ಪಂಚ ರಾಜ್ಯಗಳ ಚುನಾವಣಾ ಕದನದ ಅಂತಿಮ ಫಲಿತಾಂಶ: ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನ?

Date:

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಅಧಿಕೃತ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಆಯೋಗದ ಅಂತಿಮ ಅಂಕಿ-ಅಂಶಗಳ ಪ್ರಕಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಬಹುಮತ ಸಾಧಿಸಿ ಅಧಿಕಾರದತ್ತ ಹೆಜ್ಜೆ ಇಟ್ಟಿದೆ. ಇನ್ನೊಂದೆಡೆ, ತಮಿಳುನಾಡಿನಲ್ಲಿ ಹೊಸ ಪಕ್ಷ ಟಿವಿಕೆ ಅಭೂತಪೂರ್ವ ಸಾಧನೆ ಮಾಡಿದ್ದರೆ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸಿದೆ. ಪುದುಚೇರಿಯಲ್ಲಿ ಎಐಎನ್‌ಆರ್‌ಸಿ ನೇತೃತ್ವದ ಎನ್‌ಡಿಎ ಹೆಚ್ಚು ಸ್ಥಾನ ಗಳಿಸಿ ಸರ್ಕಾರ ರಚಿಸಲು ಮುಂದಾಗಿದೆ.

- Advertisement -

ಪಶ್ಚಿಮ ಬಂಗಾಳದಲ್ಲಿ ಕುತೂಹಲಕಾರಿ ಮತ್ತು ಐತಿಹಾಸಿಕ ಫಲಿತಾಂಶ ಹೊರಬಂದಿದೆ. ಒಟ್ಟು 294 ಸ್ಥಾನಗಳ ಪೈಕಿ 293 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭಾರಿ ಬಹುಮತದೊಂದಿಗೆ 206 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಮೆರೆದಿದೆ. ಅಧಿಕಾರರೂಢ ಟಿಎಂಸಿ 81 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಕಾಂಗ್ರೆಸ್ 2,AJUP 2 ಮತ್ತು ಸಿಪಿಐ(ಎಂ) 1 ಸ್ಥಾನವನ್ನು ಮಾತ್ರ ಗಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ತಮಿಳುನಾಡು ಚುನಾವಣೆಯಲ್ಲಿ ಭಾರಿ ಬದಲಾವಣೆ ಕಂಡುಬಂದಿದೆ. ಒಟ್ಟು 234 ಕ್ಷೇತ್ರಗಳ ಪೈಕಿ ಟಿವಿಕೆ ಪಕ್ಷವು 108 ಸ್ಥಾನಗಳಲ್ಲಿ ಜಯ ದಾಖಲಿಸಿ ಎಲ್ಲರ ಗಮನ ಸೆಳೆದಿದೆ. ಅಧಿಕಾರರೂಢ ಡಿಎಂಕೆ 59 ಸ್ಥಾನಗಳಿಗೆ ಕುಸಿದಿದ್ದರೆ, ಎಐಎಡಿಎಂಕೆ 47 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ 5 ಮತ್ತು ಪಿಎಂಕೆ 4 ಸ್ಥಾನಗಳಲ್ಲಿ ಜಯ ಗಳಿಸಿವೆ.

ಇದನ್ನು ಓದಿದ್ದೀರಾ? ಗಲ್ಲಾಪೆಟ್ಟಿಗೆಯಿಂದ ಮತಪೆಟ್ಟಿಗೆ; ಜೋಸೆಫ್ ವಿಜಯ್ ಎಂಬ ಹೀರೋವಿನ ಸೂಪರ್ ಡ್ಯೂಪರ್ ಹಿಟ್ ರಾಜಕೀಯ ಪ್ರವೇಶ!

ಕೇರಳ ವಿಧಾನಸಭೆಯ 140 ಸ್ಥಾನಗಳ ಪೈಕಿ ಯುಡಿಎಫ್‌ ನೇತೃತ್ವದ ಕಾಂಗ್ರೆಸ್ 63 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಧಿಕಾರರೂಢ ಎಡಪಂಥೀಯ ಸಿಪಿಐ(ಎಂ) ಕೇವಲ 26 ಸ್ಥಾನಗಳನ್ನು ಮಾತ್ರ ಗಳಿಸಲು ಶಕ್ತವಾಗಿದೆ. ಐಯುಎಂಎಲ್ 22, ಸಿಪಿಐ 8 ಮತ್ತು ಕೆಇಸಿ 7 ಸ್ಥಾನಗಳಲ್ಲಿ ಜಯ ಗಳಿಸಿವೆ.

ಅಸ್ಸಾಂ ವಿಧಾನಸಭಾ ಚುನಾವಣೆಯ ಒಟ್ಟು 126 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಇಲ್ಲಿ ಬಿಜೆಪಿ 82 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಗಳಿಸಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಉಳಿದಂತೆ ಬಿಒಪಿಎಫ್ 10, ಎಜಿಪಿ 10 ಮತ್ತು ಎಐಯುಡಿಎಫ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಈ ಮೂಲಕ ಅಸ್ಸಾಂನಲ್ಲಿ ಕಮಲ ಪಾಳಯದ ಪ್ರಾಬಲ್ಯ ನಿರಂತರವಾಗಿ ಮುಂದುವರಿದಿದೆ.

ಪುದುಚೇರಿ ಕೇಂದ್ರಾಡಳಿತ ಪ್ರದೇಶದ 30 ಕ್ಷೇತ್ರಗಳ ಎಐಎನ್‌ಆರ್‌ಸಿ 12 ಸ್ಥಾನಗಳಲ್ಲಿ ಗೆದ್ದು ಮೊದಲ ಸ್ಥಾನದಲ್ಲಿದೆ. ಡಿಎಂಕೆ 5 ಸ್ಥಾನಗಳಲ್ಲಿ ಮತ್ತು ಬಿಜೆಪಿ 4 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಟಿವಿಕೆ 2 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...