ಕಲಬುರಗಿ | ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಸಾವು

Date:

ಕಲಬುರಗಿ ನಗರದ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಅಪರಿಚಿತ ವ್ಯಕ್ತಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

- Advertisement -

ಶಹಾಬಾದ ರಿಂಗ್ ರೋಡ್‌ನಿಂದ ನಂದೂರ ಕಡೆಗೆ ಹೋಗುವ ರಸ್ತೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 50ರಿಂದ 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಗೆ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಈ ಕುರಿತು ಗುಬ್ಬಿ ಕಾಲೋನಿಯ ಆನಂದ ವಾಘಮೋರೆ ಅವರು ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೈಕ್‌ನಿಂದ ಬಿದ್ದು ಮಹಿಳೆ ಸಾವು

ಚಿತ್ತಾಪುರದಿಂದ ಕಲಬುರಗಿ ಕಡೆಗೆ ಮಗನೊಂದಿಗೆ ಬೈಕ್‌ನಲ್ಲಿ ಬರುತ್ತಿದ್ದ ಮಹಿಳೆಯೊಬ್ಬರು ನಗರದ ಶ್ರೀರಾಮ ಯಾರ್ಡ್ ಸಮೀಪದ ರಸ್ತೆ ಉಬ್ಬು (ಜಂಪ್) ಬಳಿ ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಮೃತ ಮಹಿಳೆಯನ್ನು ಚಿತ್ತಾಪುರದ ಪಾಲಪಗಲ್ಲಿ ನಿವಾಸಿ ಶಾಮಬಾಯಿ ನಾಗಣ್ಣ ಯಾದವ್ (59) ಎಂದು ಗುರುತಿಸಲಾಗಿದೆ.

ಶಾಮಬಾಯಿ ಅವರ ಪತಿ ನಾಗಣ್ಣ ಯಾದವ್ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದು, ಚಿತ್ತಾಪುರದಲ್ಲಿ ಮನೆ ನಿರ್ಮಿಸುತ್ತಿದ್ದಾರೆ. ಅ. 11ರಂದು ಶಾಮಬಾಯಿ ಅವರು ತಮ್ಮ ಮಗ ವೆಂಕಟೇಶ್ವರ ಅವರೊಂದಿಗೆ ಮನೆಗೆ ಅಳವಡಿಸಲು ಗ್ರಾನೈಟ್ ಮತ್ತು ಟೈಲ್ಸ್ ಖರೀದಿಸುವ ಉದ್ದೇಶದಿಂದ ಬೈಕ್‌ನಲ್ಲಿ ಕಲಬುರಗಿಗೆ ಬರುತ್ತಿದ್ದರು. ಈ ವೇಳೆ ಶ್ರೀರಾಮ ಯಾರ್ಡ್ ಸಮೀಪದ ರಸ್ತೆ ಉಬ್ಬು ಬಳಿ ಶಾಮಬಾಯಿ ಅವರು ಬೈಕ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ : ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಕೂಡಲೇ ಗಾಯಾಳುವನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತವು ವಿಶ್ವದ ಅತ್ಯಂತ ವಿಶ್ವಾಸಾರ್ಹ ಆರ್ಥಿಕ ಪಾಲುದಾರ: ಪ್ರಧಾನಿ ಮೋದಿ

ಭಾರತದ ಆರ್ಥಿಕ ಬೆಳವಣಿಗೆಯು ಬಲವಾದ ಆಧಾರಸ್ತಂಭಗಳು ಮತ್ತು ನಿರಂತರ ಸುಧಾರಣೆಗಳ ಮೇಲೆ...

ಕುಂಭಮೇಳದ ಹೊಸ್ತಿಲಲ್ಲಿ ಆತಂಕ: ನಾಸಿಕ್‌ ನೀರಿನಲ್ಲಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ ‘ಕ್ರೋಮಿಯಂ’ ಪತ್ತೆ

2027ರಲ್ಲಿ ಜರುಗಲಿರುವ ಕುಂಭಮೇಳಕ್ಕೆ ಸಜ್ಜಾಗುತ್ತಿರುವ ಮಹಾರಾಷ್ಟ್ರದ ನಾಸಿಕ್‌ ನಗರದಲ್ಲಿ ಆತಂಕಕಾರಿ ಬೆಳವಣಿಗೆಯೊಂದು...

‘ರಾವಣನ ದಹನ ಏಕೆ, ದುರ್ಯೋಧನನದ್ದೇಕಿಲ್ಲ?’ – ಮಾನವ ಹಕ್ಕುಗಳ ಆಯೋಗಕ್ಕೆ ಈ ಹಿಂದೆಯೂ ಸಲ್ಲಿಕೆಯಾಗಿತ್ತು ಅರ್ಜಿ

ವಿಜಯದಶಮಿ/ದಸರಾ ಹಬ್ಬದ ಸಮಯದಲ್ಲಿ ಪ್ರತಿವರ್ಷ ರಾವಣನ ಪೋಸ್ಟ‌ರ್ ಅಥವಾ ಗೊಂಬೆಯನ್ನು ದಹಿಸುವುದು...

ದೆಹಲಿ ಸಭೆಯಲ್ಲೂ ಸಿಗದ ಸ್ಪಂದನೆ: ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಪ್ರತಿಭಟನೆ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯೂ ಯಾವುದೇ...