ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

Date:

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡಿಸುವ ಉದ್ದೇಶದಿಂದ ಬಾಗಲಕೋಟೆ ಜಿಲ್ಲಾ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಅ.12ರಂದು ಮಾಹಿತಿ ಹಕ್ಕು ದಿನಾಚರಣೆ ಹಾಗೂ ವೇದಿಕೆಯ 6ನೇ ವಾರ್ಷಿಕೋತ್ಸವ ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಹಣಮಂತ ಶಿಂದೆ ಹೇಳಿದರು.

- Advertisement -

ಬಾಗಲಕೋಟೆ ಮುಧೋಳ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂಬೇಡ್ಕರ್ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಮಾಹಿತಿ ಹಕ್ಕು ಕಾಯ್ದೆ ಮಹತ್ವದ ಅಸ್ತ್ರವಾಗಿದೆ. ಸರ್ಕಾರಿ ಇಲಾಖೆಗಳ ಕಾರ್ಯವೈಖರಿ, ಸಾರ್ವಜನಿಕರಿಗೆ ಲಭ್ಯವಾಗಬೇಕಾದ ಮಾಹಿತಿ ಹಾಗೂ ಆಡಳಿತ ವ್ಯವಸ್ಥೆಯ ಹೊಣೆಗಾರಿಕೆಯನ್ನು ಬಲಪಡಿಸುವಲ್ಲಿ ಈ ಕಾಯ್ದೆಯ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಲ್ಲಿ ಮಾಹಿತಿ ಹಕ್ಕಿನ ಕುರಿತು ಜಾಗೃತಿ ಮೂಡಿಸುವುದು ಮತ್ತು ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬುವುದು ಕಾರ್ಯಕ್ರಮದ ಆಶಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಾಹಿತಿ ಹಕ್ಕಿನ ಅರಿವು ಜನಸಾಮಾನ್ಯರಲ್ಲಿ ಹೆಚ್ಚಿದಾಗ ಮಾತ್ರ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕೆ ಹೆಚ್ಚಿನ ಬಲ ಸಿಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಬಾಗಲಕೋಟೆ ಜಿಲ್ಲಾ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ (ರಿ.) ಮನವಿ ಮಾಡಿದರು. ಈ ಸಂದರ್ಭದಲ್ಲಿ ಯುವ ಮುಖಂಡ ಯಲ್ಲಪ್ಪ ಹೆಗೆಡೆ, ರಾಜು ನದಾಫ್ ಇತರರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಈ ದಿನ ಸಂಪಾದಕೀಯ | ರಾಜಧಾನಿ ದೆಹಲಿಗೆ ದಿಗ್ಬಂಧನ- ಸಹಸ್ರಾರು ಯುವಜನರ ಬಂಧನ, ಇದೇನು ತುರ್ತುಪರಿಸ್ಥಿತಿಯೇ?

ದೇಶದ ರಾಜಧಾನಿಗೇ ದಿಗ್ಬಂಧನ ಹಾಕಲಾಗಿದೆ. ಇದೇನು ತುರ್ತುಪರಿಸ್ಥಿತಿಯೇ? ಯುದ್ಧದ ಭೀತಿಯೇ? ಏನೂ...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...