ಈ ಬಡ ವ್ಯಕ್ತಿ ಅಕ್ಕನ ಅಸ್ಥಿಪಂಜರವನ್ನು ಬ್ಯಾಂಕ್‌ಗೆ ತಂದಿದ್ದು ಏಕೆ?

Date:

ಒಡಿಶಾದ ಕೆಂಜೋಹರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅನಕ್ಷರಸ್ಥ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬ ತನ್ನ ಸಹೋದರಿಯ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಹಿಂಪಡೆಯಲು, ಆಕೆಯ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತು ತಂದಿದ್ದಾನೆ.

- Advertisement -

ಕೆಂಜೋಹರ್ ಜಿಲ್ಲೆಯ ಪಟನಾ ತಾಲೂಕಿನ ಮಲಿಪೋಸಿಯಲ್ಲಿರುವ ‘ಒಡಿಶಾ ಗ್ರಾಮೀಣ ಬ್ಯಾಂಕ್’ ಶಾಖೆಯಲ್ಲಿ ಈ ಘಟನೆ ನಡೆದಿದೆ. ಡಯಾನಾಲಿ ಗ್ರಾಮದ 50 ವರ್ಷದ ಜೀತು ಮುಂಡಾ ಎಂಬಾತನ ಹಿರಿಯ ಸಹೋದರಿ ಕಾಲ್ರಾ ಮುಂಡಾ (56) ಅನಾರೋಗ್ಯದಿಂದಾಗಿ ಜನವರಿ 26ರಂದು ಮೃತಪಟ್ಟಿದ್ದರು. ಆಕೆ ತನ್ನ ದನಗಳನ್ನು ಮಾರಾಟ ಮಾಡಿ ಬಂದಿದ್ದ 20 ಸಾವಿರ ರೂ. ಹಣವನ್ನು ಬ್ಯಾಂಕ್ ಖಾತೆಯಲ್ಲಿ ಇಟ್ಟಿದ್ದರು. ಇದೇ ಹಣವನ್ನು ಪಡೆಯಲು ಜೀತು ಬ್ಯಾಂಕ್‌ಗೆ ಬಂದಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಕಾಲ್ರಾ ಮುಂಡಾ ನಿಧನದ ನಂತರ, ಆಕೆಯ ಖಾತೆಯಲ್ಲಿದ್ದ ಹಣವನ್ನು ಪಡೆದುಕೊಳ್ಳಲು ಬೇರೆ ಯಾವುದೇ ಕಾನೂನುಬದ್ಧ ವಾರಸುದಾರರು ಇರಲಿಲ್ಲ. ಹೀಗಾಗಿ ಜೀತು ಮುಂಡಾ ಕೆಲವು ದಿನಗಳ ಹಿಂದೆ ಬ್ಯಾಂಕ್‌ಗೆ ಹೋಗಿ ಹಣ ಕೇಳಿದ್ದ. ಆದರೆ ಬ್ಯಾಂಕ್ ಅಧಿಕಾರಿಗಳು ಮರಣ ಪ್ರಮಾಣ ಪತ್ರ ಮತ್ತು ಇತರ ದಾಖಲೆಗಳನ್ನು ತರುವಂತೆ ಸೂಚಿಸಿದ್ದರು. ಆದರೆ, ನಿಯಮಗಳ ಬಗ್ಗೆ ಅರಿವಿಲ್ಲದ ಹಾಗೂ ದಾಖಲೆಗಳನ್ನು ಒದಗಿಸಲು ಅಸಮರ್ಥನಾದ ಜೀತು, ನೇರವಾಗಿ ಆಕೆಯ ಸಮಾಧಿಯನ್ನು ಅಗೆದು ಅಸ್ಥಿಪಂಜರವನ್ನು ಹೊರತೆಗೆದು ಬ್ಯಾಂಕ್‌ಗೆ ತಂದಿದ್ದಾನೆ.

ತಾನು ಹಣಕ್ಕಾಗಿ ಹಲವು ಬಾರಿ ಬ್ಯಾಂಕ್‌ಗೆ ಅಲೆದಾಡಿದ್ದೇನೆ, ಆದರೆ ಅಲ್ಲಿನ ಸಿಬ್ಬಂದಿ ಹಣ ಬೇಕಾದರೆ ಖಾತೆದಾರರನ್ನು ಕರೆದುಕೊಂಡು ಬನ್ನಿ ಎಂದು ಹೇಳಿದರು. ಆಕೆ ಮೃತಪಟ್ಟಿದ್ದಾಳೆ ಎಂದು ಹೇಳಿದರೂ ಅವರು ಕೇಳಲಿಲ್ಲ, ಆಕೆಯನ್ನು ಕರೆದುಕೊಂಡು ಬರಲೇಬೇಕೆಂದು ಪಟ್ಟುಹಿಡಿದರು. ಹೀಗಾಗಿ ಹತಾಶನಾಗಿ, ಆಕೆಯ ಸಾವಿನ ಪುರಾವೆಗಾಗಿ ಸಮಾಧಿಯನ್ನು ಅಗೆದು ಅಸ್ಥಿಪಂಜರವನ್ನು ತಂದಿದ್ದೇನೆ ಎಂದು ಜೀತು ಪತ್ರಕರ್ತರ ಮುಂದೆ ನೋವು ತೋಡಿಕೊಂಡಿದ್ದಾನೆ.

