‘ಇಷ್ಟವಾದ ಹುಡುಗಿಯ ಮನೆ ಮುಂದೆ ಹೋಗಿ ನಿಲ್ಲಿ’: ನಟ ಅಲ್ಲು ಅರ್ಜುನ್‌ ಹೇಳಿಕೆಗೆ ಭಾರೀ ಟೀಕೆ

Date:

ನಟ ಅಲ್ಲು ಅರ್ಜುನ್‌ ಅಭಿಮಾನಿಗಳೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿದ ಹೇಳಿಕೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಅಭಿಮಾನಿಗಳ ನಡುವಿನ ದ್ವೇಷ ಮತ್ತು ಟ್ರೋಲಿಂಗ್‌ ಸಂಸ್ಕೃತಿಯನ್ನು ವಿರೋಧಿಸುವ ಕುರಿತು ಹೇಳಿಕೆ ನೀಡುವ ಭರದಲ್ಲಿ, “ಇಷ್ಟವಾದ ಹುಡುಗಿಯ ಮನೆಯ ಮುಂದೆ ಹೋಗಿ ನಿಲ್ಲಿ” ಎಂದು ಹೇಳಿರುವುದು ಟೀಕೆಗೆ ಗುರಿಯಾಗಿದೆ.

- Advertisement -

ನಿನ್ನೆ (ಜು.28) ಹೈದರಾಬಾದ್‌ನಲ್ಲಿ ನಡೆದ ಅಲ್ಲು ಅರ್ಜುನ್‌ ಫ್ಯಾನ್ಸ್‌ ಅಸೋಸಿಯೇಷನ್‌ (AAFA) ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ದ್ವೇಷ ಮತ್ತು ಟ್ರೋಲಿಂಗ್‌ನಲ್ಲಿ ಸಮಯ ವ್ಯರ್ಥ ಮಾಡಬಾರದು ಎಂದು ಅಭಿಮಾನಿಗಳಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“ನನ್ನ ಅಭಿಮಾನಿಗಳು, ವಿರೋಧಿಗಳು ಮತ್ತು ನನ್ನನ್ನು ದ್ವೇಷಿಸುವವರಿಗೆ ಬಹಳ ದಿನಗಳಿಂದ ಒಂದು ವಿಷಯ ಹೇಳಬೇಕೆಂದುಕೊಂಡಿದ್ದೆ. ಯಾರನ್ನಾದರೂ ಇಷ್ಟಪಡದಿದ್ದರೆ ಅವರನ್ನು ಟ್ರೋಲ್‌ ಮಾಡುವುದರಲ್ಲಿ ಅಥವಾ ದ್ವೇಷಿಸುವುದರಲ್ಲಿ ಸಮಯ ವ್ಯರ್ಥ ಮಾಡಬೇಡಿ. ಸಮಯವನ್ನು ಸಕಾರಾತ್ಮಕ ಕೆಲಸಗಳಿಗೆ ಬಳಸಿಕೊಳ್ಳಬೇಕು ಮತ್ತು ಇತರರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಬಾರದು ಎಂದರು.

ಆದರೆ ಇದೇ ಭಾಷಣದ ಒಂದು ಭಾಗ ಇದೀಗ ವೈರಲ್‌ ಆಗಿದೆ. ಅದರಲ್ಲಿ, “ಟ್ರೋಲ್‌ ಮಾಡಲು ಸಮಯ ಕೊಡುವ ಬದಲು ನಿಮಗೆ ಇಷ್ಟವಾದ ಹುಡುಗಿಯ ಮನೆಯ ಮುಂದೆ ಹೋಗಿ ನಿಲ್ಲಿ” ಎಂದು ಅಲ್ಲು ಅರ್ಜುನ್‌ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಹೇಳಿಕೆಯನ್ನು ಹಲವರು ಮಹಿಳೆಯರನ್ನು ಹಿಂಬಾಲಿಸುವ (Stalking) ಅಥವಾ ಕಿರುಕುಳದ ವರ್ತನೆಯನ್ನು ಸಾಮಾನ್ಯೀಕರಿಸುವ ರೀತಿಯ ಸಲಹೆಯಾಗಿ ಅರ್ಥೈಸಿದ್ದಾರೆ. ಇದರ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್‌ (X) ನಲ್ಲಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಇದು ಸಂಪೂರ್ಣ ಜಾಗೃತಿಯ ಕೊರತೆಯನ್ನು ತೋರಿಸುತ್ತದೆ” ಎಂದು ಒಬ್ಬ ಬಳಕೆದಾರ ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು, “ಅಲ್ಲು ಅರ್ಜುನ್‌ ತಮ್ಮ ಅಭಿಮಾನಿಗಳಿಗೆ ಸಲಹೆ ನೀಡುವಾಗ ಹೆಚ್ಚು ಎಚ್ಚರಿಕೆ ವಹಿಸಬೇಕು” ಎಂದು ಬರೆದಿದ್ದಾರೆ. ಇನ್ನೋರ್ವ ಬಳಕೆದಾರ, “ಮಹಿಳೆಯರನ್ನು ಹಿಂಬಾಲಿಸುವ ಅಥವಾ ಕಿರುಕುಳ ನೀಡುವ ವರ್ತನೆಯನ್ನು ಪ್ರೇಮದ ಹೆಸರಿನಲ್ಲಿ ವೈಭವೀಕರಿಸುವ ಸಂದೇಶ ಇದರಿಂದ ಹೋಗುತ್ತದೆ. ಇದು ಖಂಡನೀಯ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ʼಇಂಕ್ವಿಲಾಬ್ ಜಿಂದಾಬಾದ್ʼ ಹುಟ್ಟಿದ್ದು ಭಗತ್‌ ಸಿಂಗ್‌ ಅವರಿಂದಲ್ಲ…

ಆದಾಗ್ಯೂ, ಕೆಲವು ಅಭಿಮಾನಿಗಳು ಅಲ್ಲು ಅರ್ಜುನ್‌ ಅವರ ಮಾತಿನ ಉದ್ದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಟ್ರೋಲಿಂಗ್‌ನಲ್ಲಿ ಸಮಯ ಕಳೆಯುವುದಕ್ಕಿಂತ ಜೀವನದಲ್ಲಿ ಒಳ್ಳೆಯ ವಿಷಯಗಳಿಗೆ ಸಮಯ ಮೀಸಲಿಡಿ ಎಂಬ ಅರ್ಥದಲ್ಲೇ ಅವರು ಈ ಮಾತು ಹೇಳಿದ್ದಾರೆ ಎಂದು ಅವರ ಬೆಂಬಲಿಗರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಅಲ್ಲು ಅರ್ಜುನ್‌ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದ್ದು, ನಟರಿಂದ ಈ ಕುರಿತು ಯಾವುದೇ ಸ್ಪಷ್ಟನೆ ಇನ್ನೂ ಬಂದಿಲ್ಲ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ...

ಡಿಜಿಟಲ್ ವಂಚನೆಗೆ ಒಳಗಾದ ಸಂತ್ರಸ್ತರಿಗೆ ಬ್ಯಾಂಕುಗಳೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್‌!

"ಡಿಜಿಟಲ್ ವಂಚನೆ ಮತ್ತು "ಡಿಜಿಟಲ್ ಅರೆಸ್ಟ್" ನಂತಹ ಸೈಬರ್ ಅಪರಾಧಗಳಿಗೆ ಒಳಗಾಗುವ...

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ ಕೆ ಶಿವಕುಮಾರ್

“ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ...

ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ 'ಮಹಾಭಿಯೋಗ' (ವಜಾ) ನಿರ್ಣಯ...