ಹುಬ್ಬಳ್ಳಿ | ರಾಜಕೀಯ ಬೆಳವಣೆಗೆಯಿಂದ ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನ: ಕರ್ನಾಟಕ ಮುಸ್ಲಿಂ ಧ್ವನಿ

Date:

“ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ. ಇದರಿಂದ ಕೋಪ ಮತ್ತು ಆಳವಾದ ಅಸಮಾಧಾನ ಉಂಟಾಗಿದೆ” ಎಂದು ಕರ್ನಾಟಕ ಮುಸ್ಲಿಂ ಧ್ವನಿ ಸಂಚಾಲಕ ಅಶ್ರಫ್ ಅಲಿ ಬಶೀರ್ ಅಹ್ಮದ ಆರೋಪಿಸಿದರು.

- Advertisement -

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಪಟ್ಟಣದ ಪತ್ರಕರ್ತರ ಭವನದಲ್ಲಿ ಕರ್ನಾಟಕ ಮುಸ್ಲಿಂ ಧ್ವನಿ ಮುಖಂಡರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮರು ತಮ್ಮ ಮತಗಳಲ್ಲಿ ಸುಮಾರು 85ರಿಂದ90ರಷ್ಟು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಿದ್ದರೂ ಸಮುದಾಯವನ್ನು ಕಡೆಗಣಿಸಿದ್ದಾರೆ” ಎಂದು ಆರೋಪಿಸಿದರು.

ಪಕ್ಷದೊಳಗಿನ ಮುಸ್ಲಿಂ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ಕಳವಳ ವ್ಯಕ್ತಪಡಿಸುತ್ತಾ, “ಜಮೀರ್ ಅಹ್ಮದ್ ಖಾನ್, ನಸೀರ್ ಅಹ್ಮದ್ ಮತ್ತು ಅಬ್ದುಲ್ ಜಬ್ಬಾ‌ರ್ ಮುಂತಾದ ಸಮುದಾಯದ ಧ್ವನಿಯಾಗಿ ಹೊರಹೊಮ್ಮಿದ ನಾಯಕರನ್ನು ಗುರಿಯಾಗಿಸಿ ಅವರ ವಿರುದ್ಧ ಹೊರಡಿಸಲಾಗುತ್ತಿರುವ ಆರೋಪಗಳು ಮುಸ್ಲಿಂ ಸಮುದಾಯದಲ್ಲಿ ಅನ್ಯಾಯ ಮತ್ತು ಪಕ್ಷಪಾತದ ಭಾವನೆಯನ್ನು ಹೆಚ್ಚಿಸಿವೆ. ಸಮುದಾಯವು ಅವರಿಗೆ ಸಿಗಬೇಕಾದ ಹಕ್ಕಿನ ಪಾಲು ದೊರೆಯಲಿದೆ ಎಂಬ ನಿರೀಕ್ಷೆಯಲ್ಲಿತ್ತು. ಆ ಹಕ್ಕು ಸಿಕ್ಕಿರುವುದಿಲ್ಲ” ಎಂದು ಅಸಮಧಾನ ವ್ಯಕ್ತಪಡಿಸಿದರು.

ಆದರೆ ಕಾಂಗ್ರೆಸ್ ಪಕ್ಷವು ಬಹಿರಂಗವಾಗಿ 2024ರ ಶಿವಮೊಗ್ಗ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ಬೆಂಬಲಿಸಲು ಕರೆ ನೀಡಿತ್ತು. ಇತರ ವರ್ಗಗಳನ್ನು ತೃಪ್ತಿಪಡಿಸುವತ್ತ ಹೆಚ್ಚು ಒಲವು ತೋರಿಸುತ್ತಿದೆ ಎಂಬ ಭಾವನೆ ಉಂಟಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.

“ಈ ಸಂಕಷ್ಟಕರ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮೌನವು ಅತ್ಯಂತ ನಿರಾಶಾಜನಕವಾಗಿದ್ದು, ಸ್ವೀಕಾರಾರ್ಹವಲ್ಲ. ಇದರಿಂದ ನಾಯಕತ್ವ ಮತ್ತು ಹೊಣೆಗಾರಿಕೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸುತ್ತಿವೆ” ಎಂದು ಹೇಳಿದರು.

“ಇದರಿಂದ ಮುಸ್ಲಿಮರು ನೋವು ಅನುಭವಿಸುತ್ತಿದ್ದಾರೆ. ಕೋಪಗೊಂಡಿದ್ದಾರೆ. ಮತ್ತು ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಭಾವನೆ ಹೊಂದಿದ್ದಾರೆ. ಅವರ ವಿಶ್ವಾಸ ಮತ್ತು ಅಪಾರ ಬೆಂಬಲವನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ” ಎಂದರು.

“ತಕ್ಷಣ, ನ್ಯಾಯಸಮ್ಮತ ಮತ್ತು ಪಾರದರ್ಶಕ ಕ್ರಮ ಕೈಗೊಳ್ಳದಿದ್ದಲ್ಲಿ, 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಈ ಅಸಮಾಧಾನದ ಸಂಪೂರ್ಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಈ ಪರಿಣಾಮಗಳಿಗೆ ಪಕ್ಷದ ನಾಯಕತ್ವದ ನಿರ್ಕ್ರಿಯೆಯೇ ಸಂಪೂರ್ಣ ಹೊಣೆಗಾರಿಯಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಆಯೋಗ ಮಾಜಿ ಅಧ್ಯಕ್ಷ ಡಾ ಅಬ್ದುಲ್ ಕರೀಂ, ಜಿಲ್ಲಾ ಅಂಜುಮನ್-ಇ-ಇಸ್ಲಾಂ ಉಪಾಧ್ಯಕ್ಷ ಬಶೀರ್ ಅಹ್ಮದ್ ಜಾಗೀರದಾರ, ಶಾಂತಿ ನಿಕೇತನ ಸಿಕಂದರ್ ಖಾನ್ ಹುಡೆಡ್, ಸಾಮಾಜಿಕ ಕಾರ್ಯಕರ್ತ ಅತೀಕ್ ಅಹ್ಮದ್ ಸಂಗ್ರೆಸ್ಕೊಪ್ಪ, ಸಾಮಾಜಿಕ ಕಾರ್ಯಕರ್ತ ಅಯೂಬ್ ಸವಣೂರು ಉಪಸ್ಥಿತರಿಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...