ಕುಮಟಾ | ರೈಲು ನಿಲ್ದಾಣದಲ್ಲಿ ಮೊಬೈಲ್‌ ಕಳ್ಳತನ: ಕೇರಳದ ವ್ಯಕ್ತಿಯಿಂದ ದೂರು

Date:

ಗೋವಾದಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕುಮಟಾ ರೈಲು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

- Advertisement -

ಕೇರಳದ ಕೋಜಿಕ್ಕೋಡ್ ನಗರದ ನಿವಾಸಿ, ವೃತ್ತಿಯಲ್ಲಿ ಕಾರ್ಪೆಂಟರ್ ಆಗಿರುವ ಸುಭೀಶ್ ಎನ್.ಪಿ. (39) ಮೊಬೈಲ್ ಕಳೆದುಕೊಂಡವರು. ಅಕ್ಟೋಬರ್ 8ರಂದು ರಾತ್ರಿ 1 ಗಂಟೆಗೆ ಗೋವಾ ರಾಜ್ಯದ ಕರ್ಮಾಲಿಯಿಂದ ನೇತ್ರಾವತಿ ಎಕ್ಸ್‌ಪ್ರೆಸ್ ರೈಲಿನಲ್ಲಿ (ಸಂಖ್ಯೆ 16345) ಕೇರಳದ ಕೋಜಿಕ್ಕೋಡ್‌ಗೆ ಪ್ರಯಾಣಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಅಂದು ಬೆಳಗಿನ ಜಾವ ಸುಮಾರು 4.50ರ ವೇಳೆಗೆ ರೈಲು ಕುಮಟಾ ನಿಲ್ದಾಣದಲ್ಲಿ ನಿಂತು ಹೊರಡುತ್ತಿದ್ದ ಸಂದರ್ಭದಲ್ಲಿ, ಅವರ ಕೈಯಲ್ಲಿದ್ದ Redmi 17 5G ಮೊಬೈಲ್ ಫೋನ್‌ನ್ನು ಅಪರಿಚಿತ ವ್ಯಕ್ತಿಯೊಬ್ಬ ಕಸಿದುಕೊಂಡು ರೈಲಿನಿಂದ ಕೆಳಗಿಳಿದು ಪರಾರಿಯಾಗಿದ್ದಾನೆ. ಈ ಕುರಿತು ಸುಭೀಶ್ ಅವರು ಕೇರಳದ ಕೋಜಿಕ್ಕೋಡ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸರು ಪ್ರಕರಣವನ್ನು ಅಪರಾಧ ಸಂಖ್ಯೆ 378/2026, ಕಲಂ 304(2) ಬಿಎನ್‌ಎಸ್ ಅಡಿಯಲ್ಲಿ ದಾಖಲಿಸಿಕೊಂಡು, ಘಟನೆ ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ತನಿಖೆಗಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೂಲಕ ಪ್ರಕರಣವನ್ನು ಕುಮಟಾ ಪೊಲೀಸರಿಗೆ ವರ್ಗಾಯಿಸಿದ್ದಾರೆ.

ದೂರಿನ ಆಧಾರದ ಮೇಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

ಶಿವಮೊಗ್ಗ | 67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆ: ಪರಿಶೀಲನೆಗೆ ಆಗ್ರಹ

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಸಂಬಂಧಪಟ್ಟ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ...

ಯುಪಿ ಚುನಾವಣೆ | ಎಸ್‌ಪಿ-ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಮಾತುಕತೆ ಆರಂಭ; 2-4 ದಿನಗಳಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಇಂಡಿಯಾ ಮೈತ್ರಿಕೂಟದ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600 ಕೋಟಿ ಕ್ಲಬ್ ಸೇರಿದ ದೇಶದ 5ನೇ ಸಿನಿಮಾ

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17...