ಇಸ್ಲಾಮಾಬಾದ್‌ಗೆ ಬಂದಿಳಿದ ಇರಾನ್ ನಿಯೋಗ: ‘ಮೊದಲು ಷರತ್ತುಗಳಿಗೆ ಒಪ್ಪಿ, ಆಮೇಲೆ ಅಮೆರಿಕದೊಂದಿಗೆ ಮಾತುಕತೆ’

Date:

ಅಮೆರಿಕದೊಂದಿಗಿನ ಶಾಂತಿ ಮಾತುಕತೆಗಾಗಿ ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಖೆರ್ ಖಾಲಿಬಾಫ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಶುಕ್ರವಾರ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ಗೆ ಆಗಮಿಸಿದೆ. ಆದರೆ, “ವಾಷಿಂಗ್ಟನ್ ಮೊದಲು ನಮ್ಮ ಪೂರ್ವ ಷರತ್ತುಗಳನ್ನು ಒಪ್ಪಿಕೊಂಡರೆ ಮಾತ್ರ ಮಾತುಕತೆ ಆರಂಭವಾಗಲಿದೆ” ಎಂದು ಇರಾನ್ ಕಡ್ಡಿ ಮುರಿದಂತೆ ಸ್ಪಷ್ಟಪಡಿಸಿದೆ. ಈ ಮೂಲಕ ನಿರ್ಣಾಯಕ ಹಂತದ ರಾಜತಾಂತ್ರಿಕ ಮಾತುಕತೆಗೂ ಮುನ್ನವೇ ಇರಾನ್ ತನ್ನ ಕಠಿಣ ನಿಲುವನ್ನು ಪ್ರದರ್ಶಿಸಿದೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

- Advertisement -

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ರಕ್ಷಣಾ ಮಂಡಳಿಯ ಕಾರ್ಯದರ್ಶಿ, ಕೇಂದ್ರ ಬ್ಯಾಂಕ್ ಗವರ್ನರ್ ಹಾಗೂ ಹಲವು ಸಂಸತ್ ಸದಸ್ಯರು ಸೇರಿದಂತೆ ರಾಜಕೀಯ, ಸೇನಾ ಮತ್ತು ಆರ್ಥಿಕ ವಲಯದ ಉನ್ನತ ಅಧಿಕಾರಿಗಳನ್ನು ಒಳಗೊಂಡ ಬರೋಬ್ಬರಿ 71 ಸದಸ್ಯರ ಬೃಹತ್ ನಿಯೋಗವು ಪಾಕಿಸ್ತಾನಕ್ಕೆ ಬಂದಿಳಿದಿದೆ. ಅತ್ತ ಅಮೆರಿಕದ ಕಡೆಯಿಂದಲೂ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದಲ್ಲಿ, ವಿಶೇಷ ಪ್ರತಿನಿಧಿಗಳಾದ ಸ್ಟೀವ್ ವಿಟ್ಕಾಫ್ ಮತ್ತು ಜೇರೆಡ್ ಕುಶ್ನರ್ ಅವರನ್ನು ಒಳಗೊಂಡ ನಿಯೋಗವು ಈ ವಾರಾಂತ್ಯದ ಮಹತ್ವದ ಮಾತುಕತೆಗಾಗಿ ಶುಕ್ರವಾರವೇ ಪ್ರಯಾಣ ಬೆಳೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಸಾಮ್ರಾಜ್ಯಶಾಹಿಯ ಅಟ್ಟಹಾಸಕ್ಕೆ ಪ್ರತಿರೋಧದ ಕಿಚ್ಚು: ಅಮೆರಿಕ-ಇಸ್ರೇಲ್ ದಬ್ಬಾಳಿಕೆಯ ವಿರುದ್ಧ ಸಿಡಿದೆದ್ದ ಲೆಬನಾನ್

ಮಾತುಕತೆಗೂ ಮುನ್ನ ನಿರ್ದಿಷ್ಟ ಹೆಜ್ಜೆಗಳನ್ನು ಇಡಲೇಬೇಕು ಎಂದು ಇರಾನ್ ಪಟ್ಟು ಹಿಡಿದಿದೆ. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ನಿಲ್ಲಿಸಿ ಕದನ ವಿರಾಮ ಘೋಷಿಸಬೇಕು ಮತ್ತು ಆರ್ಥಿಕ ನಿರ್ಬಂಧಗಳ ಅಡಿಯಲ್ಲಿ ಸ್ಥಗಿತಗೊಳಿಸಲಾಗಿರುವ ಇರಾನ್‌ನ ಶತಕೋಟಿ ಡಾಲರ್ ಆಸ್ತಿಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂಬುದು ಇರಾನ್‌ನ ಪ್ರಮುಖ ಷರತ್ತಾಗಿದೆ.

ಈ ಬೇಡಿಕೆಗಳನ್ನು ಈಡೇರಿಸಿದರಷ್ಟೇ ಅಧಿಕೃತ ಮಾತುಕತೆ ಪ್ರಕ್ರಿಯೆ ಮುಂದಕ್ಕೆ ಹೋಗಲಿದೆ ಎಂದು ಸ್ಪೀಕರ್ ಖಾಲಿಬಾಫ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಅಮೆರಿಕದ ಮೇಲೆ ತಮಗೆ “ಭರವಸೆ ಇದೆ, ಆದರೆ ನಂಬಿಕೆ ಇಲ್ಲ” ಎಂದೂ ಅವರು ಮಾರ್ಮಿಕವಾಗಿ ಹೇಳಿದ್ದಾರೆ.

ಕಳೆದ ಫೆಬ್ರವರಿ 28ರಂದು ಇರಾನ್‌ನ ಸರ್ವೋಚ್ಚ ನಾಯಕ ಅಯಾತುಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಭುಗಿಲೆದ್ದಿದ್ದ ತೀವ್ರ ಸಂಘರ್ಷದ ನಂತರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ವಾರಗಳ ಕದನ ವಿರಾಮ ಘೋಷಿಸಿದ್ದರು.

ಈ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಮತ್ತು ಉಭಯ ದೇಶಗಳ ನಡುವಿನ ಅಪನಂಬಿಕೆಯ ವಾತಾವರಣದ ನಡುವೆಯೇ ಪಾಕಿಸ್ತಾನದ ಆತಿಥ್ಯದಲ್ಲಿ ಈ ಹೈ-ವೋಲ್ಟೇಜ್ ಸಭೆ ನಡೆಯುತ್ತಿದೆ. ವಿಶೇಷವೆಂದರೆ, 1979ರ ಇಸ್ಲಾಮಿಕ್ ಕ್ರಾಂತಿಯ ನಂತರ ಹಲವು ದಶಕಗಳ ಬದ್ಧ ದ್ವೇಷದ ಬಳಿಕ ಅಮೆರಿಕ-ಇರಾನ್ ನಡುವೆ ನಡೆಯುತ್ತಿರುವ ಅತ್ಯುನ್ನತ ಮಟ್ಟದ ನೇರ ಮುಖಾಮುಖಿ ಮಾತುಕತೆ ಇದಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...