾಚರಣೆ ನಿರಂತರವಾಗಿ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾ ಇಲಾಖೆಯ ಜಿಲ್ಲೆಯ ವಿವಿಧ ತಾಲೂಕುಗಳ ಅಧಿಕಾರಿಗಳಾದ ಮನೋಹರ್ ಅಳಶೆಟ್ಟಿ, ಸೋಮನಾಥ್ ತರನಳ್ಳಿ, ಅಶ್ವಿನಿ ಗಾಳೆ ಹಾಗೂ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಬರ ಘೋಷಣೆ, ಸಾಲಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹಿಸಿ ರೈತರಿಂದ ರಸ್ತೆ ತಡೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...