ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

Date:

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ ಮುಂಬರುವ ದಿನಗಳಲ್ಲಿ ಆರ್ಥಿಕ ಹೊರೆ ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು ಆಸ್ತಿಗಳ ಮಾರ್ಗಸೂಚಿ ದರವನ್ನು ಮತ್ತೊಮ್ಮೆ ಪರಿಷ್ಕರಿಸಿ, ಹೆಚ್ಚಿಸಲು ಗಂಭೀರ ಚಿಂತನೆ ನಡೆಸುತ್ತಿದೆ.

- Advertisement -

ಇತ್ತೀಚೆಗಷ್ಟೇ ಹಾಲಿನ ದರ ಮತ್ತು ಬಸ್ ಪ್ರಯಾಣ ದರ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ, ಈಗ ಆಸ್ತಿ ನೋಂದಣಿ ವೆಚ್ಚದ ಏರಿಕೆಯ ಬಿಸಿ ತಟ್ಟುವ ಲಕ್ಷಣಗಳು ಕಾಣಿಸುತ್ತಿವೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಈ ಕುರಿತು ಅಂತಿಮ ಹಂತದ ಸಮಾಲೋಚನೆಗಳನ್ನು ನಡೆಸುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಸ್ತಿ ಮಾರ್ಗಸೂಚಿ ದರವನ್ನು ಪರಿಷ್ಕರಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಈ ಹಿಂದೆ 2023ರ ಅಕ್ಟೋಬರ್ 1ರಂದು ಪ್ರದೇಶವಾರು 15% ರಿಂದ 30%ರಷ್ಟು ದರ ಏರಿಕೆ ಮಾಡಲಾಗಿತ್ತು. ಪ್ರತಿ ಎರಡು ವರ್ಷಕ್ಕೊಮ್ಮೆ ಮಾರ್ಗಸೂಚಿ ದರವನ್ನು ಪರಿಷ್ಕರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಕಳೆದ ವರ್ಷವೇ ಈ ಪ್ರಕ್ರಿಯೆ ಆರಂಭವಾಗಿದ್ದರೂ, ಆಗಸ್ಟ್ 31, 2025ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು 1% ರಿಂದ 2%ಗೆ ಹೆಚ್ಚಿಸಿದ ನಿರ್ಧಾರ ಹಾಗೂ ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಬೆಳವಣಿಗೆಗಳಿಂದಾಗಿ ಈ ಪ್ರಸ್ತಾವನೆ ವಿಳಂಬವಾಗಿತ್ತು. ಈಗ ಜಿಲ್ಲಾ ಮಟ್ಟದ ಸಭೆಗಳು ಪೂರ್ಣಗೊಂಡಿದ್ದು, ವಿಭಾಗೀಯ ಮಟ್ಟದ ಸಭೆಗಳ ನಂತರ ಅಂತಿಮ ವರದಿ ಸಲ್ಲಿಕೆಯಾಗಲಿದೆ ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಮುಲ್ಲೈ ಮುಹಿಲನ್ ಎಂ.ಪಿ. ಖಚಿತಪಡಿಸಿದ್ದಾರೆ.

ಈ ಬಾರಿಯ ದರ ಏರಿಕೆಯು ಎಲ್ಲಾ ಕಡೆ ಒಂದೇ ರೀತಿ ಇರುವುದಿಲ್ಲ. ರಸ್ತೆ ಸಂಪರ್ಕ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಭವಿಷ್ಯದ ಬೆಳವಣಿಗೆಯ ಆಧಾರದ ಮೇಲೆ ದರ ನಿಗದಿಪಡಿಸಲಾಗುತ್ತದೆ. 

ಬೆಂಗಳೂರು ನಗರದ ಹೊರವಲಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ದರ ಏರಿಕೆಯಾಗುವ ನಿರೀಕ್ಷೆಯಿದೆ.

ರಾಜ್ಯ ಹೆದ್ದಾರಿಗಳಿಗಿಂತ ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡಿರುವ ಆಸ್ತಿಗಳ ಮಾರ್ಗಸೂಚಿ ದರ ಹೆಚ್ಚಾಗಲಿದೆ.

