ಮಂಗಳೂರು | ಅಮೆರಿಕದ ಯುದ್ದಕೋರ ನೀತಿಗಳು ದುಡಿಯುವ ವರ್ಗಕ್ಕೆ ಮಾರಕ: ಕೆ ಮಹಾಂತೇಶ್

Date:

ಅಮೆರಿಕ ಇಸ್ರೇಲ್‌ನ ಯುದ್ದಕೋರ ನೀತಿಗಳಿಂದಾಗಿ ಜಗತ್ತಿನೆಲ್ಲಡೆ ಯುದ್ಧದ ಕಾರ್ಮೋಡ ಕವಿದಿದ್ದು, ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದಾರೆ. ಅಮೆರಿಕನ್ ಸಾಮ್ರಾಜ್ಯಶಾಹಿ ರಾಷ್ಟಗಳು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ಅದನ್ನು ಸಮದೂಗಿಸಲು ಪ್ರತೀ ಸಂದರ್ಭದಲ್ಲೂ ಯುದ್ದವನ್ನೇ ಅಸ್ತ್ರವನ್ನಾಗಿಸಿದೆ. ಇದರಿಂದಾಗಿ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿದ್ದು, ದುಡಿಯುವ ವರ್ಗದ ಬದುಕು ಸಂಕಷ್ಟಕ್ಕೀಡಾಗಿದೆ. ಈ ಮೂಲಕ ಅಮೆರಿಕದ ಯುದ್ದಕೋರ ನೀತಿಗಳು ದುಡಿಯುವ ವರ್ಗಕ್ಕೆ ಮಾರಕವಾಗಿ ಪರಿಣಮಿಸಿವೆ ಎಂದು CITU ಕರ್ನಾಟಕ ರಾಜ್ಯ ಕಾರ್ಯದರ್ಶಿ ಕೆ ಮಹಾಂತೇಶ್ ಅಭಿಪ್ರಾಯಪಟ್ಟರು.

- Advertisement -

CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರ ಏಪ್ರಿಲ್ 4 ಮತ್ತು 5ರಂದು ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಅದರ ಯಶಸ್ವಿಗಾಗಿ ರಚಿಸಲ್ಪಟ್ಟ ಸ್ವಾಗತ ಸಮಿತಿ ರಚನಾ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

“ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನೊಳಗೆ ಪ್ರತಿಭಟನೆಯ ನಾಟಕವಾಡಿದ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದು, ಸಂಹಿತೆಗಳ ವಿರುದ್ಧ ನಿಲ್ಲಬೇಕಾಗಿತ್ತು. ಆದರೆ ಅದೇ ಕಾರ್ಮಿಕ ವಿರೋಧಿ ಸಂಹಿತೆಗಳಿಗೆ ಪೂರಕವಾಗಿ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ರೀತಿಯಲ್ಲಿ ನಿಯಮಾವಳಿಗಳನ್ನು ರೂಪಿಸಿರುವುದು ಕಾಂಗ್ರೆಸ್‌ನ ದ್ವಂದ್ವ ನೀತಿಯ ದ್ಯೋತಕವಾಗಿದೆ” ಎಂದು ಕಟುವಾಗಿ ಟೀಕಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ ಸಿಐಟಿಯು ದ ಕ ಜಿಲ್ಲಾಧ್ಯಕ್ಷ ಬಿ ಎಂ ಭಟ್ ಮಾತನಾಡಿ, “ಆಳುವ ವರ್ಗಗಳ ಆಕ್ರಮಣಕಾರಿ ನೀತಿಗಳನ್ನು ಸಮರಶೀಲ ಹೋರಾಟಗಳ ಮೂಲಕ ಹಿಮ್ಮೆಟ್ಟಿಸಬೇಕಾದರೆ ಬಲಿಷ್ಠ ಕಾರ್ಮಿಕ ಚಳುವಳಿಯಿಂದ ಮಾತ್ರ ಸಾಧ್ಯ. ಅಂತಹ ಚಳವಳಿಯನ್ನು ಕಟ್ಟಲು ನಾಂದಿ ಹಾಡಬೇಕಾದ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಜನತೆ ಸಂಪೂರ್ಣ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಾಗಾರದ ಮಹತ್ವ ಹಾಗೂ ಅದನ್ನು ಯಶಸ್ವಿಗೊಳಿಸಲು ಬೇಕಾದ ತಯಾರಿಗಳ ಬಗ್ಗೆ ಸಭೆಗೆ ವಿವರಣೆ ನೀಡಿದರು.

