ರಾಯಚೂರು ಮಾರ್ಗವಾಗಿ ಮಂತ್ರಾಲಯದ ಗುರುರಾಯರ ದರ್ಶನಕ್ಕೆ ಬರುತ್ತಿದ್ದ ವೇಳೆ ಟ್ಯಾಂಕರ್ ಮತ್ತು ಪಿಕ್ಅಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಎಂಟು ಮಂದಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಚಿಕ್ಕಮಗಳೂರು ಭಾಗದ ಕಣನಾಯಕನಹಳ್ಳಿಯ ಕುಮಾರ(50), ದೀಪಿಕಾ(40), ಬೆಳ್ಳಿ(5), ಬೇಲೂರು ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಸುನಿಲ್(40), ಯಶೋಧಾ(60), ಲೋಲಾಕ್ಷಿ, ಉದ್ದೇವ ಗ್ರಾಮದ ಪುಟ್ಟಮ್ಮ(55) ಹಾಗೂ ಮೀನಾಕ್ಷಿ ಎಂದು ಗುರುತಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾಲ ಬಾಧೆಯಿಂದ ಖಿನ್ನತೆಗೊಳಗಾದ ವ್ಯಕ್ತಿ ಆತ್ಮಹತ್ಯೆ
9 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಕರ್ನೂಲ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.




