‘ಇಂಥ ಪ್ರಜಾಪ್ರಭುತ್ವವನ್ನು ನಾನು ಎಂದೂ ನೋಡಿಲ್ಲ’: EC, CRPF ದೌರ್ಜನ್ಯದ ವಿರುದ್ಧ ಮಮತಾ ಆಕ್ರೋಶ

Date:

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತದಾನದ ವೇಳೆ ಕೇಂದ್ರ ಚುನಾವಣಾ ಆಯೋಗ (EC) ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಕಾರ್ಯವೈಖರಿಯ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಬುಧವಾರ ಕೋಲ್ಕತ್ತದ ತಮ್ಮ ಭವಾನಿಪುರ ಕ್ಷೇತ್ರದಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನನ್ನ ಜೀವಿತಾವಧಿಯಲ್ಲಿ ಇಂಥದ್ದೊಂದು ಪ್ರಜಾಪ್ರಭುತ್ವವನ್ನು ನಾನು ಎಂದೂ ನೋಡಿಲ್ಲ” ಎಂದು ಕಿಡಿಕಾರುವ ಮೂಲಕ ಚುನಾವಣಾ ಆಯೋಗವನ್ನು ನೇರ ಗುರಿಯಾಗಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

“ಚುನಾವಣಾ ಆಯೋಗವು ಸಂಪೂರ್ಣವಾಗಿ ಏಕಪಕ್ಷೀಯವಾಗಿ ವರ್ತಿಸುತ್ತಿದ್ದು, ಅದರ ಕುಮ್ಮಕ್ಕಿನಿಂದಲೇ ಸಿಆರ್‌ಪಿಎಫ್ ಸಿಬ್ಬಂದಿ ಹಾಗೂ ಕೇಂದ್ರ ವೀಕ್ಷಕರು ಮತದಾರರ ಮೇಲೆ ಅಮಾನವೀಯ ದೌರ್ಜನ್ಯವೆಸಗುತ್ತಿದ್ದಾರೆ” ಎಂದು ಮಮತಾ ಗಂಭೀರ ಆರೋಪ ಮಾಡಿದ್ದಾರೆ.

Advertisements

ಆಯೋಗವು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ತನ್ನ ಮೂಲಭೂತ ಜವಾಬ್ದಾರಿಯನ್ನು ಮರೆತು, ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಇದರ ಪರಿಣಾಮವಾಗಿಯೇ ಭದ್ರತಾ ಪಡೆಗಳು ಜನಸಾಮಾನ್ಯರ ಮೇಲೆ ದೌರ್ಜನ್ಯ ನಡೆಸಲು ಮುಕ್ತಾವಕಾಶ ಪಡೆದುಕೊಂಡಿವೆ ಎಂದು ಅವರು ಹರಿಹಾಯ್ದರು.

ಇದನ್ನು ಓದಿದ್ದೀರಾ? ತಮಿಳುನಾಡಿನ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಕ್ರಿಕೆಟ್ ಅಂಪೈರ್ ರಿತಿಕಾ ಶ್ರೀ – ಸವಾಲು ಮೆಟ್ಟಿ ನಿಂತ ಸಾಧಕಿ

ಮತಗಟ್ಟೆಗಳಲ್ಲಿ ಭದ್ರತಾ ಪಡೆಗಳು ಜನರನ್ನು ಥಳಿಸುತ್ತಿವೆ ಮತ್ತು ಮತದಾನ ಮಾಡದಂತೆ ಭಯದ ವಾತಾವರಣ ಸೃಷ್ಟಿಸುತ್ತಿವೆ ಎಂದು ಆರೋಪಿಸಿದ ಅವರು “ಚುನಾವಣಾ ಆಯೋಗದ ಈ ಮೌನ ಹಾಗೂ ಕೇಂದ್ರ ಪಡೆಗಳ ದೌರ್ಜನ್ಯ ಹಿಂದೆಂದೂ ಕಂಡರಿಯದಂತಹದ್ದು. ಆಯೋಗದ ವೀಕ್ಷಕರು ಸಂಪೂರ್ಣವಾಗಿ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಹಬ್ಬವನ್ನು ವ್ಯವಸ್ಥಿತವಾಗಿ ನಾಶಪಡಿಸುವ ಹುನ್ನಾರ” ಎಂದು ವಾಗ್ದಾಳಿ ನಡೆಸಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಆಯೋಗವು ಉದ್ದೇಶಪೂರ್ವಕವಾಗಿ ತಾರತಮ್ಯ ಎಸಗುತ್ತಿದೆ ಎಂಬುದು ಅವರ ಪ್ರಮುಖ ಆರೋಪವಾಗಿತ್ತು. “ಮತದಾರರು ತಮ್ಮ ಹಕ್ಕನ್ನು ಮುಕ್ತವಾಗಿ ಚಲಾಯಿಸಬೇಕು, ಆದರೆ ಇಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಚುನಾವಣೆಯನ್ನು ನಿಯಂತ್ರಿಸುತ್ತಿವೆ. ಚುನಾವಣಾ ಆಯೋಗವು ಈ ಎಲ್ಲಾ ಅಕ್ರಮಗಳನ್ನು ನೋಡಿಕೊಂಡು ಕಣ್ಮುಚ್ಚಿ ಕುಳಿತಿರುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಥ್ ನೀಡುತ್ತಿದೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ, ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣಾ ಹಿಂಸಾಚಾರ ಹಾಗೂ ಬಿಗುವಿನ ವಾತಾವರಣಕ್ಕೆ ನೇರವಾಗಿ ಚುನಾವಣಾ ಆಯೋಗವೇ ಹೊಣೆ ಎಂದು ಅವರು ಗುಡುಗಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ದಮನಕ್ಕೆ ಮಣಿಯದೆ ಪ್ರಜಾಪ್ರಭುತ್ವದ ಹಕ್ಕು ಗೆದ್ದ ಜಾಮಿಯಾ ಯುವಶಕ್ತಿ!

ಇಪ್ಪತ್ತು ವರ್ಷಗಳಿಂದ ಕಸಿದುಕೊಳ್ಳಲಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯ ಹಕ್ಕನ್ನು ಮರಳಿ ಪಡೆಯಲು...

ಕನ್ನಡಿಗರಿಗೆ ಉದ್ಯೋಗ ತಾರತಮ್ಯ: ಖಾಸಗಿ ಸಂಸ್ಥೆಗಳಿಗೆ ಸಿಎಂ ಎಚ್ಚರಿಕೆ, ಕನ್ನಡಪರ ಸಂಘಟನೆಗಳಿಗೆ ಶಾಂತಿ ಕಾಪಾಡಲು ಮನವಿ

ಐಟಿ-ಬಿಟಿ ಕಂಪನಿಗಳಲ್ಲಿ ನೇಮಕಾತಿ ವೇಳೆ ಸ್ಥಳೀಯ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಲಾಗುತ್ತಿದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು ಮುಂದಾಗಿದ್ದೇಕೆ ಬಿಜೆಪಿ?

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್...

ರಾಮ್‌ ಗೋಪಾಲ ವರ್ಮಾಗೆ ₹29.67 ಕೋಟಿ ರಿಕವರಿ ನೋಟಿಸ್!

ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ‘ಎಕ್ಲಟಾಂಟ್ ಫಿಲ್ಮ್ಸ್ ಪ್ರೈವೇಟ್ ಲಿಮಿಟೆಡ್’...