ನಾರಾಯಣ ಗುರುಗಳ ಹೆಸರಿನಲ್ಲಿ ಒಂದಾಗಿರುವುದು ಸಮಾಜದ ಶಕ್ತಿ: ಸಚಿವ ಮಧು ಬಂಗಾರಪ್ಪ

Date:

ಸಮಾಜದ ಒಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಾವೆಲ್ಲರೂ ಒಂದಾಗಿ ಸಂಘಟಿತರಾದಾಗ ಮಾತ್ರ ಸಮಾಜಕ್ಕೆ ನಿಜವಾದ ಶಕ್ತಿ ಬರಲು ಸಾಧ್ಯ. ಈ ಆಶಯವನ್ನು ದಶಕದ ಹಿಂದೆಯೇ ವ್ಯಕ್ತಪಡಿಸುತ್ತಾ ಬಂದಿದ್ದೆ. ಇಂದು ಅದು ಸಾಕಾರಗೊಂಡಿರುವುದು ಸಂತಸ ಹಾಗೂ ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಹೇಳಿದರು.

- Advertisement -

ಈಡಿಗ, ಬಿಲ್ಲವ, ದೀವರು, ನಾಮಧಾರಿ, ನಾಡರ್, ತಿಯ್ಯ ಸೇರಿದಂತೆ ಒಟ್ಟು 26 ಉಪಜಾತಿಗಳನ್ನು ಒಳಗೊಂಡ ರಾಜ್ಯಮಟ್ಟದ ಶ್ರೀ ನಾರಾಯಣ ಗುರು ಮಹಾಒಕ್ಕೂಟ ಶನಿವಾರ ಬೆಂಗಳೂರಿನ ಅರಮನೆ ಮೈದಾನದ ವೈಟ್ ಪೆಟಲ್ಸ್‌ನಲ್ಲಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿತು. ಕೇರಳದ ಶ್ರೀ ನಾರಾಯಣ ಗುರು ಧರ್ಮ ಸಂಘಂ ಮಠದ ಪೀಠಾಧಿಪತಿ ಶ್ರೀ ಸ್ವಾಮಿ ಋತುಂಬರಾನಂದ ಸ್ವಾಮೀಜಿ ಅವರು ಮಹಾಒಕ್ಕೂಟವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಶ್ರೀ ನಾರಾಯಣ ಗುರು ಮಹಾಒಕ್ಕೂಟದ ಅಧ್ಯಕ್ಷರಾದ ಜಿ.ಪಿ. ಸುಧಾಕರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಸಂಘಟನೆ ನೂರಾರು ವರ್ಷಗಳ ಕಾಲ ಬಾಳುವ ಮೂಲಕ ಸಮಾಜಕ್ಕೆ ಶಕ್ತಿ ತುಂಬಲಿ. ನಾವೆಲ್ಲರೂ ಬೇರೆ ಬೇರೆ ವೇದಿಕೆಗಳಲ್ಲಿ, ಬೇರೆ ಬೇರೆ ಜವಾಬ್ದಾರಿಗಳಲ್ಲಿದ್ದರೂ ಈ ಸಂಘಟನೆಯೊಂದಿಗೆ ಸದಾ ಇರುತ್ತೇವೆ. ವೇದಿಕೆಯಲ್ಲಿರುವ ಪೂಜ್ಯ ಸ್ವಾಮೀಜಿಗಳಲ್ಲಿ ನನ್ನದೊಂದು ಮನವಿ. ದಯವಿಟ್ಟು ಸಮಾಜದ ಪರವಾಗಿ ಧ್ವನಿ ಎತ್ತಿ, ಸಮಾಜದ ಹಿತಾಸಕ್ತಿಗಾಗಿ ಕೆಲಸ ಮಾಡಿ ಎಂದು ವಿನಂತಿಸಿದರು.

ನಾವು ಸಮಾಜಕ್ಕಾಗಿ ಎಷ್ಟೇ ಉತ್ತಮ ಕೆಲಸಗಳನ್ನು ಮಾಡಿದರೂ ಕೆಲವೊಮ್ಮೆ ಅವುಗಳನ್ನು ಸಮುದಾಯ ಮರೆತುಬಿಡುತ್ತದೆ. ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದೆ. ಪಠ್ಯಪುಸ್ತಕಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳನ್ನು ಸೇರ್ಪಡೆಗೊಳಿಸುವುದು, ನಾರಾಯಣ ಗುರುಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪಿಸುವುದು ಹಾಗೂ ನಿಗಮ-ಮಂಡಳಿ ರಚಿಸುವುದು ಈ ಮೂರು ಬೇಡಿಕೆಗಳಾಗಿದ್ದವು. ಮುಖ್ಯಮಂತ್ರಿಗಳು ಕೂಡಲೇ ಸಮ್ಮತಿಸಿ ಅವುಗಳಿಗೆ ಅನುಮೋದನೆ ನೀಡಿದ್ದರು ಎಂದು ಹಿಂದಿನ ಪ್ರಯತ್ನಗಳನ್ನು ಸ್ಮರಿಸಿದರು.

