ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

Date:

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸಲ್ಲಿಕೆಯಾಗಿದ್ದ 15 ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. ಈ ಪೈಕಿ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ತಿಳಿಸಿದ್ದಾರೆ.

- Advertisement -

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ್ ಜಿ. ನಮೋಶಿ, ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸಾಯಿಬಣ್ಣ ಹಾಗೂ ಜನತಾ ದಳ (ಸಂಯುಕ್ತ) ಪಕ್ಷದ ಅಭ್ಯರ್ಥಿ ಶಂಕರೆಡ್ಡಿ ಪಾಟೀಲ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಪಕ್ಷೇತರ ಅಭ್ಯರ್ಥಿಗಳಾದ ಕವಿರಾಜ, ತುಳಸಪ್ಪ ದಾಸರ, ನಬಿರಸೂಲ್, ಮಹಬೂಬ್ ವಂಟೇಲಿ, ರಾಜಕುಮಾರ, ರಾಜು, ಶರಣಬಸಪ್ಪ, ಶಶಿಧರ, ಶಿವಶಂಕರ ಹಾಗೂ ಡಾ. ಸುರೇಶ ಅವರ ನಾಮಪತ್ರಗಳೂ ಕ್ರಮಬದ್ಧವಾಗಿವೆ. ಇನ್ನು ಪಕ್ಷೇತರ ಅಭ್ಯರ್ಥಿ ನಸೀರುದ್ದಿನ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿದೆ. ಅಂದು ನಾಮಪತ್ರ ಹಿಂಪಡೆದ ಬಳಿಕ ಚುನಾವಣಾ ಕಣದಲ್ಲಿರುವ ಅಂತಿಮ ಅಭ್ಯರ್ಥಿಗಳ ಚಿತ್ರಣ ಸ್ಪಷ್ಟವಾಗಲಿದೆ. ಅಕ್ಟೋಬರ್‌ 23ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ : ಬೀದರ್‌ | ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕ ಶಿವಕುಮಾರ ಕೆ.ಬಿ. ಅವರ ಉಪಸ್ಥಿತಿಯಲ್ಲಿ ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಿತು. ಸಹಾಯಕ ಚುನಾವಣಾಧಿಕಾರಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಮಾಜಘಾತುಕರಲ್ಲ, ಅವರಿಗೆ ಹೋರಾಡುವ ಹಕ್ಕಿದೆ’: ಬಾಂಬೆ ಹೈಕೋರ್ಟ್

ಮಹಾರಾಷ್ಟ್ರ ಲೋಕಸೇವಾ ಆಯೋಗದ (ಎಂಪಿಎಸ್‌ಸಿ) ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ...

ಗುಜರಾತ್ | ʼಶುದ್ಧೀಕರಣʼ ಹೆಸರಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅತ್ಯಾಚಾರ; 9 ಮಂದಿ ವಶಕ್ಕೆ

ಶುದ್ಧೀಕರಣ ವಿಧಿ (Purification Ritual) ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ, ಮನಬಂದಂತೆ...

ಪ್ರೀಮಿಯಂ ಲೇಖನ | ಉರ್ದು- ವಿಧಾನಸೌಧದ ಮೆಟ್ಟಿಲುಗಳ ವಿವಾದದಾಚೆ ಭಾರತದ ಭಾಷಾ–ಸಾಂಸ್ಕೃತಿಕ ಪರಂಪರೆಯ ಪ್ರಶ್ನೆ

ವಿಧಾನಸೌಧದ ಮೆಟ್ಟಿಲುಗಳು ಉರ್ದು ಹಬ್ಬಕ್ಕೆ ಸಿಗುತ್ತವೆಯೇ ಇಲ್ಲವೇ ಎಂಬುದು ಆಡಳಿತಾತ್ಮಕ ನಿರ್ಧಾರ....

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ ಕಾರಬಾರು!

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ...