ಶಿವಮೊಗ್ಗದಲ್ಲಿ ಪತ್ತೆಯಾದ ಗುಜರಾತ್‌ನ ಅಪ್ರಾಪ್ತೆ: ಆರೋಪಿ ಅರ್ಚಕ ಸೆರೆ

Date:

5 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗುಜರಾತಿನ ಬಾಲಕಿಯನ್ನು ಪೊಲೀಸರು ಶಿವಮೊಗ್ಗದಲ್ಲಿ ಪತ್ತೆಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್‌ನ ವಡೋದರಾದ ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಅಧಿಕಾರಿಗಳು ಬಾಲಕಿ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಸುಮಾರು 1,200 ಕಿ.ಮೀ. ಸುದೀರ್ಘ ಮಾರ್ಗ ಪ್ರಯಾಣಿಸಿ ಪ್ರಕರಣ ಭೇದಿಸಿದ್ದಾರೆ.

- Advertisement -

ಸದ್ಯ ಬಾಲಕಿಯನ್ನು ರಕ್ಷಿಸಿ ಗುಜರಾತ್‌ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ಅಪ್ರಾಪ್ತೆಯ ಪೋಷಕರು ಡಿಸೆಂಬರ್ 2025ರಲ್ಲಿ ತಮ್ಮ 14 ವರ್ಷದ ಮಗಳು ಕಾಣೆಯಾದ ಕುರಿತು ವಡೋದರಾ ಪೊಲೀಸರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಆರೋಪಿ ಸುನಿಲ್ ಕುಮಾರ್ ಕೇಸರಿಸಿಂಹಬರಿಯಾ ಶಿವಮೊಗ್ಗ ನಗರದ ಜೈನ ದೇವಾಲಯದಲ್ಲಿ ಅರ್ಚಕನಾಗಿ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಸೇರುವ ವೇಳೆ ಅಪ್ರಾಪ್ತೆಯನ್ನು ಜೊತೆಗೆ ಕರೆದುಕೊಂಡು ಬಂದಿದ್ದ ಈತ, ಆಕೆಯನ್ನು ತನ್ನ ಪತ್ನಿ ಎಂದು ದೇವಸ್ಥಾನದ ಆಡಳಿತಕ್ಕೆ ಪರಿಚಯಿಸಿದ್ದ. ಬಾಲಕಿಯ ವಯಸ್ಸು ಕುರಿತು ಪ್ರಶ್ನಿಸಿದಾಗ ಆಕೆಗೆ 19 ವರ್ಷ ಎಂದು ಸುಳ್ಳು ಹೇಳಿ ಸತ್ಯ ಮರೆಮಾಚಿದ್ದ ಎಂಬ ವಿಷಯ ತಿಳಿದುಬಂದಿದೆ.

ಈ ಕುರಿತು ಜೈನ ದೇವಸ್ಥಾನದ ಟ್ರಸ್ಟಿಗಳನ್ನು ಪೊಲೀಸರು ವಿಚಾರಿಸಿದಾಗ, “ತಮಗೆ ಘಟನೆಯ ಕುರಿತು ಯಾವುದೇ ಮಾಹಿತಿ ಇರಲಿಲ್ಲ. ಸಾಮಾನ್ಯವಾಗಿ ನಾವು ಉದ್ಯೋಗಿಯ ದಾಖಲೆಗಳನ್ನು ಪರಿಶೀಲಿಸುತ್ತೇವೆ. ಬಾಲಕಿ ನಮ್ಮಲ್ಲಿ ಕೆಲಸಕ್ಕೆ ಸೇರಿರಲಿಲ್ಲ. ಸುನಿಲ್ ಕುಮಾರ್ ಅವರ ದಾಖಲೆಗಳನ್ನು ಮಾತ್ರ ಪರಿಶೀಲಿಸಿದ್ದೆವು” ಎಂದು ಹೇಳಿದ್ದಾರೆ. ಜೊತೆಗೆ ಟ್ರಸ್ಟ್ ಅವರಿಗೆ ವಸತಿ ಸೌಕರ್ಯವನ್ನು ಒದಗಿಸಿತ್ತು ಎಂಬ ಮಾಹಿತಿ ಹೊರಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...