ಶಾಂತಿ ಒಪ್ಪಂದಕ್ಕೆ ಮುಂದಾದ ಇರಾನ್; ನಮಗೆ ಇನ್ನೂ ತೃಪ್ತಿಯಾಗಿಲ್ಲ ಎಂದ ಟ್ರಂಪ್

Date:

ಇರಾನ್ ಜೊತೆ ಮಾತುಕತೆ ಹಂತದಲ್ಲಿರುವ ಶಾಂತಿ ಒಪ್ಪಂದದ ನಿಯಮಗಳ ಕುರಿತು ಅಮೆರಿಕ ಇನ್ನೂ ‘ತೃಪ್ತಿ ಹೊಂದಿಲ್ಲ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

- Advertisement -

ಪ್ರಸ್ತುತ ನಡೆಯುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಇರಾನ್ ಒಪ್ಪಂದ ಮಾಡಿಕೊಳ್ಳಲು ತೀವ್ರ ಆಸಕ್ತಿ ಹೊಂದಿದೆಯಾದರೂ, ಸದ್ಯದ ಪರಿಸ್ಥಿತಿಯಲ್ಲಿ ಒಪ್ಪಂದ ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ. ಒಂದು ವೇಳೆ ಒಪ್ಪಂದ ಸಾಧ್ಯವಾಗದಿದ್ದರೆ ಇರಾನ್ ಮೇಲಿನ ವೈಮಾನಿಕ ದಾಳಿಗಳನ್ನು ಪುನರಾರಂಭಿಸಲು ಅಮೆರಿಕ ಸಿದ್ಧವಿದೆ ಎಂದಿದ್ದಾರೆ ಟ್ರಂಪ್.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಶ್ವೇತಭವನದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, “ಇರಾನ್ ಹೇಗಾದರೂ ಮಾಡಿ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದೆ. ಏಕೆಂದರೆ ಅವರ ಬಳಿ ಈಗ ಬೇರೆ ದಾರಿಯಿಲ್ಲ. ಅವರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಮಾತುಕತೆ ನಡೆಸುತ್ತಿದ್ದಾರೆ. ಆದರೆ, ಸದ್ಯದ ಒಪ್ಪಂದದ ಷರತ್ತುಗಳು ನಮಗೆ ತೃಪ್ತಿ ತಂದಿಲ್ಲ. ಒಂದು ವೇಳೆ ನಮ್ಮ ನಿರೀಕ್ಷೆಗೆ ತಕ್ಕಂತೆ ಒಪ್ಪಂದವಾಗದಿದ್ದರೆ, ನಾವು ನಮ್ಮ ಕೆಲಸವನ್ನು ದಾಳಿಗಳ ಮೂಲಕವೇ ಮುಗಿಸಬೇಕಾಗುತ್ತದೆ” ಎಂದಿದ್ದಾರೆ.

ಇದೇ ವೇಳೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಮಾತನಾಡಿ, “ಮಾತುಕತೆಯಲ್ಲಿ ಸ್ವಲ್ಪ ಪ್ರಗತಿ ಮತ್ತು ಆಸಕ್ತಿ ಕಂಡುಬಂದಿದೆ. ಮುಂಬರುವ ದಿನಗಳಲ್ಲಿ ಇದು ಯಾವ ತಿರುವು ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ” ಎಂದು ಹೇಳಿದ್ದಾರೆ.

ಇರಾನ್ ಮಾಧ್ಯಮಗಳ ವರದಿ ‘ಸಂಪೂರ್ಣ ಸುಳ್ಳು’ ಎಂದ ಶ್ವೇತಭವನ:

ಇದಕ್ಕೂ ಮುನ್ನ ಇರಾನ್‌ನ ಸರ್ಕಾರಿ ದೂರದರ್ಶನವು ಕರಡು ಒಪ್ಪಂದದ ವಿವರಗಳನ್ನು ಪ್ರಸಾರ ಮಾಡಿತ್ತು. “ಅಮೆರಿಕವು ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನವನ್ನು ತೆರವುಗೊಳಿಸಲಿದೆ ಹಾಗೂ ಇರಾನ್ ಸುತ್ತಮುತ್ತಲಿನ ಪ್ರದೇಶದಿಂದ ತನ್ನ ಸೈನ್ಯವನ್ನು ಹಿಂಪಡೆಯಲಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳ ಸಂಚಾರಕ್ಕಾಗಿ ಮುಕ್ತಗೊಳಿಸಲಿದೆ” ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ, ಈ ವರದಿಯನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಶ್ವೇತಭವನ, “ಇದು ಸಂಪೂರ್ಣ ಕಲ್ಪಿತ ಮತ್ತು ಸುಳ್ಳು ವರದಿ” ಎಂದು ಜರೆದಿದೆ. ಈ ಕುರಿತು ಪ್ರತಿಕ್ರಿಯಿಸಿದ ಟ್ರಂಪ್, “ಹಾರ್ಮುಜ್ ಜಲಸಂಧಿಯ ಮೇಲೆ ಯಾವುದೇ ಒಂದು ದೇಶದ ನಿಯಂತ್ರಣವನ್ನು ಒಪ್ಪಲು ಸಾಧ್ಯವಿಲ್ಲ, ಅದನ್ನು ತಕ್ಷಣವೇ ಎಲ್ಲರಿಗೂ ಮುಕ್ತಗೊಳಿಸಬೇಕು. ಅಲ್ಲದೆ, ಇರಾನ್ ಮೇಲಿನ ಆರ್ಥಿಕ ನಿರ್ಬಂಧಗಳನ್ನು ಸಡಿಲಗೊಳಿಸುವ ಅಥವಾ ಇರಾನ್ ಹೊಂದಿರುವ ಪುಷ್ಟೀಕರಿಸಿದ ಯುರೇನಿಯಂ ಅನ್ನು ರಷ್ಯಾ ಮತ್ತು ಚೀನಾಕ್ಕೆ ಹಸ್ತಾಂತರಿಸಲು ಅನುಮತಿಸುವ ಯಾವುದೇ ಪ್ರಸ್ತಾಪ ಸದ್ಯಕ್ಕಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಇರಾನ್‌ಗೆ ಬೆಂಬಲ: ಕೆಂಪು ಸಮುದ್ರ ಮಾರ್ಗದಲ್ಲಿ ದಾಳಿ ಸಿದ್ಧ ಎಂದ ಹೂಥೀ ನಾಯಕ

ಕಳೆದ ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್ ಮತ್ತು ಗಲ್ಫ್ ದೇಶಗಳ ಮೇಲಿನ ಅಮೆರಿಕ ನೆಲೆಗಳ ಮೇಲೆ ದಾಳಿ ನಡೆಸಿ, ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿತ್ತು. ಇದರಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೇರಿತ್ತು. ಏಪ್ರಿಲ್ 8 ರಂದು ಉಭಯ ದೇಶಗಳ ನಡುವೆ ಕದನ ವಿರಾಮ ಏರ್ಪಟ್ಟಿದ್ದರೂ, ಇತ್ತೀಚಿನ ದಿನಗಳಲ್ಲಿ ಅಮೆರಿಕ ಇರಾನ್‌ನ ಕ್ಷಿಪಣಿ ನೆಲೆಗಳು ಮತ್ತು ದೋಣಿಗಳ ಮೇಲೆ  ಸರಣಿ ದಾಳಿಗಳನ್ನು ನಡೆಸಿರುವುದರಿಂದ ಕದನ ವಿರಾಮ ಮುರಿದು ಬೀಳುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...