ಇದನ್ನೂ ಓದಿದ್ದೀರಾ? ಇರಾನ್ ಯುದ್ಧ‌ | ಭಾರತದ ಕೃಷಿ ಉತ್ಪನ್ನ ವ್ಯಾಪಾರಕ್ಕೆ ಸವಾಲು; ದೇಶೀಯ ರೈತರಿಗೆ ಮತ್ತಷ್ಟು ಸಂಕಷ್ಟ

ಸಭೆಯಲ್ಲಿ ಕಾರ್ಯಾಗಾರದ ಯಶಸ್ವಿಗಾಗಿ 101 ಮಂದಿಯನ್ನೊಳಗೊಂಡ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಜಿಲ್ಲೆಯ ಹಿರಿಯ ಕಾರ್ಮಿಕ ನಾಯಕರಾದ ಜೆ ಬಾಲಕೃಷ್ಣ ಶೆಟ್ಟಿ, ಕಾರ್ಯಾಧ್ಯಕ್ಷರಾಗಿ ಬಿ‌ ಎಂ ಭಟ್, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್ ಬಜಾಲ್, ಖಜಾಂಚಿಯಾಗಿ ಯೋಗೀಶ್ ಜಪ್ಪಿನಮೊಗರು ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಯಾದವ ಶೆಟ್ಟಿ, ವಸಂತ ಆಚಾರಿ, ಸಂತೋಷ್ ಬಜಾಲ್, ಕೃಷ್ಣಪ್ಪ ಕೊಂಚಾಡಿ, ವಾಸುದೇವ ಉಚ್ಚಿಲ್, ಬಿ‌ ಎಂ ಮಾಧವ, ಮುನೀರ್ ಕಾಟಿಪಳ್ಳ, ಪುರುಷೋತ್ತಮ ಪೂಜಾರಿ, ಮನೋಜ್ ವಾಮಂಜೂರು, ಯೋಗೀಶ್ ಜಪ್ಪಿನಮೊಗರು, ಫ್ಲೇವಿ ಕ್ರಾಸ್ತಾ ಅತ್ತಾವರ, ಯೋಗಿತಾ ಉಳ್ಳಾಲ, ಶೈಲೇಶ್, ರವಿಚಂದ್ರ ಕೊಂಚಾಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಅ.30 ರಂದು ಬೈಕ್ ರ್ಯಾಲಿ

ಶಿವಮೊಗ್ಗ, ಎಚ್‌ಐವಿ/ಏಡ್ಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಯುವ...

ಭದ್ರಾವತಿ | ಕುರಿ ಕಾಳಗದ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ

ಕುರಿ ಕಾಳಗದ ವೇಳೆ ನಡೆಯುತ್ತಿದ್ದ ಜೂಜಾಟದ ಸಂದರ್ಭದಲ್ಲಿ ಗಲಾಟೆ ನಡೆದು ಯುವಕನೊಬ್ಬನಿಗೆ...

ಶಿವಮೊಗ್ಗ | ಶಿವಾಲಯ, ಲಕ್ಷ್ಮೀ ಟಾಕೀಸ್ ಬಳಿ ಬೀದಿ ಬದಿ ವ್ಯಾಪಾರಿಗಳ ತೆರವು

ಶಿವಮೊಗ್ಗ,ನಗರದ ೧೦೦ ಅಡಿ ರಸ್ತೆಯಲ್ಲಿರುವ ಶಿವಾಲಯದ ಪಕ್ಕದಲ್ಲಿ, ಮಹಾನಗರ ಪಾಲಿಕೆಯ ವತಿಯಿಂದ...

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳ ಡಿಲೀಟ್: ಮೋದಿ ಸರ್ಕಾರದ ವಿರುದ್ಧ ಧ್ರುವ್ ರಾಠಿ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಪೋಸ್ಟ್‌ಗಳನ್ನು ಮೋದಿ ಸರ್ಕಾರ ತೆಗೆದುಹಾಕಲಾಗುತ್ತಿದೆ ಎಂದು...