ರಾಯಚೂರು | ಹೆಚ್ಚಲಿರುವ ಧಗೆ: ಸಾರ್ವಜನಿಕರಿಗೆ ಜಿಲ್ಲಾಡಳಿತದ ಮುನ್ನೆಚ್ಚರಿಕೆ

Date:

ರಾಯಚೂರು ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಉಷ್ಣಾಂಶ ಅಧಿಕವಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಸ್‌. ಪೂವಿತಾ ಸಲಹೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು ಮುಂಬರುವ ದಿನಗಳಲ್ಲಿ ಬಿಸಿಲ ಧಗೆ ಇನ್ನಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

ಈ ಹಿಂದೆ ಬಿಸಿಲಿನ ಹೊಡೆತಕ್ಕೆ ನರೇಗಾ ಕಾರ್ಮಿಕ ಹುಸೇನಪ್ಪ ಮಡಿವಾಳ ಕೆಲಸದ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ದುರ್ಘಟನೆ ರಾಯಚೂರು ತಾಲ್ಲೂಕಿನ ಯಾಪಲದಿನ್ನಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಸಿಂಧನೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ್ದ 65 ವರ್ಷದ ಅಂಬಣ್ಣ ಎಂಬ ಕೂಲಿ ಕಾರ್ಮಿಕರು ಬಿಸಿಲಾಘಾತಕ್ಕೆ ಸಿಲುಕಿ ಮೃತಪಟ್ಟಿದ್ದರು.

ಸದ್ಯದ ಹವಾಮಾನ ಇಲಾಖೆಯ ವರದಿಯ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಮಾರ್ಗಸೂಚಿ ನೀಡಿದೆ. ತಾಪಮಾನ ತೀವ್ರಗೊಳ್ಳುವ ಹೊತ್ತಿನಲ್ಲಿ ಅದರಲ್ಲೂ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಮನೆಯಿಂದ ಹೊರಹೋಗದಂತೆ, ಸಾಕು ಪ್ರಾಣಿಗಳನ್ನು ಮತ್ತು ಸಣ್ಣ ಮಕ್ಕಳನ್ನು ವಾಹನಗಳಲ್ಲಿ ಕೂರಿಸದಂತೆ ನಿಗಾ ವಹಿಸಲು ಸಲಹೆ ನೀಡಲಾಗಿದೆ.

ನಿರ್ಜಲೀಕರಣದಿಂದ ಪಾರಾಗಲು ಹೆಚ್ಚೆಚ್ಚು ನೀರು ಕುಡಿಯುವುದು, ಮನೆಯಲ್ಲಿಯೇ ತಯಾರಿಸಿದ ತಂಪು ಪಾನೀಯವನ್ನು ಸೇವಿಸುವುದು ಉತ್ತಮ. ಹೊರ ಹೋಗುವಾಗ ತೆಳುವಾದ ಹತ್ತಿ ಬಟ್ಟೆಯನ್ನು ಧರಿಸಲು ಮತ್ತು ಕನ್ನಡಕ, ಪಾದರಕ್ಷಗಳನ್ನು ಬಳಸಲು ಸೂಚನೆ ನೀಡಲಾಗಿದೆ. ಜೊತೆಗೆ ಮಧ್ಯಪಾನ, ಟೀ ಮತ್ತು ಕಾಫಿ ಸೇವನೆ ಕಡಿಮೆ ಮಾಡುವಂತೆ ಮತ್ತು ಹಳಸಿದ ಆಹಾರ ಸೇವಿಸದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

ನವಜಾತ ಶಿಶುಗಳು, ಹಿರಿಯ ನಾಗರಿಕರು, ಗರ್ಭಿಣಿಯರು ಹಾಗೂ ಹೃದ್ರೋಗ ಮತ್ತು ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆ ಇರುವವರು ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -



eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...