ಪಶುವೈದ್ಯಾಧಿಕಾರಿಗಳ ನೇಮಕಾತಿ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ: ಆಂತರಿಕ ತನಿಖಾ ಉಪಸಮಿತಿ ರಚನೆ

Date:

ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ ಆಯೋಗವು 2026ರ ಜುಲೈ 26ರಂದು ತುರ್ತು ಸಭೆ ನಡೆಸಿದೆ.

ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಹಾಗೂ ಆರೋಪಗಳ ಗಂಭೀರತೆಯನ್ನು ಮನಗಂಡು ಆಯೋಗವು ಕೆಳಕಂಡ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಆಯೋಗದ ಕಾರ್ಯದರ್ಶಿ ಶ್ರೀಮತಿ ಕೆ. ಜ್ಯೋತಿ ತಿಳಿಸಿದ್ದಾರೆ.

- Advertisement -

ಪ್ರಾಥಮಿಕ ಮಾಹಿತಿಯ ಪರಿಶೀಲನೆ: 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು, ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಹಾಗೂ 2026ರ ಜುಲೈ 25ರಂದು ಪೊಲೀಸ್ ಇಲಾಖೆ ನೀಡಿರುವ ಪ್ರಾಥಮಿಕ ಮಾಹಿತಿ ವರದಿಯನ್ನು (FIR) ಆಯೋಗವು ಗಂಭೀರವಾಗಿ ಪರಿಗಣಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಆಂತರಿಕ ತನಿಖಾ ಉಪಸಮಿತಿ ರಚನೆ: ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗದ ಹಿರಿಯ ಸದಸ್ಯರ ಅಧ್ಯಕ್ಷತೆಯಲ್ಲಿ ಆಂತರಿಕ ತನಿಖಾ ಉಪಸಮಿತಿಯನ್ನು ರಚಿಸಲಾಗಿದೆ.

ಒಂದು ವಾರದಲ್ಲಿ ವರದಿ ಸಲ್ಲಿಕೆ: ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತ ಹಾಗೂ ಸಂಬಂಧಿತ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ವಾಸ್ತವಾಂಶಗಳ ಕುರಿತ ವಿವರವಾದ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸುವಂತೆ ಉಪಸಮಿತಿಗೆ ನಿರ್ದೇಶನ ನೀಡಲಾಗಿದೆ.

ತನಿಖಾ ಕಾರ್ಯಕ್ಕೆ ಅಗತ್ಯವಾದ ಆಡಳಿತಾತ್ಮಕ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ಕೆಪಿಎಸ್‌ಸಿ ಕಾರ್ಯದರ್ಶಿಯನ್ನು ಹಾಗೂ ಅಗತ್ಯ ಕಾನೂನು ಸಲಹೆ ನೀಡಲು ಕಾನೂನು ವಿಭಾಗದ ಮುಖ್ಯಸ್ಥರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ.

ಆಂತರಿಕ ತನಿಖಾ ಉಪಸಮಿತಿ ತನ್ನ ಅಂತಿಮ ವರದಿಯನ್ನು ಸಲ್ಲಿಸುವವರೆಗೆ, 2026ರ ಜುಲೈ 17ರಂದು ಪ್ರಕಟಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯ ಜಾರಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಆಯೋಗವು ನಿರ್ಧರಿಸಿದೆ.

ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಬದ್ಧವಾಗಿದ್ದು, ತನಿಖಾ ವರದಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...