FEMA ಉಲ್ಲಂಘನೆ: ಬಾಲಿವುಡ್ ನಟ ಶೇಖರ್ ಸುಮನ್ ಆಪ್ತನ ಕಚೇರಿ ಮೇಲೆ ಇ.ಡಿ ದಾಳಿ

Date:

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಮತ್ತು ಅಘೋಷಿತ ವಿದೇಶಿ ಆಸ್ತಿ ಹೊಂದಿರುವ ಆರೋಪದ ಮೇಲೆ ಬಾಲಿವುಡ್ ನಟ ಶೇಖರ್ ಸುಮನ್ ಅವರ ಆಪ್ತ ಹಾಗೂ ಮುಂಬೈ ಮೂಲದ ಚಲನಚಿತ್ರ ನಿರ್ಮಾಪಕ ಧರ್ಮೇಶ್ ಸಂಗಾನಿ ಮತ್ತು ಅವರ ಕಂಪನಿಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದೆ.

- Advertisement -

ಇತ್ತೀಚಿಗೆ ಶೇಖರ್ ಸುಮನ್‌ ಅವರು ತಮ್ಮ youtube ಚಾನಲ್‌ನಲ್ಲಿ “ರಾಜ ಮತ್ತು ಮಾಂತ್ರಿಕ ಕನ್ನಡಿ’ಯ ವಿಡಂಬನೆ ಆಧಾರಿತ ಕಾಲ್ಪನಿಕ ಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪ್ರಸ್ತುತ ಕೇಂದ್ರ ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈಗಿನ ಇ.ಡಿ ದಾಳಿ ಕೂಡ ಪ್ರತಿಕಾರದ ಉದ್ದೇಶವಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮುಂಬೈ ಮೂಲದ ‘ಕಲಾನಿ ಇಂಪೆಕ್ಸ್ ಪ್ರೈವೇಟ್ ಲಿಮಿಟೆಡ್’ (Kalanee Impex Pvt Ltd) ಹಾಗೂ ಅದರ ನಿರ್ದೇಶಕರಾದ ಧರ್ಮೇಶ್ ಸಂಗಾನಿ, ಅವರ ಪತ್ನಿ ರಂಜಿತಾ ಸಂಗಾನಿ ಮತ್ತು ನರೇಂದ್ರ ಸಂಗಾನಿ ಅವರಿಗೆ ಸೇರಿದ ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಧರ್ಮೇಶ್ ಸಂಗಾನಿ ಅವರು ನಟ ಶೇಖರ್ ಸುಮನ್ ಅವರೊಂದಿಗೆ ಚಲನಚಿತ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದು, ಶೇಖರ್ ಸುಮನ್ ಪ್ರವರ್ತಿಸಿರುವ ‘ಫಿಲ್ಮ್ ಅಕಾಡೆಮಿ’ಯ ಸಹ-ಸಂಸ್ಥಾಪಕರೂ ಆಗಿದ್ದಾರೆ. ಸದ್ಯ ನಡೆಯುತ್ತಿರುವ ತನಿಖೆಯು ಕೇವಲ ಸಂಗಾನಿ ಕುಟುಂಬ ಮತ್ತು ಅವರ ಕಂಪನಿಗೆ ಮಾತ್ರ ಸೀಮಿತವಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಶೋಧ ಕಾರ್ಯಾಚರಣೆಯ ವೇಳೆ ಧರ್ಮೇಶ್ ಸಂಗಾನಿ ಅವರಿಗೆ ಸೇರಿದ ಕೆನಡಾ, ಅಮೆರಿಕ (ಯು.ಎಸ್.) ಮತ್ತು ಯುಎಇ ಗಳಲ್ಲಿರುವ ಅಘೋಷಿತ ವಿದೇಶಿ ಕಂಪನಿಗಳು ಹಾಗೂ ಬ್ಯಾಂಕ್ ಖಾತೆಗಳ ಕುರಿತು ಮಹತ್ವದ ದಾಖಲೆಗಳು ಪತ್ತೆಯಾಗಿವೆ. ಈ ಮಾಹಿತಿಗಳನ್ನು ಅವರು ತಮ್ಮ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ ಘೋಷಿಸಿರಲಿಲ್ಲ. ರಫ್ತು ವಹಿವಾಟಿಗೆ ಸಂಬಂಧಿಸಿದಂತೆ ಬರಬೇಕಿದ್ದ ಕೋಟ್ಯಂತರ ರೂಪಾಯಿಗಳ ಆದಾಯವು ನಿಗದಿತ ಕಾಲಮಿತಿಯೊಳಗೆ ಭಾರತಕ್ಕೆ ಬಂದಿಲ್ಲ ಎಂಬುದು ತನಿಖೆಯಿಂದ ಬಹಿರಂಗವಾಗಿದೆ. ಅಲ್ಲದೆ, ರಫ್ತು ಆದಾಯವನ್ನು ಮರಳಿ ಪಡೆಯಲು ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಥವಾ ಅಧಿಕೃತ ಡೀಲರ್ ಬ್ಯಾಂಕ್‌ಗಳಿಂದ ಯಾವುದೇ ಕಾಲಾವಕಾಶ ವಿಸ್ತರಣೆಯನ್ನೂ ಈ ಕಂಪನಿ ಪಡೆದಿರಲಿಲ್ಲ. ಹೀಗಾಗಿ ಮೇ 2026ರಲ್ಲಿ ಕಸ್ಟಮ್ಸ್ ಇಲಾಖೆಯು ಈ ಕಂಪನಿಯನ್ನು ‘ಸುಸ್ತಿದಾರ’ (Defaulting) ರಫ್ತುದಾರರ ಪಟ್ಟಿಗೆ ಸೇರಿಸಿ ಸಾರ್ವಜನಿಕ ನೋಟಿಸ್ ಜಾರಿ ಮಾಡಿತ್ತು ಎಂದು ಇ.ಡಿ. ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಸುರಕ್ಷತೆ ಕೇವಲ ರಾಜಕೀಯ ಭಾಷಣದ ಸರಕಾಗದಿರಲಿ

ದಾಳಿಯ ವೇಳೆ ಡಿಜಿಟಲ್ ಸಾಕ್ಷ್ಯಗಳನ್ನು ನಾಶಪಡಿಸುವ ಉದ್ದೇಶದಿಂದ ಧರ್ಮೇಶ್ ಸಂಗಾನಿ ಅವರು ತಮ್ಮ ಮೊಬೈಲ್ ಫೋನ್ ಅನ್ನು ಕಟ್ಟಡದ 13ನೇ ಮಹಡಿಯಿಂದ ಕೆಳಗೆ ಎಸೆದಿದ್ದಾರೆ ಎಂದು ಇ.ಡಿ. ಆರೋಪಿಸಿದೆ. ಅಧಿಕಾರಿಗಳು ನಂತರ ಮೊಬೈಲ್ ಅನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದು, ಸಾಕ್ಷ್ಯ ನಾಶದ ಯತ್ನದ ಅಡಿ ಮುಂಬೈ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ.

ಸಂಗಾನಿ ಅವರ ವ್ಯವಹಾರಗಳ ಮೇಲೆ ಅಮೆರಿಕ ಮತ್ತು ಬ್ರಿಟನ್ ಕಸ್ಟಮ್ಸ್ ಅಧಿಕಾರಿಗಳು ಕೂಡ ನಿಗಾ ಇಟ್ಟಿದ್ದಾರೆ ಎಂಬ ಅಂಶವೂ ತನಿಖೆಯಲ್ಲಿ ತಿಳಿದುಬಂದಿದೆ. ಜೂನ್ 2025ರಲ್ಲಿ ಅಮೆರಿಕದ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಹಾಗೂ ನಕಲಿ ಟ್ರೇಡ್‌ಮಾರ್ಕ್ ಹೊಂದಿದ್ದ ಸುಮಾರು 3 ಮಿಲಿಯನ್ ಅಮೆರಿಕನ್ ಡಾಲರ್ (28.665 ಕೋಟಿ) ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಕ್ಕೆ ಸಂಬಂಧಿಸಿದ ದಾಖಲೆಗಳೂ ಇ.ಡಿ. ದಾಳಿ ವೇಳೆ ಪತ್ತೆಯಾಗಿವೆ. ಇದಲ್ಲದೆ, ಸೆಪ್ಟೆಂಬರ್ 2016ರಲ್ಲಿ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಧರ್ಮೇಶ್ ಸಂಗಾನಿ ಅವರಿಂದ 7.41 ಕೆ.ಜಿ.ಯಷ್ಟು ‘ಘೋಷಣೆಯಾಗದ’ ಚಿನ್ನಾಭರಣಗಳನ್ನು ಯು.ಕೆ. ಬಾರ್ಡರ್ ಫೋರ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...