ಕೊಪ್ಪಳ | ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ: ಶಾಸಕ ಬಸವರಾಜ ರಾಯರೆಡ್ಡಿ

Date:

ಮೇ ತಿಂಗಳ 30ರ ಒಳಗಾಗಿ ಸಂಪುಟ ಪುನರ್ ರಚನೆಯಾಗುತ್ತದೆ, ಇಲ್ಲವೇ ವಿಸ್ತರಣೆ ಆಗುತ್ತದೆ. ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಸಿಎಂ ಆರ್ಥಿಕ ಸಲಹೆಗಾರರೂ ಆಗಿರುವ ಬಸವರಾಜ ರಾಯರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂದು ವೇಳೆ ಪಕ್ಷದ ವರಿಷ್ಠರು ಬದಲಾವಣೆ ಬಯಸಿದರೆ ಸಿದ್ದರಾಮಯ್ಯರ ಮಟ್ಟದ ಅನುಭವಿಯಾಗಿರುವ ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡಬೇಕೆಂಬುದು ನನ್ನ ಅಭಿಪ್ರಾಯವಾಗಿದೆ. ಆದರೆ ಮುಖ್ಯಮಂತ್ರಿ ಬದಲಾವಣೆ ಮಾಡುವುದು ಸರಿಯಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಸಂಪುಟ ಪುನರ್ ರಚನೆಯಾಗಬೇಕು. ಏಕೆಂದರೆ ಮೂರು ವರ್ಷ ಕಳೆದಿರುವುದರಿಂದ ಹೊಸ ಮುಖಗಳನ್ನು ತಂದರೆ ಉತ್ತಮ ಆಡಳಿತ ಕೊಡಲು ಸಾಧ್ಯ. ಉತ್ತಮ ಆಡಳಿತ ನೀಡಿದರೆ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಅನುಕೂಲವಾಗುತ್ತದೆ” ಎಂದು ರಾಯರೆಡ್ಡಿ ಹೇಳಿದರು.

“ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಸರಿಯಲ್ಲ. ಈ ಬೆಲೆ ಏರಿಕೆ ಇಷ್ಟಕ್ಕೆ ನಿಲ್ಲುವುದಿಲ್ಲ, ಇನ್ನೂ ಹೆಚ್ಚಾಗುತ್ತದೆ. ಲೀಟರ್‌ಗೆ 115 ರೂಪಾಯಿ ದಾಟುತ್ತದೆ. ಇದಕ್ಕೆ ಪ್ರಧಾನಿಯವರ ಆರ್ಥಿಕ ನೀತಿಗಳೇ ಕಾರಣ. ಆದ್ದರಿಂದ ಸಿದ್ದರಾಮಯ್ಯ ಹೇಳಿದಂತೆ ಪ್ರಧಾನಿ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮುಂಗಾರು ಆರಂಭಕ್ಕೂ ಮುನ್ನ ಅಗತ್ಯ ಸಿದ್ಧತೆಗೆ ಎ.ಎಸ್. ಪೊನ್ನಣ್ಣ ಸೂಚನೆ

“ದಿ. ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಕಚ್ಚಾತೈಲದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ, ಅಂದರೆ ಪ್ರತಿ ಬ್ಯಾರಲ್‌ಗೆ 145 ಡಾಲರ್ ಇತ್ತು. ಆ ವೇಳೆ ನಮ್ಮ ದೇಶದಲ್ಲಿ ಪೆಟ್ರೋಲ್ ಬೆಲೆ 53 ರೂಪಾಯಿ ಇತ್ತು. ಆದರೆ ಇದೀಗ ಕಚ್ಚಾ ತೈಲದ ಬೆಲೆ 119 ಡಾಲರ್ ಇದೆ. ಇದಕ್ಕೆ ಕಾರಣ ಪ್ರಧಾನಿಯವರು ಟ್ರಂಪ್‌ಗೆ ಹೆದರಿ ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ನಿಲ್ಲಿಸಿದ್ದಾರೆ” ಎಂದು ಹೇಳಿದರು.

“ರೂಪಾಯಿ ಮೌಲ್ಯ ಕುಸಿದಿದೆ, ರಪ್ತು ಕಡಿಮೆ ಆಗುತ್ತಿದೆ. ಆಮದು ಹೆಚ್ಚಾಗುತ್ತಿದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ರೂಪಾಯಿ ಬೇಡಿಕೆ ಕುಸಿಯುತ್ತಿದೆ. ಇದನ್ನೆಲ್ಲ ಸರಿಪಡಿಸಬೇಕೆಂದರೆ ಪ್ರಧಾನಿ ರಾಜೀನಾಮೆ ನೀಡಿ ಆರ್ಥಿಕ ತಜ್ಞರನ್ನು ಪ್ರಧಾನಿ ಮಾಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಈ ದಿನ ಸಂಪಾದಕೀಯ | ದೇಶಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗಲಿದೆಯೇ, ನಾಯಕರ ಮಾತು ಎಚ್ಚರಿಕೆಯ ಗಂಟೆಯೇ?

ವಿದೇಶಾಂಗ ನೀತಿ ಗೊತ್ತಿಲ್ಲದ ಜೈಶಂಕರ್‌, ಬಡವರು ಹೇಗೆ ಬದುಕುತ್ತಿದ್ದಾರೆ ಎಂದು ಅರಿಯದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ನೋಂದಣಿಯೇ ಆಗದ RSSನಿಂದ ಪೌರತ್ವ ನೋಂದಣಿ ಜಾರಿಗೆ ಆಗ್ರಹ: ಜನಗಣತಿ, SIR ನಡುವೆ ಹೊಸ ವಿವಾದ

ದೇಶದಲ್ಲಿ ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...