ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

Date:

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

- Advertisement -

“ಗ್ರಾಮದಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹಾಗೂ ಕೂಲಿ ಕಾರ್ಮಿಕರು ವಿವಿಧ ಕೆಲಸಗಳಿಗಾಗಿ ಬಸವಕಲ್ಯಾಣ, ಹುಲಸೂರ ಸೇರಿದಂತೆ ನಾನಾ ಕಡೆಗೆ ಬಸ್‌ಗಳಲ್ಲಿ ಸಂಚರಿಸುತ್ತಾರೆ. ಗ್ರಾಮದಲ್ಲಿ ಸೂಕ್ತ ಬಸ್ ತಂಗುದಾಣದ ವ್ಯವಸ್ಥೆ ಇಲ್ಲದಿರುವುದರಿಂದ ಪ್ರಯಾಣಿಕರು ರಸ್ತೆ ಬದಿಯಲ್ಲೇ ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಮಳೆ, ಬಿಸಿಲು, ಚಳಿ ಎನ್ನದೆ ಪ್ರಯಾಣಿಕರು ರಸ್ತೆ ಬದಿಯಲ್ಲೇ ನಿಂತು ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರು, ಮಕ್ಕಳು, ವೃದ್ಧರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಸ್ಯೆ ಉಂಟಾಗಿದೆ ಎಂದು ತಹಸೀಲ್ದಾರ್‌ ಅವರ ಹೆಸರಿಗೆ ಬರೆದ ಮನವಿಯನ್ನು ಗ್ರಾಮ ಪಂಚಾಯತ್‌ ಪಿಡಿಗೆ ಅವರಿಗೆ ಸಲ್ಲಿಸಿದರು.

ಇದನ್ನೂ ಓದಿ : ಬೀದರ್‌ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ

ಗ್ರಾಮದ ಸೂಕ್ತ ಸ್ಥಳವನ್ನು ಗುರುತಿಸಿ ಮೇಲ್ಛಾವಣಿ, ಆಸನ ಸೇರಿದಂತೆ ಅಗತ್ಯ ಮೂಲಸೌಕರ್ಯಗಳೊಂದಿಗೆ ಬಸ್ ತಂಗುದಾಣ ನಿರ್ಮಿಸಬೇಕು. ಈ ಕುರಿತು ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಅನುದಾನ ಮಂಜೂರು ಮಾಡಿ ಶೀಘ್ರ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಗ್ರಾಮದ ಮುಖಂಡ ಜೈವಂತ ಆರ್. ಸಿಂಗಾರೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಕೊಲೆಗಾರ, ‘ಮೋಶಾ’ ಸೂತ್ರದ ಬೊಂಬೆ ಗ್ಯಾನೇಶ್ ಕುಮಾರ್ ವಜಾಗೊಳ್ಳಬೇಕು!

ಮೋದಿ-ಅಮಿತ್ ಶಾರ 'ಅಧಿಕಾರದಾಹ'ಕ್ಕೆ ಇಡೀ ಚುನಾವಣಾ ಆಯೋಗವನ್ನೇ ಬಲಿಪಶು ಮಾಡಿ, ದೇಶದ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...