ಜನನುಡಿ 2026 | ಶಿಕ್ಷಣಕ್ಕಾಗಿ ನಡೆದ ಹೋರಾಟವನ್ನು ಕೇವಲ ಜೆನ್-ಜಿ ಚಳವಳಿಯೆಂದು ಕರೆಯಬಾರದು: ಶರಣ್ಯ ವರ್ಮ

Date:

ಜನನುಡಿ 2026ರ ಉದ್ಘಾಟನಾ ಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ವಿದ್ಯಾರ್ಥಿ ಚಳವಳಿಯ ಪ್ರತಿನಿಧಿ ಶರಣ್ಯ ವರ್ಮ, ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣ, ಶುಲ್ಕ ಹೆಚ್ಚಳ, ಜಾತಿ ತಾರತಮ್ಯ ಹಾಗೂ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ನಿರ್ಬಂಧಗಳ ವಿರುದ್ಧ ವಿದ್ಯಾರ್ಥಿಗಳು ಸಂಘಟಿತ ಹೋರಾಟ ನಡೆಸಬೇಕೆಂದು ಕರೆ ನೀಡಿದರು.

- Advertisement -

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಎನ್‌ಟಿಎ ವೈಫಲ್ಯ, ಸರ್ಕಾರಿ ಶಾಲೆಗಳ ಮುಚ್ಚುವಿಕೆ, ಶಿಕ್ಷಣದ ಕೇಂದ್ರೀಕರಣ ಮತ್ತು ಹೆಚ್ಚುತ್ತಿರುವ ಶುಲ್ಕಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಪಾಯ ತಂದೊಡ್ಡಿವೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದು ಟೀಕಿಸಿದ ಅವರು, ನೀತಿಯನ್ನು ಹಿಂಪಡೆಯಬೇಕು ಹಾಗೂ ಪರೀಕ್ಷೆಗಳ ಕೇಂದ್ರೀಕರಣವನ್ನು ಕೊನೆಗೊಳಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ, ಲಿಂಗ ತಾರತಮ್ಯ, ಹಾಸ್ಟೆಲ್ ಕೊರತೆ, ಬೋಧಕ ಸಿಬ್ಬಂದಿ ಅಭಾವ ಮತ್ತು ವಿದ್ಯಾರ್ಥಿ ಸಂಘಗಳ ಚುನಾವಣೆಗಳ ಮೇಲಿನ ನಿರ್ಬಂಧಗಳು ಕ್ಯಾಂಪಸ್ ಪ್ರಜಾಪ್ರಭುತ್ವಕ್ಕೆ ಸವಾಲಾಗಿವೆ. ರೋಹಿತ್ ಕಾಯ್ದೆ ಜಾರಿ, ಸುರಕ್ಷಿತ ಕ್ಯಾಂಪಸ್‌ಗಳು ಹಾಗೂ ಚುನಾಯಿತ ವಿದ್ಯಾರ್ಥಿ ಸಂಘಗಳ ಸ್ಥಾಪನೆಗೆ ಹೋರಾಟ ಅಗತ್ಯ ಎಂದು ಹೇಳಿದರು.

ಸಾಹಿತ್ಯ ಮತ್ತು ಸಂಸ್ಕೃತಿ ರಾಜಕಾರಣದಿಂದ ಪ್ರತ್ಯೇಕವಲ್ಲ. ಜನನುಡಿಯಂತಹ ವೇದಿಕೆಗಳು ಭಿನ್ನಾಭಿಪ್ರಾಯ, ಪ್ರಶ್ನೆ ಮತ್ತು ವಿಚಾರ ವಿನಿಮಯಕ್ಕೆ ಅವಕಾಶ ಕಲ್ಪಿಸಬೇಕು ಎಂದರು.

ಶಿಕ್ಷಣಕ್ಕಾಗಿ ನಡೆದ ಹೋರಾಟವನ್ನು ಕೇವಲ ಜೆನ್-ಜಿ ಚಳವಳಿ ಎಂದು ಕರೆಯಬಾರದು. ಅದು ಎಲ್ಲರಿಗೂ ಸಮಾನ ಶಿಕ್ಷಣದ ಹಕ್ಕು, ಸಾಮಾಜಿಕ ನ್ಯಾಯ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದು ಪ್ರತಿಪಾದಿಸಿದ ಅವರು,“ಎಲ್ಲಾ ಹೂವುಗಳನ್ನು ಕತ್ತರಿಸಲು ಪ್ರಯತ್ನಿಸಬಹುದು; ಆದರೆ ವಸಂತ ಬರುವುದನ್ನು ತಡೆಯಲು ಸಾಧ್ಯವಿಲ್ಲ, ಈ ಹೂವುಗಳು ಹಿಂದೆಯೂ ಅರಳಿವೆ, ಇಂದು ಅರಳುತ್ತಿವೆ, ಮುಂದೆಯೂ ಅರಳುತ್ತಲೇ ಇರುತ್ತವೆ” ಎಂಬ ಸಂದೇಶದೊಂದಿಗೆ ಭಾಷಣ ಮುಕ್ತಾಯಗೊಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಫ್ಯಾಸಿಸಂ ಯಾವತ್ತೂ ನಮ್ಮ ಆಯ್ಕೆ ಆಗಬಾರದು: ಶಿವಸುಂದರ್

"ಫ್ಯಾಸಿಸಂನಲ್ಲಿ ಉಗ್ರ ರೂಪವೂ ಇದೆ, ಮಂದ ರೂಪವೂ ಇದೆ. ಉಗ್ರ...

ಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು

ಬೆಂಗಳೂರು-ಮೈಸೂರು ಹೆದ್ಧಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಟಿಪ್ಪರ್‌ಗೆ ಡಿಕ್ಕಿ ಹೊಡೆದ...

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು ಮಹಿಳೆಯರ ಆರೋಗ್ಯಕ್ಕೆ ಸವಾಲು

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ...

‘ಪ್ರಣಾಮ್ ಮಹೋದಯ್’ ರ‍್ಯಾಗಿಂಗ್ ಪ್ರಕರಣ: ಲಖನೌದ ಕೆಜಿಎಂ ವಿವಿಯ 38 ಎಂಬಿಬಿಎಸ್ ವಿದ್ಯಾರ್ಥಿಗಳು ಅಮಾನತು

ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಹಾಗೂ ಕಿರುಕುಳ ನೀಡಿದ ಆರೋಪದ ಮೇಲೆ ಇಲ್ಲಿನ...