ಎಸ್‌ಐಆರ್‌ ಕಾರ್ಯಕ್ಕೆ 5000 ರೂ ಗೌರವಧನ ನೀಡಿ; ಜಂಟಿ ಆಶಾ ಕಾರ್ಯಕರ್ತೆಯರ ಸಂಘ ಆಗ್ರಹ

Date:

ಸೋಮವಾರ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬು ಕುಮಾರ್ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಅಖಿಲ ಭಾರತ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯೋಜಿತ ಕರ್ನಾಟಕ ರಾಜ್ಯ ಜಂಟಿ ಆಶಾ ಕಾರ್ಯಕರ್ತೆಯರ ಸಂಘವು, ಬೂತ್ ಮಟ್ಟದ ಅಧಿಕಾರಿಗಳಿಗೆ ಸಹಾಯ ಮಾಡಲು ನಿಯೋಜಿಸಲಾದ ಆಶಾ ಕಾರ್ಯಕರ್ತರಿಗೆ 5,000 ರೂ ಗೌರವಧನ ನೀಡಬೇಕೆಂದು ಚುನಾವಣಾ ಆಯೋಗವನ್ನು ಆಗ್ರಹಿಸಿದೆ.

ಆಶಾ ಕಾರ್ಯಕರ್ತೆಯರು ಈಗಾಗಲೇ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಕೆಲಸಕ್ಕೆ ತಕ್ಕ ಸಂಭಾವನೆಯಿಂದ ವಂಚಿತರಾಗಿದ್ದು, ಹಲವು ಪ್ರೋತ್ಸಾಹ ಧನ ಆಧರಿತ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದಾರೆ ಆದ್ದರಿಂದ, ಎಸ್‌ಐಆರ್‌ ಕಾರ್ಯನಿರ್ವಣೆಗೆ ನಿಗದಿತ ಗೌರವಧನ ನೀಡಬೇಕು ಎಂದು ಸಂಘವು ಒತ್ತಾಯಿಸಿದೆ.

ಕರ್ನಾಟಕದಾದ್ಯಂತ ಹಲವಾರು ಜಿಲ್ಲೆಗಳು ಮತ್ತು ತಾಲ್ಲೂಕುಗಳಲ್ಲಿ ಜಿಲ್ಲಾಡಳಿತಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ತಹಶೀಲ್ದಾರ್‌ಗಳು ಆಶಾ ಕಾರ್ಯಕರ್ತರ್ತೆಯರನ್ನು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಸಹಾಯಕರಾಗಿ ನೇಮಿಸಿ ಆದೇಶಗಳನ್ನು ಹೊರಡಿಸಿದ್ದಾರೆ. ಆದರೆ, ಅವರಿಗೆ ನಿಯೋಜಿಸಲಾದ ಚುನಾವಣಾ ಸಂಬಧಿತ ಹೆಚ್ಚುವರಿ ಕೆಲಸಗಳಿಗೆ ಯಾವುದೇ ಗೌರವಧನ ಕೊಡಮಾಡಿಲ್ಲ ಎಂದು ಸಂಘ ಆಕ್ಷೇಪಿಸಿದೆ.

ಜೂನ್ 30 ರಿಂದ ಜುಲೈ 29 ರವರೆಗೆ ಒಂದು ತಿಂಗಳ ಕಾಲ ನಡೆಸಲಾಗುವ ಎಸ್‌ಐಆರ್‌ ಕಾರ್ಯದಲ್ಲಿ ಆಶಾಕರ್ತೆಯರ ನಿರಂತರ ಪಾಲ್ಗೊಳ್ಳುವಿಕೆಯು ಅಗತ್ಯ ಸಾರ್ವಜನಿಕ ಆರೋಗ್ಯ ಸೇವೆ ಪೂರೈಕೆಗೆ ತೊಡಕಾಗಿ ಪರಿಣಮಿಸುತ್ತದೆ ಎಂದು ಜಂಟಿ ಸಂಘವು ಕಳವಳ ವ್ಯಕ್ತಪಡಿಸಿದೆ.

ಗರ್ಭಿಣಿಯರು, ಪ್ರಸವಪೂರ್ವ ತಾಯಂದಿರು ಮತ್ತು ನವಜಾತ ಶಿಶುಗಳ ಆರೈಕೆ, ಲಸಿಕೆ ಹಾಕುವಿಕೆ ಮತ್ತು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿವಿಧ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ ಸೇರಿದಂತೆ ಕ್ಷೇತ್ರ ಮಟ್ಟದ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಗಣನೀಯ ಪರಿಶ್ರಮವಿದೆ ಎಂದು ರಾಜ್ಯ ಆಶಾಕಾರ್ಯಕರ್ತರ ಜಂಟಿ ಸಂಘವು ತನ್ನ ಮನವಿಯಲ್ಲಿ ತಿಳಿಯಪಡಿಸಿದೆ.

- Advertisement -





eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...

ರಾಯಚೂರು | ಜಿಪಂ, ತಾಪಂ ಸ್ಥಾನಗಳಿಗೆ ಮೀಸಲಾತಿ ನಿಗದಿ

ರಾಜ್ಯ ಸರ್ಕಾರವು ರಾಯಚೂರು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು...

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್; ದೆಹಲಿ ಪೊಲೀಸರಿಗೆ ಕೇಸ್ ಹಾಕುವುದಷ್ಟೇ ಕೆಲಸ: ಅಖಿಲೇಶ್ ಯಾದವ್ ಆಕ್ರೋಶ

ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶಿಸಿದ ಕಾರಣಕ್ಕೆ ಕಾಂಗ್ರೆಸ್...