ʼಕೃಷ್ಣಾ ನದಿʼಗೆ ನೀರು ಬಿಡುಗಡೆ ಮಾಡದಿದ್ದರೆ ಜಮಖಂಡಿಯಲ್ಲಿ ಹೆದ್ದಾರಿ ಬಂದ್‌ಗೆ ಕರೆ

Date:

ತಿಂಗಳಿನಿಂದ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿದಿದ್ದು, ಕಳೆದ ಮೂರು ತಿಂಗಳಿನಿಂದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಮಹಾರಾಷ್ಟ್ರದಿಂದ ನೀರು ಹರಿಸಲಾಗಿಲ್ಲ ಎಂದು ಆರೋಪಿಸಿ, ರೈತ ಸಂಘ ಮತ್ತು ಕಬ್ಬು ಬೆಳೆಗಾರರ ಸಂಘದ ಸದಸ್ಯರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು. ಕೂಡಲೇ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡದಿದ್ದರೆ ಜಮಖಂಡಿಯಲ್ಲಿ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡ ರಾಜು ನದಾಫ್ ಮಾತನಾಡಿ, ರೈತರಿಗೆ ಬಿತ್ತನೆ ಪ್ರಾರಂಭಿಸಲು ಹಣವಿಲ್ಲ. ಕಬ್ಬಿನ ಬಾಕಿ ಬಿಲ್ ನೀಡಬೇಕು. ರೈತರ ಸಂಕಷ್ಟ ನಿವಾರಿಸಬೇಕು ಎಂದು ಆಗ್ರಹಿಸಿದರು.

- Advertisement -

ರೈತ ಸಂಘ ಮುಖಂಡ ಶ್ರೀಶೈಲ ಭೂಮಾರ ಮಾತನಾಡಿ, “ಮಹಾರಾಷ್ಟ್ರದಿಂದ 2 ಟಿಎಂಸಿ ನೀರು ಪೂರೈಸಬೇಕು, ರೈತರು ಎಲ್ಲ ಸೌಲಭ್ಯವನ್ನು ಪ್ರತಿಭಟನೆ ಮಾಡಿಯೇ ಪಡೆಯುವಂತಾಗಿದೆ. ಜನ ಜಾನುವಾರುಗೆ ಕುಡಿಯಲು ನೀರಿಲ್ಲ, ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳುತ್ತಿದ್ದೇವೆ. ಕೂಡಲೇ ನೀರು ಪೂರೈಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನೀರಿಗಾಗಿ ತಾಲ್ಲೂಕು ಆಡಳಿತ ಸೌಧದ ಎದುರು ರೈತಸಂಘದಿಂದ ಪ್ರತಿಭಟನೆ ಮಾಡಿ ಉಪವಿಭಾಗಾಧಿಕಾ-ರಿ ಶ್ವೇತಾ ಬೀಡಿಕರಗೆ ಮನವಿ ಸಲ್ಲಿಸಲು ಕರೆದಾಗ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸರಿಯಾಗಿ ಸ್ಪಂದಿಸದೆ, ಮನವಿ ಸ್ವೀಕರಿಸದೆ ಕಚೇರಿಗೆ ತೆರಳಿದರು, ಇದಕ್ಕೆ ಆಕ್ರೋಶಗೊಂಡ ರೈತರು ಒಂದು ಗಂಟೆ ಪ್ರತಿಭಟನೆ ಮಾಡಿ ಮನವಿ ಸ್ವೀಕರಿಸಲು ಬರಬೇಕು ಎಂದು ಗಡುವು ನೀಡಿದರೂ ಬರಲಿಲ್ಲ, ನಂತರ ತಹಶೀಲ್ದಾರ್ ಅನೀಲ ಬಡಿಗೇರ ಮನವಿ ಸ್ವೀಕರಿಸಿದರು.

ಸುರೇಶ ಹಂಚಿನಾಳ, ಧರೆಪ್ಪ ದಾನಗೊಂಡ, ಕಲ್ಲಪ್ಪ ಬಿರಾದಾರ, ಬಾಹುಬಲಿ ನ್ಯಾಮಗೌಡ, ಸಿದ್ದಪ್ಪ ಬನಜನವರ, ಶಿವಶಂಕರ ಪಾಟೀಲ, ಶಿವಪ್ಪ ಕುರಣಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...