ಶಿವಮೊಗ್ಗ | ಭಾಷಣ ಮಾಡಲ್ಲ, ಜನರ ಅಹವಾಲು ಆಲಿಸೋಣ: ಸಚಿವ ಮಧು ಬಂಗಾರಪ್ಪ

Date:

ಶಿವಮೊಗ್ಗ ಜಿಲ್ಲಾಡಳಿತ ಮತ್ತು ಹೊಸನಗರ ತಾಲೂಕು ಆಡಳಿತ, ʻಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಸಭೆ ಹೊಸನಗರದ ಈಡಿಗರ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

- Advertisement -

ಕಾರ್ಯಕ್ರಮ ಆರಂಭಕ್ಕೂ 30 ನಿಮಿಷ ಮುಂಚಿತವಾಗಿಯೇ ಸಭಾ ಸ್ಥಳಕ್ಕೆ ಆಗಮಿಸಿದ ಸಚಿವರು, ಸಾಗರ-ಹೊಸನಗರ ಕ್ಷೇತ್ರದ ಶಾಸಕ ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಶ್ರೀ ಗೋಪಾಲಕೃಷ್ಣ ಬೇಳೂರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, “ಇಲ್ಲಿ ನಾವು ಭಾಷಣ ಮಾಡುವ ಬದಲು ಜನರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸೋಣ. ಕಾರ್ಯಕ್ರಮವನ್ನು ಕೂಡಲೇ ಆರಂಭಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡೋಣ. ಪ್ರಜಾಸೇವೆ ಉದ್ದೇಶವನ್ನು ನೀವು ಹೇಳಿ” ಎಂದು ವೇದಿಕೆ ಭಾಷಣವನ್ನು ಶಾಸಕರಿಗೆ ಬಿಟ್ಟುಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್ ತೆರಿಗೆ ಇಳಿಸಿ ವರ್ಷಗಳ ನಂತರ ಉದ್ಯಮಿಗಳಿಗೆ ಪ್ರಶ್ನೆಯೇ;...

​ಕೈಗಾರಿಕಾ ಬೆಳವಣಿಗೆಗೆ ಪೂರಕವಾಗಿ ಸರ್ಕಾರಗಳು ನೀಡುವ ತೆರಿಗೆ ವಿನಾಯಿತಿಗಳ ಲಾಭವು ತಳಮಟ್ಟದ ಕಾರ್ಮಿಕರ ವೇತನ ಹೆಚ್ಚಳವಾಗಿ ಪರಿವರ್ತನೆಯಾಗದಿರುವುದು ಆರ್ಥಿಕ ನೀತಿ ನಿರೂಪಕರ ಮುಂದಿರುವ ದೊಡ್ಡ ಸವಾಲಾಗಿದೆ. ಫಿಕ್ಕಿ ವೇದಿಕೆಯಲ್ಲಿ ಪ್ರಧಾನಿಯವರು ಎತ್ತಿರುವ ಪ್ರಶ್ನೆಗಳು...

ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು:...

ಮಳೆ ನಿಂತರೆ ಕೆರೆಗಳು ಬತ್ತುತ್ತವೆ, ಕೆರೆಗಳು ಬತ್ತಿದರೆ ಅಂತರ್ಜಲ ಕುಸಿಯುತ್ತದೆ, ಅಂತರ್ಜಲ ಕುಸಿದರೆ ಅರಣ್ಯದ ಜೀವನಾಡಿಗಳೇ ದುರ್ಬಲವಾಗುತ್ತವೆ. ಇದರ ಪರಿಣಾಮ ಮನುಷ್ಯರಿಗಷ್ಟೇ ಸೀಮಿತವಾಗುವುದಿಲ್ಲ. ಕಾಡಿನಲ್ಲಿರುವ ಆನೆ, ಹುಲಿ, ಚಿರತೆ, ಕಾಡೆಮ್ಮೆ, ಜಿಂಕೆ ಸೇರಿದಂತೆ...

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ಜನರ ಅಹವಾಲುಗಳನ್ನು ಆಲಿಸಲು ವಿಶೇಷ ಆಸಕ್ತಿ ವಹಿಸಿದ ಸಚಿವರು, 2 ಗಂಟೆ 30 ನಿಮಿಷಗಳ ಕಾಲ ಸಭೆಯಲ್ಲಿ ಕುಳಿತು ಒಟ್ಟು 180 ಅರ್ಜಿಗಳನ್ನು ಪರಿಶೀಲಿಸಿದರು. ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರೆ, ಇನ್ನು ಕೆಲವು ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, “ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಜಿಲ್ಲೆಗೆ ಅವರ ಸಹಕಾರ ದೊಡ್ಡದಾಗಿದೆ. ಪ್ರಜಾಸೇವೆ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಲಭ್ಯವಿದ್ದು, ಜನರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ತಿಳಿಸಬೇಕು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುವುದು” ಎಂದರು.

ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಆರ್.ಎಂ. ಮಂಜುನಾಥಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ, ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾರಿ ಅಭಿಷೇಕ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ-1 ಶ್ರೀಮತಿ ಸುಜಾತ ಕೆ.ಆರ್., ಉಪ ಕಾರ್ಯದರ್ಶಿ-2 ಅನ್ನಪೂರ್ಣ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಣ್ಣ ಅವಹೇಳನ: ಪರಾರಿಯಾಗಲು ಯತ್ನ; ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಬಂಧನ

12ನೇ ಶತಮಾನದ ಮಹಾನ್ ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ಕುರಿತು ತಮ್ಮ...

ಈ ದಿನ ಸಂಪಾದಕೀಯ | ಮತಗಳ್ಳ ಬಿಜೆಪಿಗೆ ಪಾಠ ಕಲಿಸಿದ ಗ್ರಾಮೀಣ ರಾಜಸ್ಥಾನ!

ರಾಜಸ್ಥಾನದ ಪಂಚಾಯತಿ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ದೊರೆತ ಭಾರೀ ಮುನ್ನಡೆ ಬಿಜೆಪಿಯ ರಾಜಕೀಯ...

ಸಹಕಾರ ಸಂಘಗಳ ಸ್ವಾಯತ್ತ ಬೆಳವಣಿಗೆಗೆ ಸರ್ಕಾರ ಅವಕಾಶ ಕಲ್ಪಿಸಲಿ: ಎ.ಎಸ್.ಪೊನ್ನಣ್ಣ

ಕೊಡಗು ಸಹಕಾರ ಸಂಘ ಸಂಸ್ಥೆಗಳು ಸ್ವಾಯತ್ತವಾಗಿ ಬೆಳೆಯಲು ಸರ್ಕಾರ ಹೆಚ್ಚಿನ ಅವಕಾಶ...

ರದ್ದಾದ ವಿಮಾನಗಳಿಗೂ ಟಿಕೆಟ್ ಮಾರಾಟ, ರೀಫಂಡ್‌ಗಾಗಿ ಪರದಾಟ: ಸಂಕಷ್ಟದಲ್ಲಿ ಸ್ಪೈಸ್‌ಜೆಟ್

ತೀವ್ರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಅಗ್ಗದ ದರದ ವಿಮಾನಯಾನ ಸಂಸ್ಥೆ...