ರಾಯಚೂರು | ದಶಕಗಳಿಂದ ಮುಸ್ಲಿಮರಿಗೆ ಸಿಗದ MLC ಸ್ಥಾನ: ಈಗಲಾದರೂ ಈಡೇರಿಸುವುದೇ ಕಾಂಗ್ರೆಸ್?

Date:

ಇಂಡಿಯನ್ ಸ್ಟೂಡೆಂಟ್ ನ್ಯಾಷನಲ್ ಕಾಂಗ್ರೆಸ್ ಘಟಕದಿಂದಲೇ ಚಳವಳಿ ನಡೆಸಿ ಪಕ್ಷಕ್ಕಾಗಿ ದುಡಿದ ಹಲವರ ನಿರೀಕ್ಷೆಗಳು ಈಗ ಕುಸಿದಂತಾಗಿದೆ. ರಾಜ್ಯದ ನಾಯಕರು ಜಿಲ್ಲೆಗೆ ಭೇಟಿ ನೀಡಿದಾಗ ಭರವಸೆಯ ಆಶ್ವಾಸನೆಗಳನ್ನು ನೀಡಿದ್ದರು. ಅವುಗಳು ಈಗ ಕೇವಲ ಮಾತುಗಳಾಗಿ ಉಳಿದಿವೆ.

ಕಾಂಗ್ರೆಸ್ ಪಕ್ಷವು ಸಾರ್ವಜನಿಕ ವೇದಿಕೆಗಳಲ್ಲಿ ತನ್ನನ್ನು ಅಹಿಂದ ಪರ, ಮಾತು ತಪ್ಪದ ಸರ್ಕಾರ ಹಾಗೂ ಸಮಾನತೆಯ ಮೌಲ್ಯಗಳನ್ನು ಪಾಲಿಸುವ ಪಕ್ಷವೆಂದು ಘೋಷಿಸುತ್ತಿದ್ದರೂ, ಕೆಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಹಿಂದೇಟು ಹಾಕುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

- Advertisement -

ರಾಯಚೂರು ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಒಬ್ಬರಿಗೂ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡದಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಹಲವು ವರ್ಷಗಳಿಂದ ತಳಮಟ್ಟದಲ್ಲಿ ಪಕ್ಷವನ್ನು ಕಟ್ಟಿಬೆಳೆಸಿದ ಕಾರ್ಯಕರ್ತರು ಮತ್ತು ಮುಖಂಡರಿಗೆ ಅವಕಾಶ ನೀಡಲು ಪಕ್ಷ ಮುಂದಾಗಿಲ್ಲ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಸ್ಥಿರ ಬೆಂಬಲ ನೀಡುತ್ತದೆ ಎಂಬ ಅರಿವಿದ್ದರೂ, ಅವರನ್ನೇ ಕಡೆಗಣಿಸಲಾಗುತ್ತಿದೆ ಎಂಬ ಬೇಸರ ವ್ಯಕ್ತವಾಗುತ್ತಿದೆ. ‌ʼದುಷ್ಮನ್ ಕಹಾ ಹೈ ಅಂದರೆ ಬಗಲ್ ಮೇ ಹೈʼ ಎಂಬ ಮಾತಿನಂತೆ, ಪಕ್ಷದೊಳಗೇ ಅಸಮಾಧಾನ ಇದೆ ಎಂಬುದು ಸ್ಥಳೀಯ ಮುಸ್ಲಿಂ ನಾಯಕರ ಅಭಿಪ್ರಾಯವಾಗಿದೆ.

“ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಸ್ಲಿಂ ಸಮುದಾಯದ ಬೆಂಬಲ ಮಹತ್ತರವಾಗಿದೆ. ಚುನಾವಣಾ ಸಂದರ್ಭದಲ್ಲಿ ನಾವು ಪಕ್ಷದ ಪರವಾಗಿ ಶ್ರಮಿಸುತ್ತೇವೆ. ಆದರೆ ಪ್ರತಿಫಲದ ವಿಚಾರದಲ್ಲಿ ನಮ್ಮನ್ನು ಕಡೆಗಣಿಸಲಾಗಿದೆ” ಎಂದು ಕೆಲ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ವಿಷಯ ಜಿಲ್ಲೆಯ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದ್ದು, ಪಕ್ಷದೊಳಗೆಯೇ ಅಸಮಾಧಾನದ ಧ್ವನಿಗಳು ಕೇಳಿಬರುತ್ತಿವೆ. ಮುಸ್ಲಿಂ ಸಮುದಾಯಕ್ಕೆ ಸೂಕ್ತ ಪ್ರತಿನಿಧಿತ್ವ ನೀಡದಿರುವುದು ಮುಂದಿನ ದಿನಗಳಲ್ಲಿ ರಾಜಕೀಯ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಇಂಡಿಯನ್ ಸ್ಟೂಡೆಂಟ್ ನ್ಯಾಷನಲ್ ಕಾಂಗ್ರೆಸ್ ಘಟಕದಿಂದಲೇ ಚಳವಳಿ ನಡೆಸಿ ಪಕ್ಷಕ್ಕಾಗಿ ದುಡಿದ ಹಲವರ ನಿರೀಕ್ಷೆಗಳು ಈಗ ಕುಸಿದಂತಾಗಿದೆ. ರಾಜ್ಯದ ನಾಯಕರು ಜಿಲ್ಲೆಗೆ ಭೇಟಿ ನೀಡಿದಾಗ ಭರವಸೆಯ ಆಶ್ವಾಸನೆಗಳನ್ನು ನೀಡಿದ್ದರು. ಅವುಗಳು ಈಗ ಕೇವಲ ಮಾತುಗಳಾಗಿ ಉಳಿದಿವೆ ಎನ್ನಲಾಗುತ್ತಿದೆ.

