ಕಲಬುರಗಿಯಲ್ಲಿ ನೂತನ ಮೃಗಾಲಯ ಲೋಕಾರ್ಪಣೆ

Date:

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಸುಮಾರು 43 ಎಕರೆ ಪ್ರದೇಶ ವಿಸ್ತೀರ್ಣದಲ್ಲಿ ಅಂದಾಜು ₹35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಮೃಗಾಲಯವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಲೋಕಾರ್ಪಣೆಗೊಳಿಸಿದರು.

- Advertisement -

ಮೃಗಾಲಯದಲ್ಲಿ ಮೈತುಂಬಾ ಗರಿಗಳನ್ನು ಹೊದ್ದ ನವಿಲುಗಳನ್ನು ನರ್ತನವನ್ನು ಕಣ್ತುಂಬಿಕೊಳ್ಳಬಹುದು, ಸಿಂಹ, ಹುಲಿಗಳ ಘರ್ಜನೆಗೆ ಕಿವಿಗೊಡಬಹುದು, ಹತ್ತಾರು ವೈವಿಧ್ಯಮಯ ಪಕ್ಷಿಗಳ ಕಲರವವನ್ನು ಆನಂದಿಸಬಹುದು, ಬಬೂನ್, ಲಂಗೂರು ಮುಂತಾದ ಪ್ರಾಣಿಗಳ ತುಂಟಾಟವನ್ನು ಕಂಡು ನಲಿದಾಡಬಹುದು. ಬೆಂಗಾಡು ಈಗ ಸುತ್ತಲೂ ಹಸಿರಿನಿಂದ ಕಂಗೊಳಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಮೃಗಾಲಯವು 56 ಜಾತಿಯ ಪ್ರಾಣಿ-ಪಕ್ಷಿಗಳಿಗೆ ನೆಲೆ ಕಲ್ಪಿಸಿದೆ. ಇದು ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಮುಖ ಪ್ರೇಕ್ಷಣೀಯ ಸ್ಥಳವಾಗಿ ಬೆಳೆಯಲಿದೆ. ಈ ಭಾಗದ ಜನರು ಹಾಗೂ ಮಕ್ಕಳು ವನ್ಯಜೀವಿಗಳ ವೀಕ್ಷಣೆ ಮತ್ತು ಅವುಗಳ ಕುರಿತು ತಿಳಿದುಕೊಳ್ಳಲು ಇನ್ನು ದೂರದ ಊರುಗಳ ಮೃಗಾಲಯಗಳಿಗೆ ಭೇಟಿ ನೀಡಬೇಕಿಲ್ಲ. ಮಾಡಬೂಳ ಮೃಗಾಲಯವು ಮಕ್ಕಳಿಗೆ ಶಿಕ್ಷಣ ಮತ್ತು ಮನರಂಜನೆ ಒದಗಿಸುವ ತಾಣವಾಗಲಿದೆ.

WhatsApp Image 2026 05 18 at 1.53.54 PM

ಈ ನೂತನ ಮೃಗಾಲಯದಲ್ಲಿ ಸಮಗ್ರ ಮೂಲಸೌಕರ್ಯವನ್ನು ಪೂರ್ಣಗೊಳಿಸಲಾಗಿದೆ. ಕಲ್ಲಿನ ಗೋಡೆಯ ಕಾಂಪೌಂಡ್, 20 ಮೀ. ಅಗಲವಾದ ಪ್ರವೇಶ ರಸ್ತೆ, ಪ್ರವೇಶ ದ್ವಾರ, ಪಾರ್ಕಿಂಗ್ ವ್ಯವಸ್ಥೆ, ನೀರು ಮತ್ತು ವಿದ್ಯುತ್ ಸೌಲಭ್ಯ, ಮೃಗಾಲಯದ ಪ್ರಾಣಿಗಳಿಗಾಗಿ ಆಸ್ಪತ್ರೆ, ಅಡುಗೆಮನೆ, ಶವ ಪರೀಕ್ಷಾ ಕೊಠಡಿ, ಕ್ವಾರಂಟೈನ್ ವಿಭಾಗ ಹಾಗೂ ಆಡಳಿತ ಕಟ್ಟಡ ಸಿದ್ಧವಾಗಿದೆ. ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ, ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ನೂತನ ಮೃಗಾಲಯವು ಕಲಬುರಗಿಯ ಪ್ರವಾಸೋದ್ಯಮಕ್ಕೆ ಬಲ ನೀಡಲಿದೆ. ಇದರಿಂದ ಜಿಲ್ಲೆಯ ಆರ್ಥಿಕತೆಗೂ ಬಹುದೊಡ್ಡ ಕೊಡುಗೆ ಸಿಗಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ʼಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸಹಕಾರದೊಂದಿಗೆ ನಿರ್ಮಾಣಗೊಂಡಿರುವ ಈ ಮೃಗಾಲಯವು ಪ್ರದೇಶದ ಜನರಿಗೆ ಪ್ರಕೃತಿ ಮತ್ತು ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ಪರಿಚಯಿಸುವ ಪ್ರಮುಖ ಕೇಂದ್ರವಾಗಲಿದೆ. ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಪರಿಸರ ಮತ್ತು ಜೀವ ವೈವಿಧ್ಯದ ಬಗ್ಗೆ ಅರಿವು ಹಾಗೂ ಪ್ರೀತಿಯನ್ನು ಬೆಳೆಸಲು ಇದು ಸಹಕಾರಿಯಾಗಲಿದೆʼ ಎಂದರು.

ʼಕಲಬುರಗಿ ಸೇರಿದಂತೆ ಸುತ್ತಮುತ್ತಲಿನ ಜನರಿಗೆ ಉತ್ತಮ ಪ್ರವಾಸಿ ತಾಣವಾಗುವ ಜೊತೆಗೆ ಪರಿಸರ ಜಾಗೃತಿ ಮೂಡಿಸುವ ಕೇಂದ್ರವಾಗಿಯೂ ಈ ಮೃಗಾಲಯ ಬೆಳೆಯಲಿʼ ಎಂದು ಆಶಯ ವ್ಯಕ್ತಪಡಿದರು.

ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌, ವಿಧಾನ ಪರಿಷತ್‌ ಸದಸ್ಯ ಜಗದೇವ ಗುತ್ತೇದಾರ ಸೇರಿದಂತೆ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ : ಗಾಂಧೀಜಿಯವರ ಸತ್ಯಾಗ್ರಹ ನೆನಪಾದಾಗ…….

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ಈ ದಿನ ಸಂಪಾದಕೀಯ | ಡಿಕೆಶಿ ಪ್ರತಿರೋಧಕ್ಕೆ ಮಣಿದ ಚುನಾವಣಾ ಆಯೋಗ; ಈವರೆಗಿನ ಅಕ್ರಮಗಳಿಗೆ ಹೊಣೆ ಯಾರು?

ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲೇ ನಾಗರಿಕ ಸಂಘಟನೆಗಳು ಕಾಂಗ್ರೆಸ್‌ ಗೆ ಎಸ್‌ಐಆರ್‌...