ಜಿಬಿಎ | ಮತಪತ್ರದ ಬದಲು ಇವಿಎಂ ಬಳಸಲು ಚುನಾವಣಾ ಆಯೋಗಕ್ಕೆ ಜೆಡಿಎಸ್‌ ಪತ್ರ

Date:

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನೂತನ ನಗರ ಪಾಲಿಕೆಗಳಿಗೆ ನಡೆಯಲಿರುವ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ (ಮತಪತ್ರ) ಪದ್ಧತಿಯ ಬದಲಿಗೆ ವಿದ್ಯುನ್ಮಾನ ಮತಯಂತ್ರಗಳನ್ನೇ (ಇವಿಎಂ) ಬಳಸುವಂತೆ ಕೋರಿ ಜಾತ್ಯತೀತ ಜನತಾ ದಳ (ಜೆಡಿಎಸ್‌) ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಒತ್ತಾಯಿಸಿದೆ.

- Advertisement -

​ಜೆಡಿಎಸ್ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ನಾಡಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯ ಚುನಾವಣಾ ಆಯೋಗಕ್ಕೆ ಪಕ್ಷದ ವತಿಯಿಂದ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಪತ್ರದಲ್ಲಿ ಇವಿಎಂ ಬಳಕೆಯಿಂದ ಆಗುವ ನಿಖರತೆ, ತ್ವರಿತಗತಿಯ ಫಲಿತಾಂಶ ಹಾಗೂ ಮತಪತ್ರ ಬಳಕೆಗೆ ಮರಳುವುದರಿಂದ ಉಂಟಾಗಬಹುದಾದ ಪ್ರಾಯೋಗಿಕ ಅನಾನುಕೂಲತೆಗಳನ್ನು ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಚುನಾವಣೆಗಳಲ್ಲಿ ಇವಿಎಂ ದುರ್ಬಳಕೆಯಾಗುತ್ತಿದೆ ಎಂಬ ಆರೋಪಗಳು ಈವರೆಗೆ ಯಾವುದೇ ಸಾಕ್ಷ್ಯಾಧಾರಗಳೊಂದಿಗೆ ಸಾಬೀತಾಗಿಲ್ಲ. ಹೀಗಿರುವಾಗ, ಅತ್ಯಂತ ಹಳೆಯದಾದ ಮತಪತ್ರಗಳ ಬಳಕೆಗೆ ಮರಳುವುದು ಪ್ರಸ್ತುತವಲ್ಲ. ತಂತ್ರಜ್ಞಾನದ ನೆರವಿನಿಂದ ನಡೆಯುವ ಪಾರದರ್ಶಕ ಮತದಾನ ಪ್ರಕ್ರಿಯೆಗೆ ಇವಿಎಂ ಬಳಕೆಯೇ ಅತ್ಯಂತ ಸೂಕ್ತ ಎಂದು ಜೆಡಿಎಸ್ ಆಯೋಗಕ್ಕೆ ಸಲ್ಲಿಸಿರುವ ಪತ್ರದಲ್ಲಿ ಪ್ರತಿಪಾದಿಸಿದೆ. ಗಮನಾರ್ಹವೆಂದರೆ, ಜೆಡಿಎಸ್‌ನ ಮಿತ್ರಪಕ್ಷವಾದ ಬಿಜೆಪಿ ಕೂಡ ಇದೇ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.

ಇದನ್ನು ಓದಿದ್ದೀರಾ? ಕಿಂಗ್ ಕೊಹ್ಲಿ ಜರ್ಸಿ ನಂಬರ್ 18ರ ಹಿಂದಿದೆ ಕಣ್ಣೀರಿನ ಕಥೆ

ಮುಂಬರುವ ಜಿಬಿಎ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ (ಎನ್‌ಡಿಎ) ಒಟ್ಟಾಗಿ ಎದುರಿಸಲಿದ್ದು, ನಾಯಕರ ನಡುವೆ ಯಾವುದೇ ಗೊಂದಲಗಳಿಲ್ಲ ಎಂದು ಪಕ್ಷವು ಸ್ಪಷ್ಟಪಡಿಸಿದೆ. ಈ ಚುನಾವಣಾ ಸಿದ್ಧತೆಗಳಿಗಾಗಿಯೇ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಈಗಾಗಲೇ 10 ಸದಸ್ಯರ ಉನ್ನತ ಮಟ್ಟದ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ. ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರನ್ನೊಳಗೊಂಡ ಈ ಸಮಿತಿಗೆ ವಾರ್ಡ್‌ವಾರು ಪಕ್ಷದ ಸಂಘಟನೆ, ಮೈತ್ರಿಕೂಟದ ಸೀಟು ಹಂಚಿಕೆ ಹಾಗೂ ಪ್ರಚಾರದ ಕಾರ್ಯತಂತ್ರ ರೂಪಿಸುವ ಹೊಣೆಗಾರಿಕೆಯನ್ನು ವಹಿಸಲಾಗಿದೆ.

​

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...