ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

Date:

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ರೋಗ ಹರಡುವುದನ್ನು ತಡೆಯುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಸೂಚನೆ ನೀಡಿದ್ದಾರೆ.

- Advertisement -

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಂಗನ ಕಾಯಿಲೆ ನಿಯಂತ್ರಣ ಕುರಿತ ಅಂತರ ಇಲಾಖಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಪ್ರತಿ ವರ್ಷ ಜಿಲ್ಲೆಯ ಸಿದ್ದಾಪುರ, ಶಿರಸಿ, ಹೊನ್ನಾವರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ಈ ಭಾಗದ ಜನರಿಗೆ ರೋಗ ನಿಯಂತ್ರಣದ ಕುರಿತು ವ್ಯಾಪಕ ಜಾಗೃತಿ ಮೂಡಿಸುವಂತೆ ಸೂಚಿಸಿದರು. ಸಾರ್ವಜನಿಕ ಸ್ಥಳಗಳು, ಶಾಲಾ-ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕಾಡು ಹಾಗೂ ತೋಟಗಳಿಗೆ ತೆರಳುವಾಗ ಡೇಪಾ ಎಣ್ಣೆ ಹಚ್ಚಿಕೊಳ್ಳಬೇಕು. ದನಕರುಗಳ ಮೈಯಲ್ಲಿರುವ ಉಣ್ಣೆಗಳನ್ನು ತೆಗೆದು, ಉಣ್ಣೆ ನಿವಾರಕ ತೈಲವನ್ನು ಲೇಪಿಸಬೇಕು. ಜ್ವರ ಕಾಣಿಸಿಕೊಂಡರೆ ಕೂಡಲೇ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವ ಮೂಲಕ ಸ್ವಯಂ ರಕ್ಷಣೆಯಿಂದ ಕಾಯಿಲೆ ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯ ಔಷಧಗಳು ಹಾಗೂ ಡೇಪಾ ತೈಲದ ಸಾಕಷ್ಟು ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಆರೋಗ್ಯ, ಅರಣ್ಯ, ಪಶುಪಾಲನಾ ಸೇರಿದಂತೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಈ ವರ್ಷ 12 ಮಂದಿಗೆ ಮಂಗನ ಕಾಯಿಲೆ ದೃಢ: ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ ಮಂಗನ ಕಾಯಿಲೆ ಪರೀಕ್ಷೆಗಾಗಿ 3,317 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 12 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ ಸಭೆಯಲ್ಲಿ ಮಾಹಿತಿ ನೀಡಿದರು.

ಇದೇ ಅವಧಿಯಲ್ಲಿ 53 ಮಂಗಗಳ ಮರಣ ದಾಖಲಾಗಿದ್ದು, 10 ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಪಾಸಿಟಿವ್ ಕಂಡುಬಂದಿಲ್ಲ. ಅಲ್ಲದೇ, 716 ಉಣ್ಣೆಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, ಅವುಗಳಲ್ಲಿಯೂ ಸೋಂಕು ದೃಢಪಟ್ಟಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ನಟರಾಜ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಕ್ಯಾ. ರಮೇಶ್‌ರಾವ್ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮೂರು ದಿನಗಳ ಪೊಲೀಸ್‌ ವಾರ್ಷಿಕ ಕ್ರಿಡಾಕೂಟಕ್ಕೆ ಅದ್ಧೂರಿ ತೆರೆ

ಶಿಸ್ತು, ಸಹನೆ, ಸಾಹಸ ಮತ್ತು ಸೌಹಾರ್ದತೆಗೆ ಸಾಕ್ಷಿಯಾದ ಚಾಮರಾಜನಗರ ಜಿಲ್ಲಾ ಪೊಲೀಸ್...

ಎಸ್‌ಐಒ ರಾಷ್ಟ್ರೀಯ ಅಧ್ಯಕ್ಷರಾಗಿ ಕರ್ನಾಟಕದ ಅದಿ ಅಲ್ ಹಸನ್ ಆಯ್ಕೆ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಸಂಘಟನೆಯ 2027–28ನೇ ಸಾಲಿನ...

ನಾರಾಯಣ ಗುರುಗಳ ಹೆಸರಿನಲ್ಲಿ ಒಂದಾಗಿರುವುದು ಸಮಾಜದ ಶಕ್ತಿ: ಸಚಿವ ಮಧು ಬಂಗಾರಪ್ಪ

ಸಮಾಜದ ಒಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಾವೆಲ್ಲರೂ...

ಜನನುಡಿ 2026 | ಫ್ಯಾಸಿಸಂ ಯಾವತ್ತೂ ನಮ್ಮ ಆಯ್ಕೆ ಆಗಬಾರದು: ಶಿವಸುಂದರ್

"ಫ್ಯಾಸಿಸಂನಲ್ಲಿ ಉಗ್ರ ರೂಪವೂ ಇದೆ, ಮಂದ ರೂಪವೂ ಇದೆ. ಉಗ್ರ...