ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ

Date:

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಾಬಾ ಸಾಹೇಬ್ ಅಂಬೇಡ್ಕರ್ ಅವರು, “ಜಾತಿ ವ್ಯವಸ್ಥೆ ಇರುವವರೆಗೂ ಅಸ್ಪೃಶ್ಯತೆ ಇರುತ್ತದೆ , ಸಮಾಜಿಕ , ಆರ್ಥಿಕ ಅಸಮಾನತೆ ಇರುವವರೆಗೆ ಜಾತೀಯತೆ ಇರಲಿದೆ” ಎಂದು ಸ್ಪಷ್ಟವಾಗಿ ಹೇಳಿದ್ದರು ಎಂದರು.

ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ

ಅಂಬೃಡ್ಕರ್ ಅವರು, ಎಲ್ಲಾ ದಮನಿತರ, ಪರಿಶಿಷ್ಟ ವರ್ಗಗಳ, ಶೋಷಿತರ, ಅವಕಾಶ ವಂಚಿತ ಜನರ ಪರವಾಗಿ ಹೋರಾಟವನ್ನು ತಮ್ಮ ಜೀವನದುದ್ದಕ್ಕೂ ಮಾಡಿದ್ದರು. ಕೇವಲ ದಲಿತರ ನಾಯಕರಾಗಿರದೆ ಅವಕಾಶ ವಂಚಿತರ, ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ ಮಾಡಿದ್ದರು ಎಂದರು.

ಜಗತ್ತಿನ ಶ್ರೇಷ್ಠ ಸಂವಿಧಾನ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನದ ಮೂಲಕ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದ್ದರಿಂದಲೇ ದೇಶದ ಸಂವಿಧಾನವನ್ನು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಎಂದು ಪರಿಗಣಿಸಲಾಗುತ್ತದೆ ಎಂದರು.

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನೋವಿನ ಸಂಗತಿ

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿದೆ ಇರುವುದು ನೋವಿನ ಸಂಗತಿ ಎಂದ ಮುಖ್ಯಮಂತ್ರಿಗಳು, ಸಮಾಜಿಕ, ಆರ್ಥಿಕ ಅಸಮಾನತೆಯಿರುವ ಈ ಸಮಾಜದಲ್ಲಿ ಇವುಗಳನ್ನು ಹೋಗಲಾಡಿಸದಿದ್ದರೆ ದೇಶಕ್ಕೆ ಸ್ವಾತಂತ್ರ ಬಂದಿರುವುದು ಯಶಸ್ವಿಯಾಗಲಾರದು ಎಂದು ಅಂಬೇಡ್ಕರ್ ಸ್ಪಷ್ಟವಾಗಿ ನಡೆದಿದ್ದರು ಎಂದರು.

ಹಿಂದೂ ಧರ್ಮದ ಸುಧಾರಣೆಗಾಗಿ ಪ್ರಯತ್ನ

ಅಂಬೇಡ್ಕರ್ ವಿದ್ವಾಂಸರಾಗಿದ್ದರೂ ದಮನಿತರ ಪರವಾಗಿ ಹೋರಾಡಿದರಲ್ಲದೆ, ಹಿಂದೂ ಧರ್ಮದ ಸುಧಾರಣೆಗಾಗಿ ಬಹಳ ಪ್ರಯತ್ನ ಮಾಡಿದರು. ಆದರೆ ಕಡೆಗೆ ಅದು ಕೈಗೂಡದೆ ಹಿಂದೂ ಧರ್ಮವನ್ನು ತ್ಯಜಿಸಿದರು. ಅಸಮಾನತೆಗೆ ಕಾರಣವಾದ ಮನುವಾದವನ್ನು ತಿರಸ್ಕರಿಸಿದ್ದರು ಎಂದರು.

ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ

ಸಮಾಜಿಕ, ಆರ್ಥಿಕ ಶಕ್ತಿ ಎಲ್ಲರಿಗೂ ದೊರಕಿದಾಗ ಮಾತ್ರ ಸ್ವಾವಲಂಬನೆ ಸಾಧ್ಯ. ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣ ಒಂದೇ ಪ್ರಬಲ ಅಸ್ತ್ರ ಎಂದು ಅಂಬೇಡ್ಕರ್ ಸಾರಿದ್ದರು ಎಂದರು.

ಅಂಬೇಡ್ಕರ್ ಅವರು ವಿದ್ಯಾವಂತರಾಗದೆ ಹೋಗಿದ್ದರೆ, ಅವರಲ್ಲಿ ಹೋರಾಟದ ಮನೋಭಾವ ಇರದೇ ಹೋಗಿದ್ದರೆ ಇಂಥ ಸಂವಿಧಾನ ಸಿಗಲು ನಮಗೆ ಸಾಧ್ಯವಿರಲಿಲ್ಲ. ಅದಕ್ಕಾಗಿಯೇ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂಬೇಡ್ಕರ್, ರಾಮ್ ಮನೋಹರ್ ಲೋಹಿಯಾ, ಜವಾಹರ್ ಲಾಲ್ ನೆಹರೂ ಅವರು ಪಡೆದಂತಹ ಶಿಕ್ಷಣ ಪಡೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ, ಮಾನವೀಯತೆಯಿಂದ ಕೂಡಿರುವ ಶಿಕ್ಷಣ ನಮಗೆ ಸಿಗಬೇಕು ಎಂದರು.