ಮುಂಬರುವ ವಸತಿ, ಕೈಗಾರಿಕಾ ಮತ್ತು ವಾಣಿಜ್ಯ ಯೋಜನೆಗಳಿರುವ ಪ್ರದೇಶಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಸುತ್ತಮುತ್ತಲಿನ ಆಸ್ತಿಗಳಿಗೆ ಹೆಚ್ಚಿನ ದರ ನಿಗದಿಯಾಗಲಿದೆ. ಆದರೆ, ಸರಿಯಾದ ರಸ್ತೆ ಸಂಪರ್ಕವಿಲ್ಲದ ಗ್ರಾಮೀಣ ಭಾಗಗಳಲ್ಲಿ ಕಡಿಮೆ ಪ್ರಮಾಣದ ಏರಿಕೆ ಇರಲಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಮಾರ್ಗಸೂಚಿ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಕಡತ ಅಥವಾ ಮಾಹಿತಿ ಇನ್ನೂ ನನ್ನ ಗಮನಕ್ಕೆ ಬಂದಿಲ್ಲ. ಇಲಾಖಾ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿರಬಹುದು. ಕಡತ ನನ್ನ ಬಳಿಗೆ ಬಂದಾಗ ಆ ಬಗ್ಗೆ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಾರ್ಗಸೂಚಿ ದರ ಎಂದರೆ ಆಸ್ತಿ ನೋಂದಣಿಗಾಗಿ ಸರ್ಕಾರ ನಿಗದಿಪಡಿಸುವ ಕನಿಷ್ಠ ಮೌಲ್ಯವಾಗಿದೆ. ಮುದ್ರಾಂಕ ಶುಲ್ಕ  ಮತ್ತು ನೋಂದಣಿ ಶುಲ್ಕಗಳನ್ನು ಇದೇ ದರದ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ. ಒಂದು ವೇಳೆ ಸರ್ಕಾರ ಮಾರ್ಗಸೂಚಿ ದರವನ್ನು ಹೆಚ್ಚಿಸಿದರೆ, ಮಾರುಕಟ್ಟೆಯಲ್ಲಿ ಆಸ್ತಿಯ ಬೆಲೆ ಬದಲಾಗದಿದ್ದರೂ ಸಹ, ನೋಂದಣಿ ಸಮಯದಲ್ಲಿ ಖರೀದಿದಾರರು ಸರ್ಕಾರಕ್ಕೆ ಪಾವತಿಸಬೇಕಾದ ತೆರಿಗೆ ಮತ್ತು ಶುಲ್ಕಗಳ ಮೊತ್ತ ಗಣನೀಯವಾಗಿ ಏರಿಕೆಯಾಗಲಿದೆ. ಹೀಗಾಗಿ, ಆಸ್ತಿ ಖರೀದಿಸಲು ಯೋಜಿಸುತ್ತಿರುವವರು ಸರ್ಕಾರದ ಅಧಿಕೃತ ಅಧಿಸೂಚನೆ ಹೊರಬೀಳುವ ಮುನ್ನವೇ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವುದು ಆರ್ಥಿಕವಾಗಿ ಲಾಭದಾಯಕವಾಗಬಹುದು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ನಡೆದ ಒಂದು ದಿನದ ಸಂಪುಟ ಸಭೆಗೆ 3.83 ಕೋಟಿ ರೂ. ಖರ್ಚು!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸೆಪ್ಟೆಂಬರ್ 18ರಂದು ನಡೆದ ರಾಜ್ಯ ಸಚಿವ...

ದೋಷಪೂರಿತ ಬ್ರೇಕ್‌ನೊಂದಿಗೆ 463 ಕಿ.ಮೀ ಸಂಚರಿಸಿದ ವಂದೇ ಭಾರತ್‌ ರೈಲು; ತನಿಖೆಗೆ ಆದೇಶ

ಸರಿಯಾದ ಬ್ರೇಕ್‌ ವ್ಯವಸ್ಥೆಯಿಲ್ಲದೆ ಖಾಲಿ ವಂದೇ ಭಾರತ್‌ ರೈಲೊಂದು 463 ಕಿ.ಮೀ...

ಹಿರಿಯೂರು ಉಪಚುನಾವಣೆ | BJPಗೆ ಟಿಕೆಟ್‌, ಸ್ಪರ್ಧೆಯಿಂದ JDS ಔಟ್‌?

ಕಾಂಗ್ರೆಸ್‌ ಶಾಸಕ-ಸಚಿವ ಡಿ ಸುಧಾಕರ್ ಅವರ ಮರಣದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ...

ವಿಜಯಪುರ | ನ.19ರಿಂದ ಲೋಕಾಯುಕ್ತ, ಉಪಲೋಕಾಯುಕ್ತರಿಂದ ಜಿಲ್ಲಾ ಪ್ರವಾಸ

ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನವೆಂಬರ್ 19ರಿಂದ...