ಸಮಾಜದ ರಾಜಕೀಯ ಅಸ್ತಿತ್ವಕ್ಕೆ ಒಗ್ಗಟ್ಟು ಅಗತ್ಯ

26 ಉಪಪಂಗಡಗಳು ಹರಿದು ಹಂಚಿಹೋಗದೆ ಒಗ್ಗಟ್ಟಿನಿಂದ ಮುನ್ನಡೆಯಬೇಕು. ಸಮಾಜದ ಅಭಿವೃದ್ಧಿ ಮತ್ತು ರಾಜಕೀಯ ಅಸ್ತಿತ್ವವನ್ನು ಬಲಪಡಿಸುವ ದೃಷ್ಟಿಯಿಂದ ಸಂಘಟಿತ ಪ್ರಯತ್ನ ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಮಹಾಒಕ್ಕೂಟ ಅಸ್ತಿತ್ವಕ್ಕೆ ಬಂದಿರುವುದು ಮಹತ್ವದ ಬೆಳವಣಿಗೆಯಾಗಿದೆ.

ಸೋಲೂರಿನ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಧರ್ಮಸ್ಥಳದ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಚಿಕ್ಕಮಗಳೂರಿನ ದತ್ತಾಶ್ರಮದ ಶ್ರೀ ವಿನಯ್ ಗುರೂಜಿ, ನಿಟ್ಟೂರಿನ ಶ್ರೀ ರೇಣುಕಾನಂದ ಸ್ವಾಮೀಜಿ, ಸಾರಗನಜಡ್ಡು ಪೀಠದ ಯೋಗೇಂದ್ರ ಅವಧೂತರು, ನಿಪ್ಪಾಣಿಯ ಶ್ರೀ ಅರುಣಾನಂದತೀರ್ಥ ಸ್ವಾಮೀಜಿ, ವರ್ತೂರಿನ ಶ್ರೀ ಸ್ವಾಮಿ ದೇವಿಕಾನಂದ, ಅಫಜಲಪುರದ ಶ್ರೀ ಶಂಕರಪ್ಪ ಸ್ವಾಮೀಜಿ, ಸೈದಾಪುರದ ಶ್ರೀ ಭೀಮಾಶಂಕರ ಶರಣ ಸ್ವಾಮೀಜಿ ಹಾಗೂ ಸಿಗಂದೂರು ಚೌಡೇಶ್ವರಿ ಕ್ಷೇತ್ರದ ಎಸ್. ರಾಮಪ್ಪ ಉಪಸ್ಥಿತರಿದ್ದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್, ಲೋಕಸಭಾ ಸದಸ್ಯರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ಭೀಮಣ್ಣ ಟಿ. ನಾಯ್ಕ, ಶ್ರೀ ವಿ. ಸುನಿಲ್ ಕುಮಾರ್, ಶ್ರೀ ಬೇಳೂರು ಗೋಪಾಲಕೃಷ್ಣ, ಶ್ರೀ ಜಗದೇವ ಗುತ್ತೇದಾರ್ ಸೇರಿದಂತೆ ಸಮುದಾಯದ ಮಾಜಿ ಸಚಿವರು, ಶಾಸಕರು ಹಾಗೂ ವಿವಿಧ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ ಅನರ್ಹಗೊಂಡರೆ ಮಸೂದೆಯ ಗತಿ ಏನು?

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ...

ಸಂಸತ್ ವಿಶೇಷ ಅಧಿವೇಶನ: ಜಂಟಿ ಕಾರ್ಯತಂತ್ರ ರೂಪಿಸಲು ಖರ್ಗೆ ನಿವಾಸದಲ್ಲಿ ‘ಇಂಡಿಯಾ’ ಸಭೆ!

ಕೇಂದ್ರ ಸರ್ಕಾರ ಸೋಮವಾರ (ನವೆಂಬರ್ 30) ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು...

12 ದಿನಗಳಿಂದ ಆಶಾ ಹೋರಾಟ; ಸರ್ಕಾರದ ನಿರ್ಲಕ್ಷ್ಯಕ್ಕೆ ಖಂಡನೆ: ಮೈಸೂರಿನಲ್ಲಿ ಪ್ರತಿಭಟನೆ

ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಹಾಗೂ ಕನಿಷ್ಠ ಮಾಸಿಕ...

ಗದಗ | ಪಿಯು ಶಿಕ್ಷಣ ವ್ಯವಸ್ಥೆ ಸುಧಾರಿಸಬೇಕಿದೆ: ಶಾಸಕ ಎಸ್. ವಿ. ಸಂಕನೂರ

ಪಿಯು ಕಾಲೇಜಿನ ಫಲಿತಾಂಶದಲ್ಲಿ ಜಿಲ್ಲೆ ಕಳಪೆ ಗುಣಮಟ್ಟ ಸಾಧಿಸಿದೆ. ಕಳೆದ ಸಭೆಯಲ್ಲಿ...