ಇದನ್ನು ಓದಿದ್ದೀರಾ? ಕ್ಯಾಂಪಸ್ ರಾಜಕೀಯಕ್ಕೆ ಶಿಸ್ತಿನ ಕಡಿವಾಣ: ಲಿಂಗ್ಡೋ ಸಮಿತಿ ವರದಿಯ ಆಶಯ ಮತ್ತು ವಾಸ್ತವ

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಪಟನಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕಿರಣ್ ಪ್ರಸಾದ್ ಸಾಹು, ಜೀತು ಮುಂಡಾ ಅನಕ್ಷರಸ್ಥ ಬುಡಕಟ್ಟು ವ್ಯಕ್ತಿಯಾಗಿದ್ದು, ಅವನಿಗೆ ಕಾನೂನುಬದ್ಧ ವಾರಸುದಾರ ಅಥವಾ ನಾಮಿನಿ ಎಂದರೆ ಏನೆಂದು ತಿಳಿದಿಲ್ಲ ಎಂದಿದ್ದಾರೆ. ಮೃತ ವ್ಯಕ್ತಿಯ ಖಾತೆಯಿಂದ ಹಣ ತೆಗೆಯುವ ಪ್ರಕ್ರಿಯೆಯನ್ನು ಅವನಿಗೆ ಅರ್ಥಮಾಡಿಸುವಲ್ಲಿ ಬ್ಯಾಂಕ್ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಬಿಡಿಒ ಅಧಿಕಾರಿ ಮಾನಸ್ ದಂಡಪಾತ್ ಪ್ರತಿಕ್ರಿಯಿಸಿ, ಈ ವಿಚಾರವಾಗಿ ಯಾರೂ ತಮ್ಮ ಬಳಿ ಬಂದಿರಲಿಲ್ಲವೆಂದು ಹಾಗೂ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲಿ ಆ ಅಸ್ಥಿಪಂಜರವನ್ನು ಮತ್ತೆ ಅದೇ ಸ್ಮಶಾನದಲ್ಲಿ ಗೌರವಯುತವಾಗಿ ಮಣ್ಣು ಮಾಡಲಾಯಿತು. ಬ್ಯಾಂಕ್ ಮೂಲಗಳ ಪ್ರಕಾರ ಕಾಲ್ರಾ ಮುಂಡಾ ಅವರ ಬ್ಯಾಂಕ್ ಖಾತೆಯಲ್ಲಿ ಹೆಸರಿಸಲಾಗಿದ್ದ ನಾಮಿನಿ ಕೂಡ ಮೃತಪಟ್ಟಿದ್ದಾರೆ. ಹೀಗಾಗಿ ಆಕೆಯ ಹಣಕ್ಕೆ ಜೀತು ಒಬ್ಬನೇ ವಾರಸುದಾರನಾಗಿದ್ದಾನೆ. ನಿಯಮಗಳ ಪ್ರಕಾರ ಏಕೈಕ ವಾರಸುದಾರನಾಗಿರುವ ಜೀತು ಮುಂಡಾನಿಗೆ ಆದಷ್ಟು ಬೇಗ ಹಣ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸ್ಥಳೀಯ ಆಡಳಿತವು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಪೊಲೀಸರು ಹಣ ಪಡೆಯಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ, ತಾಂತ್ರಿಕ ಕೌಶಲ್ಯ ಬೆಳೆಸುವುದು ಅಗತ್ಯ: ಆರ್.ಎಸ್ ಬುರಡಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಸಾಕ್ಷರತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವುದರ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Gen Z ಪೀಳಿಗೆ ತನ್ನ ಶಕ್ತಿ ಪ್ರದರ್ಶಿಸಬೇಕು: ಪ್ರದೀಪ್ ಪಾಟೀಲ್

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ...

ಯುಪಿ ಎಂಎಲ್‌ಸಿ ಚುನಾವಣೆ: ಪ್ರಧಾನಿ ಮೋದಿ ಕ್ಷೇತ್ರ ವಾರಾಣಸಿಯಲ್ಲಿ ಎಸ್‌ಪಿಗೆ ಭರ್ಜರಿ ಜಯ

ಉತ್ತರ ಪ್ರದೇಶ ವಿಧಾನ ಪರಿಷತ್ (ಎಂಎಲ್‌ಸಿ) ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ...

ಅಗ್ರಿಗೋಲ್ಡ್ ಹೂಡಿಕೆದಾರರಿಗೆ ಹೊಸ ಭರವಸೆ! ಬಾಂಡ್‌ಗಳ ಪರಿಶೀಲನೆಗೆ 9 ಕೇಂದ್ರಗಳ ಸ್ಥಾಪನೆ

ದಶಕದ ಹಿಂದೆ ದಕ್ಷಿಣ ಭಾರತದ ಲಕ್ಷಾಂತರ ಹೂಡಿಕೆದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದ ಬಹುಕೋಟಿ...