ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್ ಟವರ್ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಂಪಾಪುರದಲ್ಲಿ 400 ಕೆ.ವಿ.ವಿದ್ಯುತ್ ಉಪಕೇಂದ್ರ ಸ್ಥಾಪನೆ, ಅದಕ್ಕೆ ಸಂಬಂಧಿಸಿದ 400 ಕೆ.ವಿ. ಮತ್ತು 220 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗಗಳ ಅಳವಡಿಕೆ ಯೋಜನೆಡಿ ರಹದಾರಿ ಪರಿಹಾರ ನಿಗದಿಪಡಿಸುವ ಸಂಬಂಧ ಶುಕ್ರವಾರ ನಡೆದ ದರ ನಿರ್ಧರಣಾ ಸಲಹಾ ಭೂಮಾಲೀಕರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಭವಿಷ್ಯದ ವಿದ್ಯುತ್ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದೆ ವಿದ್ಯುತ್ ಪ್ರಸರಣ ಮಾರ್ಗ ಅಳವಡಿಕೆ ಕಾಮಗಾರಿಯಲ್ಲಿ ರೈತರ ಮನೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ತಾಂತ್ರಿಕವಾಗಿ ಸಾಧ್ಯವಿರುವ ಪರ್ಯಾಯ ಮಾರ್ಗಗಳನ್ನು ಪರಿಶೀಲಿಸಿ, ಸರ್ಕಾರಿ ಜಮೀನು ಲಭ್ಯವಿದ್ದಲ್ಲಿ ಆದ್ಯತೆ ನೀಡುವ ಮೂಲಕ ರೈತರಿಗೆ ಕನಿಷ್ಠ ತೊಂದರೆಯಾಗುವಂತೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ’ ಎಂದು ಹೇಳಿದರು.
ಸರ್ವೆ ನಂಬರ್‌ವಾರು ನಕ್ಷೆ ಸಿದ್ಧಪಡಿಸಿ, ಟವರ್ ಅಳವಡಿಕೆಗೆ ಬಳಕೆಯಾಗುವ ಜಮೀನಿನ ವಿಸ್ತೀರ್ಣ ಹಾಗೂ ಪ್ರಸರಣ ಮಾರ್ಗದ ವ್ಯಾಪ್ತಿಗೆ ಒಳಪಡುವ ಪ್ರದೇಶದ ವಿವರಗಳನ್ನು ಸ್ಪಷ್ಟವಾಗಿ ತಿಳಿಸಬೇಕು. ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗುವ ಗ್ರಾಮಗಳು, ಭೂಮಾಲೀಕರ ಹೆಸರು ಹಾಗೂ ಸರ್ವೆ ನಂಬರ್‌ಗಳ ಸಂಪೂರ್ಣ ಮಾಹಿತಿ ರೈತರಿಗೆ ಮುಂಚಿತವಾಗಿ ಸಂಬಂಧಪಟ್ಟ ಕಂಪನಿಗಳಿಗೆ ತಿಳಿಸಬೇಕು’ ಎಂದು ನಿರ್ದೇಶನ ನೀಡಲಾಗಿದೆ.
‘ರೈತರ ಆಕ್ಷೇಪಣೆ ಹಾಗೂ ಜಮೀನುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಾಲೂಕಿನಲ್ಲಿ ಸಹಾಯಕ ಆಯುಕ್ತರು, ತಹಶೀಲ್ದಾರ್ ಹಾಗೂ ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಒಳಗೊಂಡಿರುವ ಸಮಿತಿ ರಚಿಸಲಾಗಿದೆ. ಸಮಿತಿಯು ರೈತರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ’ ಎಂದರು.
‘ಸರ್ಕಾರ ನಿಗದಿಪಡಿಸಿರುವಂತೆ ಜಮೀನು ಮತ್ತು ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು. ರೈತರು ಹೆಚ್ಚಿನ ಪರಿಹಾರ ಕೋರಿ ಮನವಿ ಸಲ್ಲಿಸುವುದಾದರೆ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬಹುದು. ಮಾರ್ಗಸೂಚಿಯಂತೆ ಟವರ್ ಅಳವಡಿಕೆಗೆ ಬಳಸುವ ಜಮೀನಿಗೆ ಮಾರ್ಗಸೂಚಿ ಮೌಲ್ಯದ 200 ಪಟ್ಟು ಪರಿಹಾರ ಮತ್ತು ವಿದ್ಯುತ್ ಪ್ರಸರಣ ಮಾರ್ಗದ ವ್ಯಾಪ್ತಿಗೆ ಶೇ30ರಷ್ಟು ಪರಿಹಾರ ನೀಡಲು ಅವಕಾಶವಿದೆ. ಈ ಸೂಚನೆಗಳ ಅನ್ವಯ ಪರಿಹಾರ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ರೈತರು ಭಾಗವಹಿಸಿದ್ದರು.




