ಆನ್‌ಲೈನ್ ಲಾಟರಿ ಆಮಿಷ: 27 ಲಕ್ಷ ರೂಪಾಯಿ ಕಳೆದುಕೊಂಡ ಉಡುಪಿಯ ಮಹಿಳೆ

Date:

ಆನ್‌ಲೈನ್‌ನಲ್ಲಿ ಪ್ರಚಾರ ಮಾಡಲಾಗುತ್ತಿದ್ದ ನಕಲಿ ಲಾಟರಿ ವಂಚನೆಗೆ ಬಲಿಯಾಗಿ ಉಡುಪಿಯ ಮಹಿಳೆಯೊಬ್ಬರು 27.06 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಜೂಲಿಯಾನ ವಂಚಕರ ಸಿಕ್ಕ ಮಹಿಳೆ. ಅವರು ಸಲ್ಲಿಸಿದ ದೂರಿನ ಪ್ರಕಾರ, ಫೇಸ್‌ಬುಕ್‌ನಲ್ಲಿ ‘ಕೇರಳ ಮೆಗಾ ಜಾಕ್‌ಪಾಟ್ಸ್’ ಎಂಬ ಶೀರ್ಷಿಕೆಯ ಆನ್‌ಲೈನ್ ಲಾಟರಿ ಜಾಹೀರಾತು ಕಂಡುಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಲಾಟರಿ ಟಿಕೆಟ್ ಖರೀದಿಸಿದ್ದರು.

- Advertisement -

ನಂತರ ಅಪರಿಚಿತ ವ್ಯಕ್ತಿಗಳು ಆಕೆಯನ್ನು ಸಂಪರ್ಕಿಸಿ ಲಾಟರಿ ಗೆದ್ದಿರುವುದಾಗಿ ತಿಳಿಸಿದರು. ಬಹುಮಾನ ಪಡೆಯಲು ಸಂಸ್ಕರಣೆ, ಸಾಗಾಣೆ, ವಿದೇಶಿ ವಿನಿಮಯ ಮತ್ತು ನಿರ್ವಹಣಾ ವೆಚ್ಚವನ್ನು ಭರಿಸಬೇಕು ಎಂದು ಹಣ ಪಾವತಿಸಲು ಕೇಳಿದರು. ಈ ಸುಳ್ಳುಗಳನ್ನು ನಂಬಿದ ಜೂಲಿಯಾನ ಏಪ್ರಿಲ್ 24ರಿಂದ ಜುಲೈ 31ರವರೆಗೆ ಅಪರಿಚಿತರು ಒದಗಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು 27,06,862 ರೂಪಾಯಿ ವರ್ಗಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಲಾಟರಿ ಹಣ ಕೈ ಸೇರದಿದ್ದಾಗ ವಂಚನೆಗೆ ಒಳಗಾದುದು ಅರಿವಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಸದ್ಯ ಉಡುಪಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(ಡಿ) ಹಾಗೂ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 316(2) ಮತ್ತು 318(4) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...