ಹುಮನಾಬಾದ್ | ಕನೇರಿ ಸ್ವಾಮೀಜಿಗೆ ಬಸವಕಲ್ಯಾಣ ಪ್ರವೇಶ ಬೇಡ: ಜನಪರ ಸಂಘಟನೆಗಳ ಆಗ್ರಹ

Date:

ಬಸವಕಲ್ಯಾಣದಲ್ಲಿ ಜೂ.28ರಂದು ನಡೆಯಲಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ  ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿವೆ.

- Advertisement -

ಸೌಹಾರ್ದ ಕರ್ನಾಟಕ ವೇದಿಕೆ, ಡಿವೈಎಫ್ಐ, ಎಸ್ಎಫ್ಐ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಗಳು ಜಂಟಿಯಾಗಿ ಮಂಗಳವಾರ ಹುಮನಾಬಾದ್ ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಬಸವ ಭಕ್ತರನ್ನು ʼಬಸವ ತಾಲಿಬಾನಿʼ ಎಂದು ಪದ ಪ್ರಯೋಗ ಮಾಡಿ ಅವಮಾನಿಸಿರುವುದು ಹಾಗೂ ಬಸವತತ್ವ ಮತ್ತು ಸಂಸ್ಕೃತಿಯನ್ನು ನಾಡಿನಾದ್ಯಂತ ಪ್ರಚಾರ ಮಾಡುತ್ತಿರುವ ಪೂಜ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ. ಸುಪ್ರೀಂ ಕೋರ್ಟ್‌ನಿಂದಲೂ ಟೀಕೆಗೆ ಗುರಿಯಾಗಿರುವ ಕನೇರಿ ಸ್ವಾಮೀಜಿಯವರ ನಡೆ ಬಸವ ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿರುವ ಕನೇರಿ ಸ್ವಾಮೀಜಿಗೆ ಬಸವಕಲ್ಯಾಣ ಪ್ರವೇಶ ವಿರೋಧವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

“ಸರ್ಕಾರ ಹಾಗೂ ಜಿಲ್ಲಾಡಳಿತವು ಬಸವ ಭಕ್ತರ ಭಾವನೆಗಳು ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬೇಕು. ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಕನೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶಕ್ಕೆ ಅವಕಾಶ ನೀಡದಂತೆ ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ಒಂದು ವೇಳೆ ಕಾರ್ಯಕ್ರಮಕ್ಕೆ ಅನುಮತಿ ನೀಡಿದಲ್ಲಿ ಬಸವ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇರುವುದರ ಜೊತೆಗೆ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳು ಎದುರಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಕಾನೂನು ಸುವ್ಯವಸ್ಥೆಗೆ ಧಕ್ಕೆ : ಇಬ್ಬರು ರೌಡಿಶೀಟರ್‌ಗಳ ಗಡಿಪಾರು

ಈ ಸಂದರ್ಭದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆ ಜಿಲ್ಲಾ ಸಂಚಾಲಕ ಪ್ರಭು ಸಂತೋಷಕರ್, ಡಿವೈಎಫ್ಐ ಜಿಲ್ಲಾ ಸಂಚಾಲಕ ಶಶಿಕಾಂತ ಡಾಂಗೆ, ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ರೇಷ್ಮಾ ಹಂಸರಾಜ್, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಅಂಬುಬಾಯಿ ಮಾಳಗೆ, ಎಸ್ಎಫ್ಐ ಜಿಲ್ಲಾ ಸಂಚಾಲಕ ಸೈಯದ್ ಮೇರಾಜೋದ್ದೀನ್, ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಇಸಾಮೋದ್ದೀನ್, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸಂಚಾಲಕ ಗೌಸೋದ್ದೀನ್, ರೈತ ಸಂಘದ ಮುಖಂಡ ಖಾಸೀಂ ಅಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...