ಸೋತ ಅಪ್ಪ, ಗೆದ್ದ ಮಗ: ಕೊಳತ್ತೂರಿನಲ್ಲಿ ಸ್ಟಾಲಿನ್‌ಗೆ ಆಘಾತ, ಉದಯನಿಧಿ ಹೆಗಲಿಗೆ ಡಿಎಂಕೆ ಹೊಣೆ?

Date:

ತಮಿಳುನಾಡಿನ ದ್ರಾವಿಡ ರಾಜಕಾರಣದಲ್ಲಿ ಅನಿರೀಕ್ಷಿತ ಹಾಗೂ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಕೊಳತ್ತೂರು ಕ್ಷೇತ್ರದಲ್ಲಿಯೇ ಪರಾಜಯಗೊಂಡಿದ್ದಾರೆ. ಆದರೆ, ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಚೇಪಾಕ್-ತಿರುವಲ್ಲಿಕೇಣಿ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ.

- Advertisement -

ಸ್ಟಾಲಿನ್ ಅವರಿಗೆ ಎದುರಾಗಿರುವ ಈ ಸೋಲು ಡಿಎಂಕೆ ಪಾಳಯದಲ್ಲಿ ಭಾರಿ ಆಘಾತ ಮೂಡಿಸಿದೆ. ಇತ್ತ, ಚೇಪಾಕ್-ತಿರುವಲ್ಲಿಕೇಣಿ ಅಖಾಡದಲ್ಲಿ ಟಿವಿಕೆ ಅಭ್ಯರ್ಥಿ (ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಂದಿದ್ದರು) ಡಿ. ಸೆಲ್ವಂ ಅವರನ್ನು ಮಣಿಸುವ ಮೂಲಕ ಉದಯನಿಧಿ ಅವರು ಸತತ ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಖ್ಯಮಂತ್ರಿಗಳೇ ಸೋಲುಂಡಿರುವುದರಿಂದ, ವಿಧಾನಸಭೆಯಲ್ಲಿ ಡಿಎಂಕೆ ಪಕ್ಷವನ್ನು ಮುನ್ನಡೆಸುವ ಹಾಗೂ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುವ ಸಂಪೂರ್ಣ ಜವಾಬ್ದಾರಿ ಈಗ ಪುತ್ರ ಉದಯನಿಧಿ ಅವರ ಹೆಗಲೇರುವುದು ಬಹುತೇಕ ಖಚಿತವಾಗಿದೆ.

ಇದನ್ನು ಓದಿದ್ದೀರಾ? ಗಲ್ಲಾಪೆಟ್ಟಿಗೆಯಿಂದ ಮತಪೆಟ್ಟಿಗೆ; ಜೋಸೆಫ್ ವಿಜಯ್ ಎಂಬ ಹೀರೋವಿನ ಸೂಪರ್ ಡ್ಯೂಪರ್ ಹಿಟ್ ರಾಜಕೀಯ ಪ್ರವೇಶ!

ರಾಜಧಾನಿ ಚೆನ್ನೈ ಭಾಗದಲ್ಲಿ ಈ ಬಾರಿ ಡಿಎಂಕೆ ತೀವ್ರ ಹಿನ್ನಡೆ ಅನುಭವಿಸಿದೆ. ಉದಯನಿಧಿ ಸ್ಟಾಲಿನ್ ಹಾಗೂ ಹಾರ್ಬರ್ ಕ್ಷೇತ್ರದಲ್ಲಿ ಗೆದ್ದ ನಿರ್ಗಮಿತ ಸಚಿವ ಪಿ.ಕೆ. ಶೇಖರ್ ಬಾಬು ಅವರನ್ನು ಹೊರತುಪಡಿಸಿ, ಚೆನ್ನೈನಲ್ಲಿ ಬೇರೆ ಯಾವುದೇ ಡಿಎಂಕೆ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿಲ್ಲ.

ಈ ಬಾರಿಯ ಚುನಾವಣೆಯಲ್ಲಿ ಅತ್ಯಂತ ಪ್ರಮುಖ ಘಟ್ಟವೆಂದರೆ, ನಟ ‘ದಳಪತಿ’ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷದ ಭರ್ಜರಿ ಉದಯ. ರಾಜ್ಯ ರಾಜಕಾರಣದಲ್ಲಿ ಟಿವಿಕೆ ಅಕ್ಷರಶಃ ಬಿರುಗಾಳಿ ಎಬ್ಬಿಸಿದ್ದು, ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ನೇರ ಹೊಡೆತ ನೀಡಿದೆ. ಕೊಳತ್ತೂರಿನಲ್ಲಿ ಸ್ಟಾಲಿನ್ ಅವರ ಸೋಲು ಹಾಗೂ ಚೆನ್ನೈ ಭಾಗದಲ್ಲಿ ಡಿಎಂಕೆಯ ಕಳಪೆ ಸಾಧನೆಗೆ ಟಿವಿಕೆ ಬೀರಿದ ಪ್ರಭಾವವೇ ಪ್ರಮುಖ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...