ಗದಗ | ಡಿಸೆಂಬರ್‌ನಲ್ಲಿ ರೈತರ ಖಾತೆಗೆ 5000 ರೂ: ಸಚಿವ ಬಸವರಾಜ ರಾಯರೆಡ್ಡಿ

Date:

“ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಬರ ಪರಿಹಾರವಾಗಿ ಪ್ರತಿ ರೈತರ ಖಾತೆಗೆ 5000 ರೂ. ಜಮೆ ಮಾಡಲು ಸಿದ್ಧತೆ ನಡೆದಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.

- Advertisement -

ಗದಗ ಜಿಲ್ಲಾಡಳಿತ ಭವನದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, “ಮೊದಲ ಹಂತವಾಗಿ ಜಿಲ್ಲೆಯ 59 ಸಾವಿರ ರೈತರ ಖಾತೆಗೆ 2500 ಪರಿಹಾರ ಜಮೆ ಆಗಿದೆ. ಡಿಸೆಂಬರ್ ಒಳಗಾಗಿ ಇನ್ನುಳಿದ ಪರಿಹಾರ ಮೊತ್ತ ರೈತರ ಖಾತೆಗೆ ಜಮೆ ಮಾಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

“ರಾಜ್ಯದಲ್ಲಿ ಬರದಿಂದಾಗಿ 60 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಸರ್ಕಾರವು ಎನ್‌ಡಿಆರ್‌ಎಫ್‌ ಮೂಲಕ ಬೆಳೆ ಪರಿಹಾರವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಆಗ್ರಹಿಸುತ್ತೇನೆ” ಎಂದು ತಿಳಿಸಿದರು.

ಶಾಸಕ ಎಚ್.ಕೆ. ಪಾಟೀಲ್‌ ಮಾತನಾಡಿ, “2025-26 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಗೊಂದಲ ಸೃಷ್ಟಿಯಾಗಿದೆ. ಗದಗ ಮುಂಡರಗಿ ಮತ್ತು ರೋಣ ತಾಲೂಕಿಗೆ ಇನ್ನೂ ಬೆಳೆ ವಿಮೆ ಪರಿಹಾರವೇ ಬಂದಿಲ್ಲ. ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಗಮನ ಹರಿಸಬೇಕು” ಎಂದರು.

“ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ 2025-26 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ವಿಮೆ ಪರಿಹಾರದ 183 ಕೋಟಿ ರೂ. ನಲ್ಲಿ ಈ ವರೆಗೆ 50.8 ಕೋಟಿ ಮಾತ್ರ ಬಿಡುಗಡೆ ಆಗಿದೆ ಎಂದು ಮಾಹಿತಿ ನೀಡಿದರು. ಬರ ನಿರ್ವಹಣೆಗೆ ಅಂದಾಜು 30 ಕೋಟಿ ರೂ. ಜಿಲ್ಲೆಯ ಪಿಡಿ ಖಾತೆಗಳಲ್ಲಿ ಇರುವುದಾಗಿ ಜಿಲ್ಲಾಧಿಕಾರಿಗಳು” ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...

ಅಜಿತ್ ಪವಾರ್ ವಿಮಾನ ದುರಂತಕ್ಕೆ 10 ತಿಂಗಳು: ಇನ್ನೂ ಎಫ್‌ಐಆರ್ ಇಲ್ಲ, ತನಿಖೆಯೂ ಇಲ್ಲ: ರೋಹಿತ್ ಪವಾರ್ ಆಕ್ರೋಶ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ನಿಧನರಾಗಿ...