ಇದೀಗ ಸರ್ಕಾರದ ಅರ್ಧ ಅವಧಿ ಮುಗಿದ ಬಳಿಕ ಬದಲಾವಣೆ ಸಾಧ್ಯವೆಂಬ ಚರ್ಚೆಗಳು ನಡೆಯುತ್ತಿವೆ. ಈ ಸಂಬಂಧ ಜಿಲ್ಲೆಯ ಹಾಗೂ ರಾಜ್ಯದ ಶಾಸಕರು ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ರಂದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿ ಸಚಿವ ಸ್ಥಾನ, ನಿಗಮ ಮಂಡಳಿ ಹಾಗೂ ವಿಧಾನ ಪರಿಷತ್ ಸದಸ್ಯತ್ವದ ಕುರಿತು ಚರ್ಚಿಸಿದ್ದಾರೆ.

ಬಿಜೆಪಿ ಆಡಳಿತದಿಂದ ಬೇಸತ್ತ ಜನರು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದರೂ, ಮುಸ್ಲಿಂ ಸಮುದಾಯದ ಶೇ.4ರಷ್ಟು ಮೀಸಲಾತಿ ಜಾರಿಗೊಳಿಸುವ ವಿಚಾರದಲ್ಲಿ, ಹಿಜಾಬ್ ವಿಷಯ, ಹತ್ತು ಸಾವಿರ‌ ಕೋಟಿ ಅನುದಾನ, ಪ್ರಾಣಿ ವಧೆ ನಿಷೇಧ ಕಾಯ್ದೆ ವಾಪಸ್ ಪಡೆಯುವುದು ಸೇರಿದಂತೆ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ಪ್ರಗತಿ ಕಾಣುತ್ತಿಲ್ಲ ಎಂಬ ಟೀಕೆಗಳೂ ಕೇಳಿಬರುತ್ತಿವೆ.

ಜಿಲ್ಲೆಯಲ್ಲಿ ಸೈಯದ್ ಯಾಸೀನ್ ಎರಡು ಬಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದನ್ನು ಹೊರತುಪಡಿಸಿ, ಇನ್ನಾರಿಗೂ ವಿಧಾನ ಪರಿಷತ್ ಸದಸ್ಯತ್ವವಾಗಲಿ ಅಥವಾ ರಾಜ್ಯ ಮಟ್ಟದ ನಿಗಮ‌ ಮಂಡಳಿ ಸ್ಥಾನಗಳು ದೊರಕಿಲ್ಲ. ಪಕ್ಷಕ್ಕಾಗಿ ಹಲವು ವರ್ಷಗಳಿಂದ ಬಷೀರುದ್ದೀನ್‌ ಕೆ. ಅಸ್ಲಾಂ ಪಾಷಾ, ರಜಾಕ್ ಉಸ್ತಾದ್, ಮಹ್ಮದ್ ಶಾಲಂ, ಹಾರಿಸ್ ಸಿದ್ದೀಕಿ ಸೇರಿದಂತೆ ಅನೇಕರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರೂ, ಅವರಿಗೆ ಅವಕಾಶ ಸಿಗದೆ ಇರುವುದರಿಂದ ಅಸಮಾಧಾನ ಹೆಚ್ಚಾಗಿದೆ.‌

ಇದನ್ನೂ ಓದಿದ್ದೀರಾ? ಯಾದಗಿರಿ | ಗ್ಯಾಸ್‌ ಸಿಲಿಂಡರ್ ಸಂಕಷ್ಟಕ್ಕೆ ಬಡವರ ಬದುಕು ಕಂಗಾಲು:‌ ಕೂಲಿ ಬಿಟ್ಟು ಸರದಿ ಸಾಲಿನಲ್ಲಿ ನಿಲ್ಲುವ ದುಃಸ್ಥಿತಿ

ಸರ್ಕಾರದ‌ ಕೊನೆಯ ಅವಧಿಯಾದ ಈಗ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ಕನಿಷ್ಠ ಒಬ್ಬರಿಗೆ ವಿಧಾನ ಪರಿಷತ್ ಸದಸ್ಯರಾಗಿ ಅಥವಾ ರಾಜ್ಯಮಟ್ಟದ ನಿಗಮ‌ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಬಹುದಾಗಿದೆ.

ಈ ನಡುವೆ, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಹಲವು ಅಂಶಗಳನ್ನು ಪರಿಗಣಿಸಲಾಗುತ್ತದೆ ಎಂಬುದನ್ನು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿ ಅಸಮಾಧಾನ ಶಮನಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ನೆಲಮಟ್ಟದಲ್ಲಿ ಅಸಮಾಧಾನ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ವಿಧಾನ ಪರಿಷತ್ ಸ್ಥಾನ ನೀಡುತ್ತದೆಯೇ ಅಥವಾ ಅಸಮಾಧಾನವನ್ನು ಹೇಗೆ ಪರಿಹರಿಸುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...