ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

Date:

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಔರಾದ್‌ ಕ್ಷೇತ್ರದ ಶಾಸಕ ಪ್ರಭು ಬಿ. ಚವ್ಹಾಣ ನೇತೃತ್ವದಲ್ಲಿ ಬಿಜೆಪಿ ಮಂಡಲ ವತಿಯಿಂದ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಪಟ್ಟಣದ ಅಮರೇಶ್ವರ ದೇವಸ್ಥಾನದಲ್ಲಿ ಶಾಸಕ ಪ್ರಭು ಚವ್ಹಾಣ ಅವರು ವಿಶೇಷ ಪೂಜೆ ಸಲ್ಲಿಸಿ ಪ್ರತಿಭಟನೆಗೆ ಚಾಲನೆ ನೀಡಿದರು. ಬಳಿಕ ಅಪಾರ ಸಂಖ್ಯೆಯಲ್ಲಿ ಸೇರಿದ್ದ ರೈತರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ಬಸವೇಶ್ವರ ವೃತ್ತ, ಬಸ್ ನಿಲ್ದಾಣ, ಕನ್ನಡಾಂಬೆ ವೃತ್ತದ ಮಾರ್ಗವಾಗಿ ಎಪಿಎಂಸಿ ವೃತ್ತದಲ್ಲಿ ಸಮಾವೇಶಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಶಾಸಕ ಪ್ರಭು ಚವ್ಹಾಣ ಅವರು ಎತ್ತಿನ ಬಂಡಿಯಲ್ಲಿ ತಲೆಯ ಮೇಲೆ ನಾಶವಾದ ಬೆಳೆ ಹೊತ್ತು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌ ಸೇರಿದಂತೆ ರೈತರು ನಾಶವಾದ ಸೋಯಾಬೀನ್‌, ಉದ್ದು, ಹೆಸರು ಬೆಳೆಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯುದ್ದಕ್ಕೂ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು.

ಬಳಿಕ ಔರಾದ್-ಬೀದರ್‌ ರಾಷ್ಟ್ರೀಯ ಹೆದ್ದಾರಿ ತಡೆದು ಔರಾದ ತಾಲೂಕು ಬರ ಪ್ರದೇಶವೆಂದು ಘೋಷಿಸಬೇಕು, ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ರೈತರ ಬೆಳೆ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರಿಗೆ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.

ಶಾಸಕ ಪ್ರಭು ಚವ್ಹಾಣ ಮಾತನಾಡಿ, “ಬೀದರ್ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಆದರೆ ಔರಾದ ತಾಲೂಕು ಬರ ಪಟ್ಟಿಗೆ ಸೇರಿಸದೆ ಅನ್ಯಾಯ ಮಾಡಲಾಗಿದೆ. ಸರ್ಕಾರ ಯಾವುದೇ ಇರಲಿ, ಮುಖ್ಯಮಂತ್ರಿ ಯಾರೇ ಇರಲಿ, ನಮಗೆ ಬೇಕಿರುವುದು ನ್ಯಾಯ. ಬರ ಘೋಷಣೆಯಲ್ಲಿ ತಾರತಮ್ಯ ನೀತಿ ಅನುಸರಿಸುವುದು ಸರಿಯಲ್ಲ, ಇಲ್ಲಿನ ಜನ ಏನು ತಪ್ಪು ಮಾಡಿದ್ದಾರೆ. ಬರ ಘೋಷಣೆಗೆ ಹತ್ತು ದಿನಗಳೊಳಗೆ ಬರ ಘೋಷಣೆ ಮಾಡದಿದ್ದರೆ ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಹಿಂದೇಟು ಹಾಕುವುದಿಲ್ಲ. ಔರಾದ-ಬೀದರ್ ಚಲೋ ಪಾದಯಾತ್ರೆ ನಡೆಸಲಾಗುವುದು” ಎಂದು ಎಚ್ಚರಿಸಿದರು.

