ಗದಗ | ಮಾದರಿ ನಗರ ನಿರ್ಮಾಣಕ್ಕೆ ಆದ್ಯತೆ: ಸಚಿವ ಬಸವರಾಜ ರಾಯರೆಡ್ಡಿ

Date:

ಗದಗ-ಬೆಟಗೇರಿ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿ, ಸುಂದರ ಹಾಗೂ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹೇಳಿದರು.

- Advertisement -

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬುಧವಾರ ನಗರದ ಕಬಾಡರ ಲೇಔಟ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅಂದಾಜು ₹27 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ ಅವು ಲಾಕ್‌ಹೀಡ್, ಬೋಯಿಂಗ್, ಜನರಲ್ ಡೈನಾಮಿಕ್ಸ್‌ನಂತಹ ಖಾಸಗಿ ಕಂಪನಿಗಳ ಸಿಇಒಗಳ ಸಂಪೂರ್ಣ ನಿಯಂತ್ರಣದಲ್ಲಿವೆ... ನಾನು ಬರವಣಿಗೆಯನ್ನೇ ವೃತ್ತಿಯಾಗಿಸಿಕೊಂಡವನು;...

ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಜನರಿಗೆ ಒದಗಿಸುವ ಯೋಜನೆ ಉತ್ತಮ ಕಾರ್ಯವಾಗಿದೆ. ದೇಶದಲ್ಲಿ ನಗರೀಕರಣದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಂದೆ ಶೇ.13ರಷ್ಟಿದ್ದ ನಗರವಾಸಿಗಳ ಪ್ರಮಾಣ ಇಂದು ಶೇ.39ಕ್ಕೆ ಏರಿಕೆಯಾಗಿದೆ. ಇದರಿಂದ ನಗರಗಳಲ್ಲಿ ಜನಸಂಖ್ಯೆಯ ಒತ್ತಡ ಹೆಚ್ಚಾಗಿ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳ ಅಗತ್ಯವೂ ಹೆಚ್ಚಾಗಿದೆ. ಹೀಗಾಗಿ ವ್ಯವಸ್ಥಿತ ನಗರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಬರಗಾಲದ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಹಾಗೂ ಬಡವರು ಸಂಕಷ್ಟ ಎದುರಿಸುತ್ತಿದ್ದಾರೆ. 17-18ನೇ ಶತಮಾನದಲ್ಲಿ ಕಂಡುಬಂದಂತಹ ಭೀಕರ ಬರಗಾಲದ ಪರಿಸ್ಥಿತಿ ಮತ್ತೆ ಎದುರಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ನಮ್ಮ ಮನವಿಗೆ ಸ್ಪಂದಿಸಿ ಗದಗ ಜಿಲ್ಲೆಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಬರದಿಂದಾಗಿ ಸುಮಾರು ₹60 ಸಾವಿರ ಕೋಟಿ ನಷ್ಟ ಉಂಟಾಗಿದ್ದರೂ ಕೇಂದ್ರ ಸರ್ಕಾರದಿಂದ ಈವರೆಗೆ ಪರಿಹಾರ ಅನುದಾನ ಬಿಡುಗಡೆಯಾಗಿಲ್ಲ ಎಂದು ಸಚಿವ ರಾಯರಡ್ಡಿ ತಿಳಿಸಿದರು.

2023ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಬರಗಾಲದ ಸಂಕಷ್ಟದ ಸಂದರ್ಭದಲ್ಲಿ ಈ ಯೋಜನೆಗಳು ಬಡ ಕುಟುಂಬಗಳಿಗೆ ನೆರವಾಗಿವೆ. ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯ ಬಳಸಿಕೊಂಡಿರುವುದು ದೇಶದ ಗಮನ ಸೆಳೆದಿದೆ. ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿವೆ ಎಂದರು.

ಗದಗ ಜಿಲ್ಲೆಗೆ ಮಾಲಿನ್ಯರಹಿತ ಕೈಗಾರಿಕೆಗಳನ್ನು ಆಕರ್ಷಿಸುವ ಮೂಲಕ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಬೇಕಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸೂಕ್ತ ಯೋಜನೆ ರೂಪಿಸಿ, ಎಲ್ಲ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ತಿಂಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ.

ಅಧಿಕಾರಿಗಳು ಜನರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ವಿಚಾರಗಳಿಗೆ ಮನ್ನಣೆ ನೀಡಬೇಕು. ಅಧಿಕಾರಿಗಳು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....