NEET ಅಕ್ರಮ ಖಂಡಿಸಿ ಕರವೇ ಸ್ವಾಭಿಮಾನಿ ಸೇನಾ ಪ್ರತಿಭಟನೆ; ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Date:

ನೀಟ್(NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಿಂದ ನೊಂದು ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಪರೀಕ್ಷಾಂಗ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ) ಬಾಗಲಕೋಟೆ ಜಿಲ್ಲಾ ಘಟಕ ಆಗ್ರಹಿಸಿದೆ.

- Advertisement -

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಸವರಾಜ ಧರ್ಮಂತಿ, “ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ” ಎಂದು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಇಪ್ಪತ್ತೆರಡು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆಯೂ ಕೇಂದ್ರ ಸರ್ಕಾರ ಶಿಕ್ಷಣ ಸಚಿವರ ರಾಜೀನಾಮೆ ಪಡೆಯುವಲ್ಲಿ ಹಿಂಜರಿಕೆ ತೋರುತ್ತಿದೆ ಎಂದು ಅವರು ಟೀಕಿಸಿದ್ದಾರೆ.

“ಪ್ರಧಾನಮಂತ್ರಿ ವಿಡಿಯೋ ಸಂದೇಶದ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಆರೋಪಿಸಿದ ಅವರು, ಜುಲೈ 31, 2026ರೊಳಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ) ಬಾಗಲಕೋಟೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಸ್ಥಳೀಯ ಸಂಸದರ ನಿವಾಸ ಅಥವಾ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭಾವನೆಗಳಿಗೆ ಗೌರವ ನೀಡಿ, ಪ್ರಕರಣದ ಕುರಿತು ಪಾರದರ್ಶಕ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...