ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

Date:

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಚಿತ್ತಾಕುಲ ಪೊಲೀಸರು ಬಂಧಿಸಿ, 63,480 ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ನವೆಂಬರ್ 28ರಂದು ಬೆಳಿಗ್ಗೆ ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಾಟವಾಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಸಮೀರ ತಂದೆ ಸಂಜಯ ಮಾಳೇಕರ, ಹೊಟೆಗಾಳಿ, ಕಾರವಾರ ತಾಲೂಕು ಎಂಬಾತ ಯಾವುದೇ ಪಾಸ್ ಅಥವಾ ಪರವಾನಗಿ ಇಲ್ಲದೆ ಗೋವಾ ರಾಜ್ಯದಲ್ಲಿ ತಯಾರಾದ ವಿವಿಧ ಮಾದರಿಯ 363 ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಆರೋಪಿತನು ಗೋವಾ ಗಡಿಯಿಂದ ಮೈಂಗಿಣಿ ಅರಣ್ಯ ಪ್ರದೇಶದ ಕಾಲುದಾರಿಯಲ್ಲಿ ಚೀಲಗಳನ್ನು ತಲೆಯ ಮೇಲೆ ಹೊತ್ತುಕೊಂಡು ಬಂದು, ಮದ್ಯದ ಬಾಟಲಿಗಳನ್ನು ಅರಣ್ಯ ಪ್ರದೇಶದಲ್ಲಿ ಸಂಗ್ರಹಿಸಿ, ಬಳಿಕ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶ ಹೊಂದಿದ್ದ ಎನ್ನಲಾಗಿದೆ. ದಾಳಿ ವೇಳೆ ಆತನ ವಶದಲ್ಲಿದ್ದ ಒಟ್ಟು 63,480 ರೂ. ಮೌಲ್ಯದ 363 ಮದ್ಯದ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿದೆ.

ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ.ಜಿ., ಪೊಲೀಸ್ ಉಪಾಧೀಕ್ಷಕ ಜಿ.ಎಸ್. ಲೋಕಾಪುರ ಹಾಗೂ ಕದ್ರಾ ವೃತ್ತದ ಸಿಪಿಐ ಪ್ರಭಾಕರ ಧರ್ಮಟ್ಟಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕ ಪರಶುರಾಮ ಮತ್ತು ಸಿಬ್ಬಂದಿಗಳಾದ ಎ.ಎಸ್.ಐ ಸಂತೋಷ ನಾಯ್ಕ, ಖಲಂದರ ಡಾಲಾಯತ್, ಗೌತಮ ರೊಡ್ಡನವರ ಹಾಗೂ ಅರ್ಜುನ ದೇಸಾಯಿ ಅವರ ತಂಡ ಕಾರ್ಯಾಚರಣೆ ನಡೆಸಿದೆ.

ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಿದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾರಾಯಣ ಗುರುಗಳ ಹೆಸರಿನಲ್ಲಿ ಒಂದಾಗಿರುವುದು ಸಮಾಜದ ಶಕ್ತಿ: ಸಚಿವ ಮಧು ಬಂಗಾರಪ್ಪ

ಸಮಾಜದ ಒಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಾವೆಲ್ಲರೂ...

ಜನನುಡಿ 2026 | ಫ್ಯಾಸಿಸಂ ಯಾವತ್ತೂ ನಮ್ಮ ಆಯ್ಕೆ ಆಗಬಾರದು: ಶಿವಸುಂದರ್

"ಫ್ಯಾಸಿಸಂನಲ್ಲಿ ಉಗ್ರ ರೂಪವೂ ಇದೆ, ಮಂದ ರೂಪವೂ ಇದೆ. ಉಗ್ರ...

ಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು

ಬೆಂಗಳೂರು-ಮೈಸೂರು ಹೆದ್ಧಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಟಿಪ್ಪರ್‌ಗೆ ಡಿಕ್ಕಿ ಹೊಡೆದ...

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು ಮಹಿಳೆಯರ ಆರೋಗ್ಯಕ್ಕೆ ಸವಾಲು

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ...