ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

Date:

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನಾದರೂ ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಿಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ ಅಪ್ಪೆ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಬುಧವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಗಿತ್ತೆ ಮಾಧವ್‌ ವಿಠಲರಾವ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಮಠಾಣ, ಬಗದಲ್, ಔರಾದ್ (ಎಸ್), ಮನ್ನಳ್ಳಿ, ಬೇಮಳಖೇಡ ಹಾಗೂ ನಿರ್ಣಾ ಸೇರಿದಂತೆ ಒಟ್ಟು ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿವೆ. ಆದರೆ, ಈ ಪೈಕಿ ಯಾವುದೇ ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ ಮೀಸಲಿಡದಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

WhatsApp Image 2026 10 10 at 7.46.08 PM 9
ಜಾಹೀರಾತು

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ದಲಿತ ಸಮುದಾಯದ ಮತದಾರರು ಗಣನೀಯ ಸಂಖ್ಯೆಯಲ್ಲಿದ್ದು, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಷ್ಟಾದರೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗುವ ಆತಂಕ ಎದುರಾಗಿದೆ ಎಂದು ಹೇಳಿದರು.

“ಸಂವಿಧಾನದ ಆಶಯದಂತೆ ಪರಿಶಿಷ್ಟ ಜಾತಿಯವರಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸುವ ಸಂದರ್ಭದಲ್ಲಿ ಆಯಾ ಕ್ಷೇತ್ರದ ಪರಿಶಿಷ್ಟ ಜಾತಿಯ ಜನಸಂಖ್ಯೆ, ಅನ್ವಯವಾಗುವ ಮೀಸಲಾತಿ ನಿಯಮಗಳು, ಹಿಂದಿನ ಚುನಾವಣೆಗಳ ಮೀಸಲಾತಿ ಹಾಗೂ ರೋಟೇಷನ್ ಪದ್ಧತಿಯನ್ನು ಸಮಗ್ರವಾಗಿ ಪರಿಶೀಲಿಸಬೇಕು” ಎಂದು ಒತ್ತಾಯಿಸಿದರು.

WhatsApp Image 2026 10 10 at 6.59.31 PM 3
ಜಾಹೀರಾತು

ನಿಯಮಗಳು ಮತ್ತು ಜನಸಂಖ್ಯೆಯ ಆಧಾರದಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನಾದರೂ ಪರಿಶಿಷ್ಟ ಜಾತಿಗೆ ಮೀಸಲಿಡಲು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಹಾಗೂ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಕಾರ್ಯದರ್ಶಿ ರಾಹುಲ್ ಭಂಗೂರೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮೀಸಲಾತಿ ಇಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮುಸ್ಲಿಂ ಸ್ಥಾನಮಾನ ನೀಡಿ ತಮಿಳುನಾಡು...