ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀ‌ರ್ ಅಹ್ಮದ್ ವಜಾ

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಲಿಲ್ಲವೆಂಬ ಕಾರಣಕ್ಕೆ ಪಕ್ಷದ ಅಭ್ಯರ್ಥಿ ಸಮರ್ಥ್ ಪರ ಪ್ರಚಾರದಿಂದ ನಸೀರ್ ಅಹ್ಮದ್ ದೂರ ಉಳಿದಿದ್ದರು ಎಂಬ ಕಾರಣ ನೀಡಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಿಧಾನ ಪರಿಷತ್ ಸದಸ್ಯರೂ ಆಗಿರುವ ನಸೀ‌ರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದೆ.

ನಜೀ‌ರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದ್ದು, ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಸಮರಕ್ಕೂ ಮುನ್ನ ಶಸ್ತ್ರತ್ಯಾಗ ಮಾಡಿದರೇ ದಳಪತಿ ವಿಜಯ್?

ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಗಿರುವ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರ ಮೇಲೂ ಇದೇ ಆರೋಪ ಕೇಳಿ ಬಂದಿತ್ತು. ಅವರೂ ಕೂಡ ಏಪ್ರಿಲ್‌.11ರಂದು ರಾಜೀನಾಮೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...