ಹುಬ್ಬಳ್ಳಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ದೋಷಿ ಗಿರೀಶ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಬಹುಚರ್ಚಿತ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದಲ್ಲಿ ಆರೋಪಿಯಾಗಿದ್ದ ಗಿರೀಶ್ ಅಪರಾಧಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ.
ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಅಂಜಲಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬಿದ್ದಿದೆ.
2024ರ ಮೇ 15ರಂದು ಮುಂಜಾನೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅವರ ಮನೆಗೆ ನುಗ್ಗಿದ ಆರೋಪಿ ಗಿರೀಶ್, ಚಾಕುವಿನಿಂದ ಹಲವು ಬಾರಿ ಇರಿದು ಹತ್ಯೆ ಮಾಡಿದ್ದನು.
ಅಂಜಲಿ ತನ್ನ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದರಿಂದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು.