ಇದನ್ನು ಓದಿದ್ದೀರಾ? ಸಾಮ್ರಾಜ್ಯಶಾಹಿಯ ಅಟ್ಟಹಾಸಕ್ಕೆ ಪ್ರತಿರೋಧದ ಕಿಚ್ಚು: ಅಮೆರಿಕ-ಇಸ್ರೇಲ್ ದಬ್ಬಾಳಿಕೆಯ ವಿರುದ್ಧ ಸಿಡಿದೆದ್ದ ಲೆಬನಾನ್

ಸಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದರಿಂದಲೇ ಇಂಥ ಸಂವಿಧಾನ ನೀಡಲು ಅಂಬೇಡ್ಕರ್ ಅವರಿಗೆ ಸಾಧ್ಯವಾಯಿತು ಎಂದು ಮುಖ್ಯಮಂತ್ರಿಗಳು ಹೇಳಿದರು.

ವೈಜ್ಞಾನಿಕ ಶಿಕ್ಷಣ ದೊರೆಯದಿದ್ದರೆ ಸಮ ಸಮಾಜದ ನಿರ್ಮಾಣ ಅಸಾಧ್ಯ

ವೈಜ್ಞಾನಿಕ ಶಿಕ್ಷಣ ದೊರೆಯದಿದ್ದರೆ ಸಮ ಸಮಾಜದ ನಿರ್ಮಾಣ ಅಸಾಧ್ಯ. ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾಜಿಕ , ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಸಮ ಸಮಾಜ ನಿರ್ಮಾಣಕ್ಕೆ ಸರ್ಕಾರ ಮಾಡುತ್ತಿರುವ ಪ್ರಾಮಾಣಿಕ ಪ್ರಯತ್ನವಾಗಿದೆ ಎಂದರು.

ಮನುವಾದಿಗಳ ಸುಳ್ಳುಗಳನ್ನು ನಂಬಬೇಡಿ

ಮನುವಾದಿಗಳು ಸಂವಿಧಾನ ವಿರೋಧಿಗಳಾಗಿದ್ದು, ಸುಳ್ಳು ಹೇಳಿ ಸಮಾಜದ ದಾರಿ ತಪ್ಪಿಸುತ್ತಾರೆ. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದರು, ದೆಹಲಿಯಲ್ಲಿ ಅಂಬೇಡ್ಕರ್ ಅವರ ಶವ ಸಂಸ್ಕಾರ ಮಾಡಲು ಅವಕಾಶ ನೀಡಲಿಲ್ಲ ಎಂದೂ ಅಪಪ್ರಚಾರ ಮಾಡುತ್ತಾರೆ ಜನ ಇಂಥ ಸುಳ್ಳುಗಳನ್ನು ನಂಬಬಾರದು ಎಂದರು.

ಅಂಬೇಡ್ಕರ್ ಅವರು ಎಲ್ಲಾ ಕಾಲಕ್ಕೂ ಸಲ್ಲುತ್ತಾರೆ

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇಲ್ಲದೇ ಹೋಗಿದ್ದರೆ ದೇಶದಲ್ಲಿ ಏನು ಆಗುತ್ತಿತ್ತು ಎಂದು ಊಹಿಸುವುದೇ ಅಸಾಧ್ಯ ಎಂದ ಮುಖ್ಯಮಂತ್ರಿಗಳು ಅಂಬೇಡ್ಕರ್ ಅವರ ಬದುಕನ್ನು, ಉದ್ದೇಶವನ್ನು ಮನನ ಮಾಡಿಕೊಳ್ಳಬೇಕು. ಅಂಬೇಡ್ಕರ್ ಅವರು ಎಲ್ಲಾ ಕಾಲಕ್ಕೂ ಸಲ್ಲುತಾರೆ ಎಂದರು.

ವಸತಿಶಾಲೆಗಳ ಶೇ. 97.22% ವಿದ್ಯಾರ್ಥಿಗಳು ಉತ್ತೀರ್ಣ

ಸರ್ಕಾರ ನಡೆಸುವ ವಸತಿಶಾಲೆಗಳಲ್ಲಿ ಶೇ. 97.22% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪಿಯುಸಿ ಪರೀಕ್ಷೆಯಲ್ಲಿಯೂ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರುವುದು ಇದು ಸರ್ಕಾರದ ಹೆಗ್ಗಳಿಕೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಭಿನಂದಿಸಿದರು.

ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ, ಕೆ. ಹೆಚ್. ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಸದಸ್ಯರಾದ ಭೋಜೇಗೌಡ, ಗೋವಿಂದರಾಜು, ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...