ಮಂಡ್ಯ । ರಾಷ್ಟ್ರೀಯ ಹೆದ್ದಾರಿ ಕಳಪೆ ಕಾಮಗಾರಿ : ಶಾಸಕ ರವಿಕುಮಾರ್ ಗೌಡರಿಂದ NHAI ಅಧಿಕಾರಿಗೆ ತರಾಟೆ

Date:

ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ ಅವರು, ಕೆಡಿಪಿ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

- Advertisement -

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಶಾಸಕರು, ಮಂಡ್ಯ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಫುಟ್‌ಪಾತ್ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿಯ ಗುಣಮಟ್ಟದ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಇಷ್ಟು ದಿನ ಕಳೆದರೂ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದಿರುವುದಕ್ಕೆ ಕಾರಣವೇನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಕಾಮಗಾರಿ ಪೂರ್ಣಗೊಳಿಸದೆ ಹಣ ಪಾವತಿಗೆ ಅವಕಾಶವಿಲ್ಲ

ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಂಡಿರುವ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿರುವುದರಿಂದ ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ಕಾಮಗಾರಿ ಪೂರ್ಣಗೊಳಿಸದೆ ಗುತ್ತಿಗೆದಾರರಿಗೆ ಹಣ ಪಾವತಿಸಲು ಹೇಗೆ ಅವಕಾಶ ನೀಡುತ್ತೀರಿ? ಮೊದಲು ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸಿ, ಗುಣಮಟ್ಟವನ್ನು ಪರಿಶೀಲಿಸಿದ ನಂತರವೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಖಡಕ್ ಸೂಚನೆ ನೀಡಿದರು.

ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇರಬಾರದು. ಅಧಿಕಾರಿಗಳು ಗುತ್ತಿಗೆದಾರರ ಪರವಾಗಿ ನಿಲ್ಲದೆ ಸಾರ್ವಜನಿಕರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ಕಾಮಗಾರಿಯಲ್ಲಿ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸುವ ಜವಾಬ್ದಾರಿ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ ಎಂದು ತೀವ್ರವಾಗಿ ಎಚ್ಚರಿಸಿದರು.

ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೆ ಪತ್ರ ಬರೆಯುವ ಎಚ್ಚರಿಕೆ

ಮಂಡ್ಯ ನಗರದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ತೋರಿದರೆ ಸುಮ್ಮನೆ ಕೂರುವುದಿಲ್ಲ. ಈ ವಿಚಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರ ಗಮನಕ್ಕೆ ಪತ್ರದ ಮೂಲಕ ತಂದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯವೈಖರಿ ಕುರಿತು ದೂರು ಸಲ್ಲಿಸಲಾಗುವುದು ಎಂದು ಶಾಸಕರು ಎಚ್ಚರಿಕೆ ನೀಡಿದರು.

ಅಲ್ಲದೆ, ಈ ಕೂಡಲೇ ಕಾಮಗಾರಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಬಾಕಿ ಉಳಿದಿರುವ ಫುಟ್‌ಪಾತ್ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಮುಗಿಸದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಡಿಸೆಂಬರ್ ವರೆಗೆ ಕಾಲಾವಕಾಶ ಕೇಳಿದ ಅಧಿಕಾರಿ

ಶಾಸಕರ ತೀವ್ರ ಅಸಮಾಧಾನ ಹಾಗೂ ಎಚ್ಚರಿಕೆಗೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ, ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಈ ವರ್ಷದ ಡಿಸೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಶಾಸಕರು, ಡಿಸೆಂಬರ್ ವೇಳೆಗೆ ಯಾವುದೇ ಕಾರಣಕ್ಕೂ ಕಾಮಗಾರಿ ಅಪೂರ್ಣವಾಗಿರಬಾರದು. ನಿಗದಿತ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನು ಮತ್ತೊಮ್ಮೆ ನೀಡಿದರು.

ಒಟ್ಟಾರೆ, ಮಂಡ್ಯ ನಗರದ ರಾಷ್ಟ್ರೀಯ ಹೆದ್ದಾರಿಯ ಫುಟ್‌ಪಾತ್ ಕಾಮಗಾರಿಯ ವಿಳಂಬ ಮತ್ತು ಗುಣಮಟ್ಟದ ವಿಚಾರ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಗಿದ್ದು, ಡಿಸೆಂಬರ್ ಅಂತ್ಯದ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳ್ಳುತ್ತದೆಯೇ ಎಂಬುದನ್ನು ಸಾರ್ವಜನಿಕರು ಎದುರು ನೋಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...