IMG 20260919 WA0083

“ಕೃಷಿ ಇಲಾಖೆಯ ಜಂಟಿ ನಿರ್ದೇಶಕ, ಕಾರ್ಯದರ್ಶಿ ಸೇರಿದಂತೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳೊಂದಿಗೆ ಮಾತನಾಡಿ ಬರ ಕುರಿತು ತಿಳಿಸಿದ್ದೇನೆ. ಬಿತ್ತನೆಯಾದ ಬಳಿಕ 3 ವಾರಗಳ ಕಾಲ ಮಳೆಯಾಗದಿದ್ದರೆ ಬರ ಘೋಷಣೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಆದರೆ 5 ವಾರಕ್ಕೂ ಹೆಚ್ಚು ಕಾಲ ಮಳೆಯಾಗಿಲ್ಲ. ಬಿತ್ತನೆಯಾದ ಬೆಳೆಗಳು ಒಣಗಿ ನಾಶವಾಗಿವೆ. ಆದರೂ ಔರಾದ್‌ ತಾಲೂಕು ಬರ ಘೋಷಣೆ ಯಾಕೆ ಮಾಡಿಲ್ಲ. ಔರಾದ್ ತಾಲ್ಲೂಕಿನ ಜನರ ಮೇಲೆ ಏನಾದರೂ ದ್ವೇಷವಿದ್ದರೆ ನನಗೆ ಗುಂಡು ಹೊಡೆಯಿರಿ. ಆದರೆ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಯೊಂದು ವಿಚಾರಕ್ಕೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವುದನ್ನು ಬಿಟ್ಟು ರಾಜ್ಯದ ಜನರ ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸಬೇಕು. ಔರಾದ ತಾಲ್ಲೂಕಿನಲ್ಲಿ ಅನುದಾನದ ಕೊರತೆಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ₹560 ಕೋಟಿ ವೆಚ್ಚದ ಕೆರೆ ತುಂಬಿಸುವ ಯೋಜನೆ, ₹84 ಕೋಟಿ ವೆಚ್ಚದ ನೀರು ಸರಬರಾಜು ಯೋಜನೆ, ಸಿಪೆಟ್ ಸೇರಿದಂತೆ ಹಲವು ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ. ಔರಾದ ಮತ್ತು ಕಮಲನಗರ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿಗಾಗಿ ಸರ್ಕಾರ ಪ್ರತ್ಯೇಕವಾಗಿ ₹10 ಕೋಟಿ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

WhatsApp Image 2026 09 19 at 7.39.35 PM

ಇದನ್ನೂ ಓದಿ : ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ವಸಂತ ಬಿರಾದಾರ, ಕಿರಣ ಪಾಟೀಲ, ಅರಹಂತ ಸಾವಳೆ, ಚಂದು ಪಾಟೀಲ, ವಿಜಯಲಕ್ಷ್ಮಿ ಕೌಟಗೆ, ಶಿವಾಜಿರಾವ ಪಾಟೀಲ ಮುಂಗನಾಳ, ಧೊಂಡಿಬಾ ನರೋಟೆ, ಶಿವರಾಜ ಅಲ್ಮಾಜೆ, ಪ್ರಕಾಶ ಅಲ್ಮಾಜೆ, ಬಸವರಾಜ ಪಾಟೀಲ, ಖಂಡೋಬಾ ಕಂಗಟೆ, ಪ್ರಕಾಶ ಮೇತ್ರೆ, ಪ್ರದೀಪ ಪವಾರ್, ಸುಜಿತ ರಾಠೋಡ, ದಯಾನಂದ ಘೂಳೆ, ಸಂಜು ವಡೆಯರ್, ಗುಂಡಪ್ಪ ಮುಧಾಳೆ, ಜಗನ್ನಾಥ ಚಿಟ್ಮೆ, ಉಮೇಶ ನಾಯಕ್, ಬಸವರಾಜ ಹಳ್ಳೆ, ಮಾರುತಿರೆಡ್ಡಿ ಪಟ್ನೆ, ಶಿವಕುಮಾರ ಪಾಂಚಾಳ, ರಾಜು ಶೆಳ್ಕೆ, ರಾಜೇಂದ್ರ ಮಾಳಿ, ಉದಯ ಸೋಲಾಪೂರೆ, ಬಂಟಿ ರಾಂಪೂರೆ, ಸಂಜು ಮುರ್ಕೆ, ಸಚಿನ ಬಿರಾದಾರ, ರವೀಂದ್ರ ರೆಡ್ಡಿ, ರಾಜಕುಮಾರ ಸೋರಾಳೆ, ಪ್ರಕಾಶ ಜೀರ್ಗೆ, ನಾಗಶೆಟ್ಟಿ ಗಾದಗೆ, ಅಶೋಕ ಅಲ್ಮಾಜೆ, ಸುನೀಲ ಸುಸಲಾದೆ, ಆನಂದ ದ್ಯಾಡೆ ಸೇರಿದಂತೆ ಕಾರ್ಯಕರ್ತರು, ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ ಭಾರತ

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...